AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯೋಗಕ್ಕಾಗಿ ಭೂಮಿ ಪ್ರಕರಣ: ಮಾರ್ಚ್ 25 ರಂದು ಸಿಬಿಐ ಮುಂದೆ ಹಾಜರಾಗುವಂತೆ ತೇಜಸ್ವಿ ಯಾದವ್​​ಗೆ ದೆಹಲಿ ಹೈಕೋರ್ಟ್ ಸೂಚನೆ

Land for jobs case: 2004 ಮತ್ತು 2009 ರ ನಡುವೆ ರೈಲ್ವೆ ಸಚಿವರಾಗಿದ್ದಾಗ ಲಾಲು ಪ್ರಸಾದ್ ಅವರ ಕುಟುಂಬಕ್ಕೆ ಉಡುಗೊರೆಯಾಗಿ ಅಥವಾ ಮಾರಾಟ ಮಾಡಿದ ಜಮೀನುಗಳಿಗೆ ಪ್ರತಿಯಾಗಿ ರೈಲ್ವೆಯಲ್ಲಿ ಅಕ್ರಮ ನೇಮಕಾತಿಗಳನ್ನು ಮಾಡಲಾಗಿದೆ ಎಂದು ಸಿಬಿಐ ತನ್ನ ಚಾರ್ಜ್‌ಶೀಟ್‌ನಲ್ಲಿ ಆರೋಪಿಸಿದೆ.

ಉದ್ಯೋಗಕ್ಕಾಗಿ ಭೂಮಿ ಪ್ರಕರಣ: ಮಾರ್ಚ್ 25 ರಂದು ಸಿಬಿಐ ಮುಂದೆ ಹಾಜರಾಗುವಂತೆ ತೇಜಸ್ವಿ ಯಾದವ್​​ಗೆ ದೆಹಲಿ ಹೈಕೋರ್ಟ್ ಸೂಚನೆ
ತೇಜಸ್ವಿ ಯಾದವ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Mar 16, 2023 | 1:24 PM

Share

ಉದ್ಯೋಗಕ್ಕಾಗಿ ಭೂಮಿ ಪ್ರಕರಣಕ್ಕೆ (Land for jobs case) ಸಂಬಂಧಿಸಿದಂತೆ ದೆಹಲಿಯಲ್ಲಿ ಮಾರ್ಚ್ 25 ರಂದು ಸಿಬಿಐ (CBI) ಮುಂದೆ ಹಾಜರಾಗುವಂತೆ ದೆಹಲಿ ಹೈಕೋರ್ಟ್(Delhi high court) ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ (Tejashwi Yadav) ಅವರಿಗೆ ಸೂಚಿಸಿದೆ. ಸಿಬಿಐ ಪರ ವಕೀಲ ಡಿಪಿ ಸಿಂಗ್ ನ್ಯಾಯಾಲಯದ ಮುಂದೆ ಯಾದವ್ ಅವರು ಈ ತಿಂಗಳು ಖುದ್ದಾಗಿ ಹಾಜರಾಗಬಹುದು. ಸಿಬಿಐ ಅವರನ್ನು ಬಂಧಿಸಬಾರದು ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಮಾರ್ಚ್ 25 ರಂದು ಹಾಜರಾಗುವುದಾಗಿ ಬಿಹಾರ ಉಪ ಮುಖ್ಯಮಂತ್ರಿ ವಕೀಲರು ತಿಳಿಸಿದ್ದಾರೆ. ಬುಧವಾರ, ರಾಷ್ಟ್ರೀಯ ಜನತಾ ದಳದ ನಾಯಕ ದೆಹಲಿ ಹೈಕೋರ್ಟ್‌ಗೆ ಕೇಂದ್ರ ಏಜೆನ್ಸಿಯ ಸಮನ್ಸ್ ಅನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ತನ್ನ ತಂದೆ ಲಾಲು ಪ್ರಸಾದ್ ಮತ್ತು ಇತರ ಅಧಿಕಾರಿಗಳ ವಿರುದ್ಧವಿರುವ ಆಪಾದಿತ ಅಪರಾಧಗಳು ಎಸಗಲಾಗಿದೆ ಎಂದು ಗೊತ್ತಾಗುವ ಹೊತ್ತಲ್ಲಿ ತಾನು ಅಪ್ರಾಪ್ತನಾಗಿದ್ದೆ ಎಂದು ಯಾದವ್ ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ. ನವೆಂಬರ್ 2007 ರಲ್ಲಿ ತೇಜಸ್ವಿ ಯಾದವ್​​ಗೆ 18 ವರ್ಷ ತುಂಬಿತ್ತು.

ಈ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ತನ್ನ ತಾಯಿ ರಾಬ್ರಿ ದೇವಿ, ತಂದೆ ಲಾಲು ಪ್ರಸಾದ್, ಸಹೋದರಿ ಮಿಸಾ ಭಾರತಿ ಮತ್ತು ಇತರರಿಗೆ ಜಾಮೀನು ನೀಡಿದ ದಿನವೇ ಬಿಹಾರ ಉಪ ಮುಖ್ಯಮಂತ್ರಿಯ ಅರ್ಜಿಯು ಹೈಕೋರ್ಟ್‌ಗೆ ಬಂದಿದೆ.

2004 ಮತ್ತು 2009 ರ ನಡುವೆ ರೈಲ್ವೆ ಸಚಿವರಾಗಿದ್ದಾಗ ಲಾಲು ಪ್ರಸಾದ್ ಅವರ ಕುಟುಂಬಕ್ಕೆ ಉಡುಗೊರೆಯಾಗಿ ಅಥವಾ ಮಾರಾಟ ಮಾಡಿದ ಜಮೀನುಗಳಿಗೆ ಪ್ರತಿಯಾಗಿ ರೈಲ್ವೆಯಲ್ಲಿ ಅಕ್ರಮ ನೇಮಕಾತಿಗಳನ್ನು ಮಾಡಲಾಗಿದೆ ಎಂದು ಸಿಬಿಐ ತನ್ನ ಚಾರ್ಜ್‌ಶೀಟ್‌ನಲ್ಲಿ ಆರೋಪಿಸಿದೆ.

ಇದನ್ನೂ ಓದಿ: Manish Sisodia: ಮನೀಶ್‌ ಸಿಸೋಡಿಯಾ 7 ದಿನ ಜಾರಿ ನಿರ್ದೇಶನಾಲಯದ ವಶಕ್ಕೆ

ಅಭ್ಯರ್ಥಿಗಳು ನೇರವಾಗಿ ಅಥವಾ ನಿಕಟ ಸಂಬಂಧಿಗಳು ಮತ್ತು ಕುಟುಂಬದ ಸದಸ್ಯರ ಮೂಲಕ ತಮ್ಮ ಭೂಮಿಯನ್ನು ಆಗಿನ ರೈಲ್ವೆ ಸಚಿವರ ಕುಟುಂಬ ಸದಸ್ಯರಿಗೆ ಹೆಚ್ಚಿನ ರಿಯಾಯಿತಿ ದರದಲ್ಲಿ ಮಾರಾಟ ಮಾಡಿದ್ದಾರೆ ಎಂದು ಆರೋಪಪಟ್ಟಿಯಲ್ಲಿ ಆರೋಪಿಸಲಾಗಿದೆ. ಕಳೆದ ವರ್ಷ ಅಕ್ಟೋಬರ್ 10 ರಂದು 16 ಆರೋಪಿಗಳ ವಿರುದ್ಧ ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರದ ಅಪರಾಧಗಳಿಗಾಗಿ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:02 pm, Thu, 16 March 23

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್