Land For Jobs Case: ಬಿಜೆಪಿ ಇಡಿ ಮುಖಾಂತರ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದೆ: ಬಿಜೆಪಿ ವಿರುದ್ಧ ಲಾಲು ಪ್ರಸಾದ್​ ಯಾದವ್ ಆರೋಪ

ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ಜಾರಿ ನಿರ್ದೇಶನಾಲಯ ಮುಖಾಂತರ ನನ್ನ ಮಗಳು, ಮೊಮ್ಮಗಳು ಮತ್ತು ಗರ್ಭಣಿಯಾದ ನನ್ನ ಸೊಸೆಗೆ ಕಿರುಕುಳ ನೀಡುತ್ತಿದೆ ಎಂದು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್​ ಯಾದವ್​ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

Land For Jobs Case: ಬಿಜೆಪಿ ಇಡಿ ಮುಖಾಂತರ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದೆ: ಬಿಜೆಪಿ ವಿರುದ್ಧ ಲಾಲು ಪ್ರಸಾದ್​ ಯಾದವ್ ಆರೋಪ
ಬಿಹಾರ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್​ ಯಾದವ್
Follow us
ವಿವೇಕ ಬಿರಾದಾರ
|

Updated on:Mar 11, 2023 | 1:08 PM

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ (Land For Jobs Case) ಸಂಬಂಧಿಸಿದಂತೆ, ಬಿಜೆಪಿ (BJP) ಜಾರಿ ನಿರ್ದೇಶನಾಲಯ (ED) ಮುಖಾಂತರ ನನ್ನ ಮಗಳು, ಮೊಮ್ಮಗಳು ಮತ್ತು ಗರ್ಭಣಿಯಾದ ನನ್ನ ಸೊಸೆಗೆ ಕಿರುಕುಳ ನೀಡುತ್ತಿದೆ ಎಂದು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್​ ಯಾದವ್ (Lalu Prasad Yadav)​ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. “ಬಿಜೆಪಿ ದ್ವೇಷದಿಂದ ಆಧಾರ ರಹಿತವಾದ ಆರೋಪ ಮಾಡುತ್ತಿದೆ. ನಾನು ತುರ್ತು ಪರಿಸ್ಥಿತಿಯ ಕರಾಳದಿನಗಳನ್ನು ನೋಡಿ, ಎದುರಿಸಿ ಬಂದಿದ್ದೇನೆ. ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದ್ದು, ನಿನ್ನೆ (ಮಾ.10) ರಂದು ಬಿಜೆಪಿಯ ಇಡಿ ಅಧಿಕಾರಿಗಳು ನನ್ನ ಹೆಣ್ಣುಮಕ್ಕಳು, ಪುಟ್ಟ ಮೊಮ್ಮಗಳು ಮತ್ತು ಗರ್ಭಿಣಿ ಸೊಸೆಯನ್ನು 15 ಗಂಟೆಗಳ ಕಾಲ ವಿಚಾರಣೆ ನಡೆಸಿದರು. ಇದಕ್ಕೆ ನಾನು ಬಗ್ಗುವುದಿಲ್ಲ. ಬಿಜೆಪಿ ಇಷ್ಟು ಕೆಳಮಟ್ಟದ ರಾಜಕಾರಣ ಮಾಡಬಾರದು” ಎಂದು ಟ್ವೀಟ್ ಮಾಡಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮತ್ತು ಬಿಜೆಪಿ (BJP) ವಿರುದ್ಧ ನಾನು ಸೈದ್ಧಾಂತಿಕ ಹೋರಾಟವನ್ನು ಮುಂದುವರೆಸುತ್ತೇನೆ ಎಂದು ಹೇಳಿದರು. “ನಾನು ಅವರ ಮುಂದೆ ಎಂದಿಗೂ ತಲೆಬಾಗಲ್ಲ. ನನ್ನ ಕುಟುಂಬ ಮತ್ತು ಪಕ್ಷದ ಯಾರೂ ನಿಮ್ಮ ರಾಜಕೀಯದ ಮುಂದೆ ತಲೆಬಾಗುವುದಿಲ್ಲ” ಎಂದು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ (ಮಾ.10) ರಂದು ಇಡಿ ಅಧಿಕಾರಿಗಳು ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್​ ಅವರ ದೆಹಲಿ ಮೆನೆಯಲ್ಲಿ ಶೋಧ ನಡೆಸಿದ್ದರು. ಮಾರ್ಚ್​​ 6 ರಂದು ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ದೇವಿಯವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಶನಿವಾರ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ತೇಜಸ್ವಿ ಯಾದವ್‌ಗೆ ಸಮನ್ಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಮನೆ ಮೇಲೆ ಇ.ಡಿ ದಾಳಿ

ನಿನ್ನೆ (ಮಾ.10) ರಂದು ಹಗರಣಕ್ಕೆ ಸಂಬಂಧಿಸಿದಂತೆ ಲಾಲು ಪ್ರಸಾದ್ ಯಾದವ್ ಅವರ ಮೂವರು ಪುತ್ರಿಯರು ಹಾಗೂ ಆರ್‌ಜೆಡಿ ನಾಯಕರ ಸ್ಥಳಗಳು ಸೇರಿದಂತೆ ಅನೇಕ ಕಡೆಗಳಲ್ಲಿ ಇಡಿ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದರು. ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿಹಾರದ ಪಟ್ನಾ, ದೆಹಲಿ, ರಾಂಚಿ, ಮುಂಬೈ ಸೇರಿದಂತೆ ಅನೇಕ ಕಡೆಗಳಲ್ಲಿ ಇಡಿ ಶೋಧ ಕಾರ್ಯ ನಡೆಸಿತ್ತು.

ಏನಿದು ಉದ್ಯೋಗಕ್ಕಾಗಿ ಭೂಮಿ ಹಗರಣ

ಹೆಸರೇ ಹೇಳುವಂತೆ, ಸರಕಾರಿ ಉದ್ಯೋಗ ಪಡೆಯಲು ಬಯಸುವವರಿಂದ ಭೂಮಿ ಪಡೆದು ಅವರಿಗೆ ಉದ್ಯೋಗ ನೀಡುವಂತಹ ಹಗರಣ ಇದಾಗಿದೆ. 2004 ರಿಂದ 2009ರ ಕೇಂದ್ರ ಕಾಂಗ್ರೆಸ್‌ ಸರಕಾರದಲ್ಲಿ ಲಾಲು ಪ್ರಸಾದ್‌ ಯಾದವ್‌ ಅವರು ರೈಲ್ವೆ ಖಾತೆ ಸಚಿವರಾಗಿದ್ದರು. ಈ ವೇಳೆ ಬಿಹಾರದ ಅನೇಕರಿಗೆ ರೈಲ್ವೆ ಉದ್ಯೋಗ ನೀಡಲು ಲಾಲು ಮತ್ತು ಅವರ ಕುಟುಂಬದವರು ಈ ಹಗರಣ ನಡೆಸಿದ್ದರು ಎಂಬ ಆರೋಪವಿದೆ.

ಉದ್ಯೋಗದ ಸಲುವಾಗಿ ಜನರಿಂದ ಕಡಿಮೆ ದರದಲ್ಲಿ ಇವರು ಭೂಮಿಗಳನ್ನು ಖರೀದಿ ಮಾಡುತ್ತಿದ್ದರು ಎಂಬ ಆರೋಪವಿದೆ. ಈ ಮೂಲಕ ಲಾಲು ಮತ್ತು ಕುಟುಂಬವು ಸಾಕಷ್ಟು ಆಸ್ತಿ ಮಾಡಿದೆ ಎನ್ನಲಾಗುತ್ತಿದೆ. ಲಾಲು ಪ್ರಸಾದ್‌ ಯಾದವ್‌ ಮಾತ್ರವಲ್ಲದೆ ಅವರ ಪುತ್ರ ತೇಜಸ್ವಿ ಯಾದವ್‌, ಹೆಣ್ಣು ಮಕ್ಕಳಾದ ಹೇಮಾ ಮತ್ತು ಮಿಸಾ ಅವರನ್ನೂ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:07 pm, Sat, 11 March 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್