AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

24ಗಂಟೆಯಲ್ಲಿ 1.65 ಲಕ್ಷ ಹೊಸ ಕೊವಿಡ್​ 19 ಪ್ರಕರಣಗಳು; ಸೋಂಕಿನ ಪ್ರಮಾಣದಲ್ಲಿ ಶೇ. 50ರಷ್ಟು ಇಳಿಕೆ

ಹೊಸ ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗುವ ಪ್ರಮಾಣ ಮೇ 8ರಂದು ಉತ್ತುಂಗದಲ್ಲಿತ್ತು. ಅದೀಗ ಮೂರೇ ವಾರದಲ್ಲಿ ಶೇ.50ರಷ್ಟು ಇಳಿಕೆ ಕಂಡಿದೆ.

24ಗಂಟೆಯಲ್ಲಿ 1.65 ಲಕ್ಷ ಹೊಸ ಕೊವಿಡ್​ 19 ಪ್ರಕರಣಗಳು; ಸೋಂಕಿನ ಪ್ರಮಾಣದಲ್ಲಿ ಶೇ. 50ರಷ್ಟು ಇಳಿಕೆ
ಸಾಂದರ್ಭಿಕ ಚಿತ್ರ
Lakshmi Hegde
|

Updated on:May 30, 2021 | 9:59 AM

Share

ಭಾರತದಲ್ಲಿ ದಿನದಲ್ಲಿ ಪತ್ತೆಯಾಗುವ ಕೊರೊನಾ ಸೋಂಕಿನ ಪ್ರಮಾಣದಲ್ಲಿ ಗಣನೀಯವಾಗಿ ಕಡಿಮೆಯಾಗುತ್ತಿದೆ. ಕಳೆದ 24ಗಂಟೆಯಲ್ಲಿ 1,65,553 ಹೊಸ ಕೊವಿಡ್​ 19 ಪ್ರಕರಣಗಳು ಪತ್ತೆಯಾಗಿದ್ದು, 3460 ಮಂದಿ ಮೃತಪಟ್ಟಿದ್ದಾರೆ. ಅಲ್ಲಿಗೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ ದೇಶದಲ್ಲಿ 3,25,972ಕ್ಕೆ ತಲುಪಿದೆ. ಹಾಗೇ ಕಳೆದ 24ಗಂಟೆಯಲ್ಲಿ 2,76,309 ಜನರು ಕೊರೊನಾದಿಂದ ಚೇತರಿಸಿಕೊಂಡು ಡಿಸ್​​ಚಾರ್ಜ್​ ಆಗಿದ್ದಾರೆ. ಸಕ್ರಿಯ ಪ್ರಕರಣಗಳು 21,14,508 ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಮೇ 29ರವರೆಗೆ 34,31,83,748 ಮಾದರಿಗಳನ್ನು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.

ಶೇ.50ರಷ್ಟು ಕುಸಿತ ಅತ್ಯಂತ ಉಲ್ಬಣವಾಗಿದ್ದ ಕೊವಿಡ್​ ಸೋಂಕಿನ ಪ್ರಮಾಣ ಕೇವಲ ಮೂರೇ ವಾರಗಳಲ್ಲಿ ಶೇ.50ರಷ್ಟು ಇಳಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಹೊಸ ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗುವ ಪ್ರಮಾಣ ಮೇ 8ರಂದು ಉತ್ತುಂಗದಲ್ಲಿತ್ತು. ಅದೀಗ ಮೂರೇ ವಾರದಲ್ಲಿ ಶೇ.50ರಷ್ಟು ಇಳಿಕೆ ಕಂಡಿದೆ. ಒಂದು ದಿನದಲ್ಲಿ 3 ಲಕ್ಷದವರೆಗೆ ದಾಖಲಾಗುತ್ತಿದ್ದ ಸೋಂಕಿತರ ಸಂಖ್ಯೆ ಇದೀಗ 1 ಲಕ್ಷಕ್ಕೆ ಇಳಿದಿದೆ ಎಂದು ಆರೋಗ್ಯ ಇಲಾಖೆ ಸಮಾಧಾನಕರ ಸಂಗತಿಯನ್ನು ತಿಳಿಸಿದೆ.

ಇದನ್ನೂ ಓದಿ: ನಕ್ಕು ನಗಿಸುವ ಕಪಿಲ್​ ಶರ್ಮಾ ಶೋಗೆ ಹೊಸ ಟ್ವಿಸ್ಟ್​; ಯಾವಾಗಿಂದ ಶುರು ಆಗಲಿದೆ ನಗೆ ಹಬ್ಬ?

Published On - 9:57 am, Sun, 30 May 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ