ಆಗಸ್ಟ್​​ನಲ್ಲಿ ಮೋದಿ ಸರ್ಕಾರದ ಪತನ; ಲಾಲು ಪ್ರಸಾದ್ ಯಾದವ್ ಸ್ಫೋಟಕ ಹೇಳಿಕೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ 3ನೇ ಬಾರಿಗೆ ಕೇಂದ್ರದಲ್ಲಿ ಸರ್ಕಾರ ರಚನೆಯಾಗಿದೆ. ಇದರ ನಡುವೆ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಆಗಸ್ಟ್‌ನಲ್ಲಿ ಮೋದಿ ಸರ್ಕಾರ ಪತನಗೊಳ್ಳಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಹಾಗೇ, ಯಾವಾಗ ಬೇಕಾದರೂ ಚುನಾವಣೆ ನಡೆಯಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಆಗಸ್ಟ್​​ನಲ್ಲಿ ಮೋದಿ ಸರ್ಕಾರದ ಪತನ; ಲಾಲು ಪ್ರಸಾದ್ ಯಾದವ್ ಸ್ಫೋಟಕ ಹೇಳಿಕೆ
ಲಾಲು ಪ್ರಸಾದ್ ಯಾದವ್
Follow us
|

Updated on: Jul 05, 2024 | 5:00 PM

ಪಾಟ್ನಾ: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಆಗಸ್ಟ್ ವೇಳೆಗೆ ಪತನವಾಗಬಹುದು ಎಂದು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ದೇಶದಲ್ಲಿ ಅವಧಿಗೂ ಮುನ್ನ ಚುನಾವಣೆಗೆ ಸಿದ್ಧರಾಗುವಂತೆ ತನ್ನ ಪಕ್ಷದ ಸದಸ್ಯರಿಗೆ ಸೂಚನೆ ನೀಡಿರುವ ಲಾಲೂ ಯಾದವ್ ಹೇಳಿಕೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.

“ಎಲ್ಲಾ ಪಕ್ಷದ ಕಾರ್ಯಕರ್ತರು ಚುನಾವಣೆಗೆ ಸಿದ್ಧರಾಗಿರಲು ನಾನು ಮನವಿ ಮಾಡುತ್ತೇನೆ. ಏಕೆಂದರೆ ಯಾವುದೇ ಸಮಯದಲ್ಲಿ ಚುನಾವಣೆಗಳು ನಡೆಯಬಹುದು. ದೆಹಲಿಯಲ್ಲಿ ಮೋದಿ ಸರ್ಕಾರವು ತುಂಬಾ ದುರ್ಬಲವಾಗಿದೆ. ಆಗಸ್ಟ್ ವೇಳೆಗೆ ಈಗಿನ ಸರ್ಕಾರ ಪತನವಾಗಬಹುದು” ಎಂದು ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.

ಇದನ್ನೂ ಓದಿ: ಲೋಕಸಭೆಯಲ್ಲಿ ಮೋದಿ ಮಾಡಿದ ಭಾಷಣದಲ್ಲಿರುವ ತಪ್ಪುಗಳನ್ನು ಉಲ್ಲೇಖಿಸಿ ಸ್ಪೀಕರ್​​ಗೆ ಪತ್ರ ಬರೆದ ಕಾಂಗ್ರೆಸ್

ತಂದೆಯ ಮಾತುಗಳನ್ನು ಪ್ರತಿಧ್ವನಿಸುತ್ತಾ, ಲಾಲು ಪ್ರಸಾದ್ ಯಾದವ್ ಅವರ ಮಗ ಮತ್ತು ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಕೂಡ ಬಿಹಾರದಲ್ಲಿ ಶೀಘ್ರ ವಿಧಾನಸಭಾ ಚುನಾವಣೆಯ ಸಾಧ್ಯತೆಯನ್ನು ಸೂಚಿಸಿದ್ದಾರೆ. ಡಿಸೆಂಬರ್ 2024 ಅಥವಾ 2025ರ ಆರಂಭದಲ್ಲಿ ಚುನಾವಣೆ ನಡೆದರೂ ಬಿಹಾರದಲ್ಲಿ ಮಹಾಘಟಬಂಧನ್ (ಇಂಡಿಯಾ ಮೈತ್ರಿ) ಸರ್ಕಾರ ರಚನೆಯಾಗುವ ಸಾಧ್ಯತೆಯನ್ನು ಅವರು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ: ಕೀರ್ ಸ್ಟಾರ್ಮರ್‌ ಗೆಲುವಿಗೆ ನರೇಂದ್ರ ಮೋದಿ ಅಭಿನಂದನೆ; ರಿಷಿ ಸುನಕ್‌ಗೆ ಥ್ಯಾಂಕ್ಸ್​ ಎಂದ ಪ್ರಧಾನಿ

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ 292 ಸ್ಥಾನಗಳನ್ನು ಗೆದ್ದಿತ್ತು. ಆಪ್ ಮೈತ್ರಿಕೂಟ – ಇಂಡಿಯಾ ಬಣ 232 ಸ್ಥಾನಗಳನ್ನು ಗಳಿಸಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ