AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇವು ಹಗರಣದಲ್ಲಿ ಲಾಲು ಯಾದವ್‌ಗೆ ರಿಲೀಫ್: ಜಾಮೀನು ರದ್ದು ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ

ಮೇವು ಹಗರಣದಲ್ಲಿ ಲಾಲು ಪ್ರಸಾದ್ ಯಾದವ್‌ಗೆ ಸುಪ್ರೀಂ ಕೋರ್ಟ್ ದೊಡ್ಡ ರಿಲೀಫ್ ನೀಡಿದೆ. ಜಾಮೀನು ರದ್ದುಗೊಳಿಸಲು ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ವಜಾಗೊಳಿಸಿದೆ. ನ್ಯಾಯಮೂರ್ತಿಗಳ ದ್ವಿಸದಸ್ಯ ಪೀಠವು ಲಾಲು ಅವರ ಜಾಮೀನು ಆದೇಶದಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿತು, ಹೈಕೋರ್ಟ್ ಆದೇಶ ಸರಿಯಾಗಿದೆ ಎಂದಿತು. ಈ ತೀರ್ಪು ಆರ್‌ಜೆಡಿ ಪಕ್ಷಕ್ಕೆ ಮತ್ತು ಲಾಲು ಅವರ ಆರೋಗ್ಯದ ದೃಷ್ಟಿಯಿಂದ ಪ್ರಮುಖವಾಗಿದೆ, ಬಿಹಾರ ಉಪಚುನಾವಣೆಗೆ ಬೂಸ್ಟರ್ ನೀಡಿದೆ.

ಮೇವು ಹಗರಣದಲ್ಲಿ ಲಾಲು ಯಾದವ್‌ಗೆ ರಿಲೀಫ್: ಜಾಮೀನು ರದ್ದು ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ
ಲಾಲು ಪ್ರಸಾದ್
ನಯನಾ ರಾಜೀವ್
|

Updated on: Jul 14, 2026 | 12:09 PM

Share

ನವದೆಹಲಿ, ಜುಲೈ 14: ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್(Lalu Prasad Yadav) ಅವರಿಗೆ ಸಿಕ್ಕಿದ್ದ ಜಾಮೀನನ್ನು ರದ್ದುಗೊಳಿಸುವಂತೆ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ನಿರಾಕರಿಸಿದೆ. ಈ ಹಿಂದೆ ಲಾಲು ಅವರ ಶಿಕ್ಷೆಯನ್ನು ಅಮಾನತುಗೊಳಿಸಿ ಜಾಮೀನು ನೀಡಿದ್ದ ಆದೇಶದ ವಿರುದ್ಧ ಕೇಂದ್ರೀಯ ತನಿಖಾ ದಳ (CBI) ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಸಂಪೂರ್ಣವಾಗಿ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್ ಮತ್ತು ಪಿ.ಬಿ. ವರಾಳೆ ಅವರಿದ್ದ ದ್ವಿಸದಸ್ಯ ಪೀಠವು ಈ ಮಹತ್ವದ ತೀರ್ಪು ನೀಡಿದೆ. 2019 ರಿಂದ ಜಾರಿಯಲ್ಲಿರುವ ಹೈಕೋರ್ಟ್‌ನ ಜಾಮೀನು ಆದೇಶದಲ್ಲಿ ಹಸ್ತಕ್ಷೇಪ ಮಾಡಲು ನಾವು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ ಪೀಠವು, ಈ ಮೇಲ್ಮನವಿಯು 2018ರದ್ದಾಗಿದೆ. ಹೀಗಾಗಿ ಪ್ರಕರಣವನ್ನು ಇನ್ನು ಎಳೆಯುವ ಬದಲು ಮುಂದಿನ 6 ತಿಂಗಳ ಒಳಗಾಗಿ ಈ ಹಗರಣದ ಮುಖ್ಯ ಮೇಲ್ಮನವಿಗಳ ವಿಚಾರಣೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಎಂದು ಜಾರ್ಖಂಡ್ ಹೈಕೋರ್ಟ್‌ಗೆ ಗಡುವು ವಿಧಿಸಿದೆ.

ಕೋರ್ಟ್‌ನಲ್ಲಿ ನಡೆದ ಬಿರುಸಿನ ‘ಕಾನೂನು ಸಮರ’ ವಿಚಾರಣೆಯ ವೇಳೆ ಸಿಬಿಐ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ (ASG) ಎಸ್.ವಿ. ರಾಜು ಅವರು ಲಾಲು ಅವರ ಜಾಮೀನನ್ನು ತೀವ್ರವಾಗಿ ವಿರೋಧಿಸಿದರು.ಲಾಲು ಯಾದವ್ ಅವರು ತಮ್ಮ ಅಧಿಕೃತ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ನಕಲಿ ದಾಖಲೆಗಳ ಮೂಲಕ ದಿಯೋಗಢ ಖಜಾನೆಯಿಂದ ಹಣ ಲೂಟಿ ಮಾಡಿದ ಪ್ರಮುಖ ಸಂಚುಕೋರ. ಅವರು ಜೈಲು ಶಿಕ್ಷೆಯ ಶೇ. 50 ರಷ್ಟು ಭಾಗವನ್ನು ಪೂರ್ಣಗೊಳಿಸಿದ್ದಾರೆ ಎಂಬ ತಪ್ಪು ಲೆಕ್ಕಾಚಾರದ ಮೇಲೆ ಹೈಕೋರ್ಟ್ ಜಾಮೀನು ನೀಡಿದೆ ಎಂದಿದ್ದಾರೆ.

ಮತ್ತಷ್ಟು ಓದಿ: Lalu Prasad Yadav: ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ; ಏಮ್ಸ್​ ಆಸ್ಪತ್ರೆಗೆ ಶಿಫ್ಟ್​

ಇದಕ್ಕೆ ತೀಕ್ಷ್ಣವಾಗಿ ಕೌಂಟರ್ ನೀಡಿದ ಲಾಲು ಯಾದವ್ ಪರ ಹಿರಿಯ ವಕೀಲ ಕಪಿಲ್ ಸಿಬಲ್, “ಸಿಬಿಐ ಮಂಡಿಸುತ್ತಿರುವ ಈ ವಾದವೇ ಸಂಪೂರ್ಣವಾಗಿ ತಪ್ಪು. ಹೈಕೋರ್ಟ್ ನ್ಯಾಯಾಧೀಶರು ಕಾನೂನಿನ ಚೌಕಟ್ಟಿನಲ್ಲೇ ತಮ್ಮ ವಿವೇಚನಾ ಅಧಿಕಾರವನ್ನು ಬಳಸಿ ಏಕರೂಪದ ಮಾನದಂಡದ ಆಧಾರದ ಮೇಲೆ ಜಾಮೀನು ಮಂಜೂರು ಮಾಡಿದ್ದಾರೆ. ಇದರಲ್ಲಿ ಯಾವುದೇ ನಿಯಮ ಉಲ್ಲಂಘನೆಯಾಗಿಲ್ಲ” ಎಂದು ಪ್ರತಿಪಾದಿಸಿದರು. ಇವರ ವಾದವನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿತು.

ಏನಿದು ದಿಯೋಗಢ ಖಜಾನೆ ಮೇವು ಹಗರಣ? ಈ ಇಡೀ ವಿವಾದವು 1991 ಮತ್ತು 1994 ರ ನಡುವೆ ನಡೆದ ಹಳೆಯ ಹಗರಣವಾಗಿದೆ.

89 ಲಕ್ಷ ರೂ. ವಂಚನೆ: ಲಾಲು ಪ್ರಸಾದ್ ಯಾದವ್ ಬಿಹಾರದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ದಿಯೋಗಢ ಜಿಲ್ಲಾ ಖಜಾನೆಯಿಂದ ನಕಲಿ ಹಂಚಿಕೆ ಪತ್ರಗಳನ್ನು ಸೃಷ್ಟಿಸಿ ಕಾನೂನುಬಾಹಿರವಾಗಿ 89 ಲಕ್ಷ ರೂಪಾಯಿ ಸರ್ಕಾರಿ ಹಣವನ್ನು ಲೂಟಿ ಮಾಡಲಾಗಿತ್ತು.

7 ವರ್ಷಗಳ ಜೈಲು ಶಿಕ್ಷೆ: ಡಿಸೆಂಬರ್ 2017 ರಲ್ಲಿ ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯವು ಭ್ರಷ್ಟಾಚಾರ ತಡೆ ಕಾಯ್ದೆ ಹಾಗೂ ವಂಚನೆ (IPC 420, 120B) ಆರೋಪದಡಿ ಲಾಲು ಯಾದವ್ ಅವರನ್ನು ತಪ್ಪಿತಸ್ಥರೆಂದು ಘೋಷಿಸಿ, ಒಟ್ಟು 7 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿತ್ತು.

ಆರೋಗ್ಯದ ಹಿನ್ನೆಲೆ: 78 ವರ್ಷದ ಹಿರಿಯ ನಾಯಕ ಲಾಲು ಪ್ರಸಾದ್ ಯಾದವ್ ಕಳೆದ ಕೆಲವು ವರ್ಷಗಳಿಂದ ತೀವ್ರ ಕಿಡ್ನಿ ವೈಫಲ್ಯ, ಮಧುಮೇಹ ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಇತ್ತೀಚೆಗೆ ಅವರು ಸಿಂಗಾಪುರದಲ್ಲಿ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಯನ್ನೂ ಮಾಡಿಸಿಕೊಂಡಿದ್ದರು. ಒಂದು ವೇಳೆ ಇಂದು ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿದ್ದರೆ ಅವರು ಮತ್ತೆ ರಾಂಚಿಯ ಬಿರ್ಸಾ ಮುಂಡಾ ಜೈಲು ಸೇರಬೇಕಾಗುತ್ತಿತ್ತು, ಇದು ಅವರ ಜೀವಕ್ಕೆ ಅಪಾಯ ತರುತ್ತಿತ್ತು ಎಂದು ಆರ್‌ಜೆಡಿ ಕಾರ್ಯಕರ್ತರು ಆತಂಕಗೊಂಡಿದ್ದರು.

ಬಿಹಾರ ಉಪಚುನಾವಣೆಗೆ ಬೂಸ್ಟರ್ ಡೋಸ್: ಪ್ರಸ್ತುತ ಬಿಹಾರದ ಬಂಕಿಪುರ ಸೇರಿದಂತೆ ವಿವಿಧ ಕ್ಷೇತ್ರಗಳ ಉಪಚುನಾವಣೆಯ ಕಣ ರಂಗೇರಿದೆ. ಪ್ರಶಾಂತ್ ಕಿಶೋರ್ ಅವರ ‘ಜನ ಸುರಾಜ್’ ಮತ್ತು ಬಿಜೆಪಿಯ ಮೈತ್ರಿಕೂಟದ ಭಾರಿ ಸವಾಲಿನ ನಡುವೆ ಆರ್‌ಜೆಡಿ ಹೋರಾಡುತ್ತಿದೆ. ಇಂತಹ ಸಮಯದಲ್ಲಿ ಪಕ್ಷದ ಸುಪ್ರೀಂ ಲೀಡರ್ ಜೈಲು ಪಾಲಾಗುವುದರಿಂದ ಪಾರಾಗಿ ಹೊರಗಿರುವುದು ತೇಜಸ್ವಿ ಯಾದವ್ ನೇತೃತ್ವದ ಆರ್‌ಜೆಡಿ ಮುಂಚೂಣಿಗೆ ಆನೆಬಲ ತಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ