AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯೋಗಕ್ಕಾಗಿ ಭೂಮಿ ಹಗರಣ; ತೇಜಸ್ವಿ ಯಾದವ್ ವಿರುದ್ಧ ಸಿಬಿಐಗೆ ಪ್ರಬಲ ಸಾಕ್ಷಿ ಲಭ್ಯ; ಡಿಸಿಎಂಗೆ ಬಂಧನ ಭೀತಿ

ರೈಲ್ವೆ ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ 14 ವರ್ಷದ ಭೂಮಿಯಲ್ಲಿ ಸಿಬಿಐ ತನಿಖೆ ಎದುರಿಸುತ್ತಿರುವ ತೇಜಸ್ವಿ ಯಾದವ್ ವಿರುದ್ಧದ ಸಾಕ್ಷ್ಯ ಬಹಳ ಪ್ರಬಲವಾಗಿದೆ ಎಂಬ ಕಾರಣಕ್ಕೆ ಅವರನ್ನು ಸಿಬಿಐ ಬಂಧಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಉದ್ಯೋಗಕ್ಕಾಗಿ ಭೂಮಿ ಹಗರಣ; ತೇಜಸ್ವಿ ಯಾದವ್ ವಿರುದ್ಧ ಸಿಬಿಐಗೆ ಪ್ರಬಲ ಸಾಕ್ಷಿ ಲಭ್ಯ; ಡಿಸಿಎಂಗೆ ಬಂಧನ ಭೀತಿ
ತೇಜಸ್ವಿ ಯಾದವ್Image Credit source: NDTV
TV9 Web
| Updated By: ಸುಷ್ಮಾ ಚಕ್ರೆ|

Updated on: Aug 25, 2022 | 8:11 PM

Share

ಪಾಟ್ನಾ: ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ (Land for jobs case) ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಆಗಸ್ಟ್ 24ರಂದು ಬಿಹಾರದ ಉಪ ಮುಖ್ಯಮಂತ್ರಿ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ಗೆ ಸಂಬಂಧಿಸಿದ ಗುರುಗ್ರಾಮ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಮಾಲ್ ಸೇರಿದಂತೆ 27 ಸ್ಥಳಗಳಲ್ಲಿ ಶೋಧ ನಡೆಸಿತ್ತು. ಆದರೆ ಆ ಮಾಲ್‌ನಲ್ಲಿನ ಪಾಲನ್ನು ತೇಜಸ್ವಿ ಯಾದವ್ ನಿರಾಕರಿಸಿದ್ದರು. ರೈಲ್ವೆ ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ 14 ವರ್ಷದ ಭೂಮಿಯಲ್ಲಿ ಸಿಬಿಐ ತನಿಖೆಯ ಬಿಸಿ ಎದುರಿಸುತ್ತಿರುವ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ವಿರುದ್ಧದ ಸಾಕ್ಷ್ಯವು ಬಹಳ ಪ್ರಬಲವಾಗಿದೆ ಎಂಬ ಕಾರಣಕ್ಕೆ ಅವರನ್ನು ಸಿಬಿಐ ಬಂಧಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಲಾಲು ಪ್ರಸಾದ್ ಯಾದವ್ ಯುಪಿಎ ಸರ್ಕಾರದಲ್ಲಿ ರೈಲ್ವೆ ಸಚಿವರಾಗಿದ್ದ ಕಾಲದಿಂದಲೂ ನಡೆದ ಭೂಮಿ-ಉದ್ಯೋಗ ಹಗರಣವು ಅತಿದೊಡ್ಡ ವಂಚನೆಗಳಲ್ಲಿ ಒಂದಾಗಿ ಹೊರಹೊಮ್ಮಬಹುದು ಎಂದು ಸಿಬಿಐ ಮೂಲಗಳು ಹೇಳಿವೆ. ಸಿಬಿಐ ತನಿಖೆ ವೇಳೆ ಮಹತ್ವದ ದಾಖಲೆಗಳಿರುವ ಹಾರ್ಡ್ ಡಿಸ್ಕ್ ಅನ್ನು ವಶಪಡಿಸಿಕೊಂಡಿದೆ ಎಂದು ಮೂಲಗಳು ಬಹಿರಂಗಪಡಿಸಿವೆ. ಇದು ಉದ್ಯೋಗಕ್ಕೆ ಬದಲಾಗಿ ತಮ್ಮ ಭೂಮಿಯನ್ನು ಲಾಲೂ ಪ್ರಸಾದ್ ಯಾದವ್ ಅವರಿಗೆ ನೀಡಿದ 1,458 ಅಭ್ಯರ್ಥಿಗಳ ಪಟ್ಟಿಯನ್ನು ಹೊಂದಿದೆ ಎನ್ನಲಾಗಿದೆ. ಈ ಪಟ್ಟಿಯನ್ನು ತೇಜಸ್ವಿ ಯಾದವ್ ಅವರೇ ಸಿದ್ಧಪಡಿಸಿದ್ದರು ಎನ್ನಲಾಗಿದೆ.

ಉದ್ಯೋಗಾಂಕ್ಷಿಗಳ ಜಮೀನನ್ನು ತಮ್ಮ ಸ್ನೇಹಿತರು ಮತ್ತು ಕುಟುಂಬದವರ ಹೆಸರಿನಲ್ಲಿ ಸ್ವಾಧೀನಪಡಿಸಿಕೊಂಡ ನಂತರ, ಭೂಮಿಯನ್ನು ವಶಪಡಿಸಿಕೊಳ್ಳಲಾಗಿತ್ತು ಎಂದು ಮೂಲಗಳು ತಿಳಿಸಿವೆ. ಈ 1,458 ಪ್ರಕರಣಗಳ ಪೈಕಿ 16 ಪ್ರಕರಣಗಳನ್ನು ಈಗಾಗಲೇ ಸಿಬಿಐ ತನಿಖೆಯಲ್ಲಿ ಪರಿಶೀಲಿಸಲಾಗಿದೆ. ತಪ್ಪು ಮಾಹಿತಿ ಮತ್ತು ಪ್ರಮಾಣಪತ್ರಗಳ ಹೊರತಾಗಿಯೂ ನೇಮಕಗೊಂಡಿರುವ ಈ ಅಭ್ಯರ್ಥಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಸಿಬಿಐ ಶೀಘ್ರದಲ್ಲೇ ರೈಲ್ವೆಗೆ ಪತ್ರ ಬರೆಯುವ ನಿರೀಕ್ಷೆಯಿದೆ.

ಇದನ್ನೂ ಓದಿ: Nitish Kumar ಬಿಹಾರ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸಿದ ನಿತೀಶ್ ಕುಮಾರ್, ಬಿಜೆಪಿಯಿಂದ ಕಲಾಪ ಬಹಿಷ್ಕಾರ

ಈ ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌ಗೆ ಸಂಬಂಧಿಸಿದೆ ಎನ್ನಲಾದ ಗುರುಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಮಾಲ್ ಸೇರಿದಂತೆ 27 ಸ್ಥಳಗಳಲ್ಲಿ ಸಿಬಿಐ ಬುಧವಾರ ಶೋಧ ನಡೆಸಿತ್ತು.

ಲಾಲು ಪ್ರಸಾದ್ ಯಾದವ್ ರೈಲ್ವೆ ಸಚಿವರಾಗಿದ್ದಾಗ ಈ ಉದ್ಯೋಗ ಹಗರಣ ನಡೆದಿತ್ತು ಎಂದು ಮೂಲಗಳು ತಿಳಿಸಿವೆ. ಹೀಗಾಗಿ, ಸಿಬಿಐ ಎಂಎಲ್‌ಸಿ ಸುನೀಲ್ ಸಿಂಗ್, ರಾಜ್ಯಸಭಾ ಸಂಸದರಾದ ಅಶ್ಫಾಕ್ ಕರೀಂ ಮತ್ತು ಫಯಾಜ್ ಅಹ್ಮದ್ ಮತ್ತು ಮಾಜಿ ಎಂಎಲ್‌ಸಿ ಸುಬೋಧ್ ರೈ ಸೇರಿದಂತೆ ಹಲವಾರು ಆರ್‌ಜೆಡಿ ನಾಯಕರ ಸ್ಥಳಗಳ ಮೇಲೆ ದಾಳಿ ನಡೆಸಿದೆ. 200ಕ್ಕೂ ಹೆಚ್ಚು ಮಾರಾಟ ಪತ್ರಗಳನ್ನು ಕೇಂದ್ರ ತನಿಖಾ ಸಂಸ್ಥೆಯು ದಾಳಿಯ ಸಮಯದಲ್ಲಿ ವಶಪಡಿಸಿಕೊಂಡಿದೆ ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ