ಉದ್ಯೋಗಕ್ಕಾಗಿ ಭೂ ಹಗರಣ: ಲಾಲು ಪ್ರಸಾದ್ ಯಾದವ್ ಪತ್ನಿ, ಇಬ್ಬರು ಪುತ್ರಿಯರಿಗೆ ಮಧ್ಯಂತರ ಜಾಮೀನು

Land for employment scam: ಉದ್ಯೋಗಕ್ಕಾಗಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕೋರ್ಟ್​​ ಕಳೆದು ತಿಂಗಳು ಲಾಲು ಪ್ರಸಾದ್ ಯಾದವ್ ಪತ್ನಿ ರಾಬ್ರಿ ದೇವಿ ಸೇರಿದಂತೆ ಇಬ್ಬರು ಪುತ್ರಿಯರಾದ ಮಿಸಾ ಭಾರತಿ ಮತ್ತು ಹೇಮಾ ಯಾದವ್‌ ಅವರಿಗೆ ಸಮನ್ಸ್​​​​ ನೀಡಿತ್ತು. ಇದೀಗ ಮುಂದಿನ ವಿಚಾರಣೆ ನಡೆಯುವರೆಗೆ ಮೂವರಿಗೆ ಮಧ್ಯಂತರ ಜಾಮೀನು ನೀಡಿದೆ.

ಉದ್ಯೋಗಕ್ಕಾಗಿ ಭೂ ಹಗರಣ: ಲಾಲು ಪ್ರಸಾದ್ ಯಾದವ್ ಪತ್ನಿ, ಇಬ್ಬರು ಪುತ್ರಿಯರಿಗೆ ಮಧ್ಯಂತರ ಜಾಮೀನು
Follow us
|

Updated on:Feb 09, 2024 | 11:48 AM

ದೆಹಲಿ, ಫೆ.9: ಉದ್ಯೋಗಕ್ಕಾಗಿ ಭೂಮಿ ಹಗರಣ (Land for employment scam) ಪ್ರಕರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ (Lalu Prasad Yadav) ಯಾದವ್ ಅವರ ಪತ್ನಿ ರಾಬ್ರಿ ದೇವಿ ಮತ್ತು ಇಬ್ಬರು ಪುತ್ರಿಯರಾದ ಮಿಸಾ ಭಾರತಿ ಮತ್ತು ಹೇಮಾ ಯಾದವ್‌ಗೆ ದೆಹಲಿ ನ್ಯಾಯಾಲಯವು ಮುಂದಿನ ವಿಚಾರಣೆಯ ದಿನಾಂಕದವರೆಗೆ ಇಂದು (ಫೆ.9) ಮಧ್ಯಂತರ ಜಾಮೀನು ನೀಡಿದೆ. ಕಳೆದ ತಿಂಗಳು, ರೈಲ್ವೇ ಜಮೀನು-ಉದ್ಯೋಗಕ್ಕಾಗಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಜಾರಿ ನಿರ್ದೇಶನಾಲಯ ದೆಹಲಿ ಕೋರ್ಟ್​​ಗೆ ಚಾರ್ಜ್ ಶೀಟ್‌ನ ಸಲ್ಲಿಸಿತ್ತು. ನಂತರದಲ್ಲಿ ಮೂವರಿಗೂ ನ್ಯಾಯಾಲಯವು ಸಮನ್ಸ್ ನೀಡಿತ್ತು.

ಈ ಪ್ರಕರಣದ ವಿಚಾರಣೆಯನ್ನು ಫೆ.28ರಂದು ನಡೆಸಲಾಗುವುದು ಎಂದು ಹೇಳಿದೆ. ಇದಕ್ಕೂ ಮುನ್ನ ಪಿಎಂಎಲ್‌ಎ ನ್ಯಾಯಾಲಯವು ಅಮಿತ್ ಕಟ್ಯಾಲ್, ರಾಬ್ರಿ ದೇವಿ, ಮಿಶಾ ಭಾರತಿ, ಹೇಮಾ ಯಾದವ್ ಮತ್ತು ಹೃದಯಾನಂದ್ ಚೌಧರಿ ಫೆಬ್ರವರಿ 9 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿತ್ತು. ಇದರಂತೆ ರಾಬ್ರಿ, ಮಿಸಾ, ಹೇಮಾ ಅವರು ನ್ಯಾಯಲಯಕ್ಕೆ ಹಾಜರಾಗಿದ್ದರು. ಆದರೆ ಅಮಿತ್ ಕಟ್ಯಾಲ್ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹಾಜರಾಗಿದ್ದರು.

ಇಡಿ ಜನವರಿ 1, 2024 ರಂದು ಅಮಿತ್ ಕತ್ಯಾಲ್, ರಾಬ್ರಿ ದೇವಿ, ಮಿಶಾ ಭಾರತಿ, ಹೇಮಾ ಯಾದವ್, ಹೃದಯಾನಂದ್ ಚೌಧರಿ ಮತ್ತು ಎರಡು ಕಂಪನಿಗಳ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ), 2002 ರ ನಿಬಂಧನೆಗಳ ಅಡಿಯಲ್ಲಿ ಪ್ರಾಸಿಕ್ಯೂಷನ್ ದೂರು (ಪಿಸಿ) ದಾಖಲಿಸಿದೆ. ಈಗಾಗಲೇ ಎಕೆ ಇನ್ಫೋಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎಬಿ ಎಕ್ಸ್‌ಪೋರ್ಟ್ಸ್ ಪ್ರೈ. Ltd. ಪ್ರಕಣರಣ ನವದೆಹಲಿಯ ವಿಶೇಷ ನ್ಯಾಯಾಲಯದ (PMLA) ಮುಂದೆ ಇದೆ.

ಇದನ್ನೂ ಓದಿ: ಉದ್ಯೋಗಕ್ಕಾಗಿ ಭೂಮಿ ಪ್ರಕರಣ: ರಾಬ್ರಿ ದೇವಿ, ಮಗಳು ಮಿಸಾ ಭಾರತಿಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

2004-2009ರ ಅವಧಿಯಲ್ಲಿ ಭಾರತೀಯ ರೈಲ್ವೇಯಲ್ಲಿ ಗ್ರೂಪ್ ಡಿ ಬದಲಿ ನೇಮಕಾತಿಗಾಗಿ ಆಗಿನ ರೈಲ್ವೆ ಸಚಿವರಾಗಿದ್ದ ಲಾಲು ಯಾದವ್ ಅವರು ಭ್ರಷ್ಟಾಚಾರ ಮಾಡಿದ್ದಾರೆ ಎಂದು ಆರೋಪಿಸಿ, ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿದ ಎಫ್‌ಐಆರ್ ಆಧರಿಸಿ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ಎಫ್‌ಐಆರ್‌ನಲ್ಲಿ ತಿಳಿಸಿರುವ ಪ್ರಕಾರ ಭಾರತೀಯ ರೈಲ್ವೇಯಲ್ಲಿ ಉದ್ಯೋಗಕ್ಕೆ ಬದಲಾಗಿ ಭೂಮಿಯನ್ನು ಲಂಚ ರೂಪದಲ್ಲಿ ನೀಡುವ ಬಗ್ಗೆ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ. ಈ ಬಗ್ಗೆ ಸಿಬಿಐ ಕೂಡ ಚಾರ್ಜ್ ಶೀಟ್ ಸಲ್ಲಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:16 am, Fri, 9 February 24

ಹಬ್ಬ ಮುಗಿಯುತ್ತಿದ್ದಂತೆಯೇ ಗಣೇಶನಿಗೆ ಹೀಗಾ ಅವಮಾನ ಮಾಡುವುದು..!
ಹಬ್ಬ ಮುಗಿಯುತ್ತಿದ್ದಂತೆಯೇ ಗಣೇಶನಿಗೆ ಹೀಗಾ ಅವಮಾನ ಮಾಡುವುದು..!
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್
‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್
ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು
ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು