ಆರೋಗ್ಯ ಕಾರ್ಯಕರ್ತರಿಗೆ ಕೊವಿನ್​ ಆ್ಯಪ್​ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ನಾಳೆ ಕಡೆಯ ದಿನ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 11, 2021 | 3:51 PM

ಕೊರೊನಾ ಲಸಿಕೆ ಪಡೆಯಬಯಸುವವರು ಸರ್ಕಾರದ ಅಧಿಕೃತ ಆ್ಯಪ್​ ಕೊವಿನ್​ನಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕೆಂದು ಸರ್ಕಾರ ಈಗಾಗಲೇ ತಿಳಿಸಿದೆ. ಅದರಂತೆಯೇ ಆರೋಗ್ಯ ಕಾರ್ಯಕರ್ತರಿಗೆ ಹೆಸರು ನೋಂದಣಿ ಮಾಡಿಸಿಕೊಳ್ಳಲು ನಾಳೆ (ಜ.12) ಕೊನೆಯ ದಿನವಾಗಿದೆ.

ಆರೋಗ್ಯ ಕಾರ್ಯಕರ್ತರಿಗೆ ಕೊವಿನ್​ ಆ್ಯಪ್​ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ನಾಳೆ ಕಡೆಯ ದಿನ
ಸಾಂದರ್ಭಿಕ ಚಿತ್ರ
Follow us on

ದೆಹಲಿ: ದೇಶಾದ್ಯಂತ ಕೊರೊನಾ ಲಸಿಕೆ ವಿತರಣೆಗೆ ದಿನಗಣನೆ ಆರಂಭವಾಗಿದೆ. ಜ.16ರಿಂದ ಮೊದಲ ಹಂತದಲ್ಲಿ ಲಸಿಕೆ ವಿತರಣೆ ಆಗಲಿದ್ದು, ಅಂದಾಜು 3 ಕೋಟಿ ಆರೋಗ್ಯ ಕಾರ್ಯಕರ್ತರು ಮತ್ತು ಫ್ರಂಟ್​ಲೈನ್ ವಾರಿಯರ್ಸ್​ ಲಸಿಕೆ ಸ್ವೀಕರಿಸಲಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕೊರೊನಾ ಲಸಿಕೆ ಪಡೆಯಬಯಸುವವರು ಸರ್ಕಾರದ ಅಧಿಕೃತ ಆ್ಯಪ್​ ಕೊವಿನ್​ನಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕೆಂದು ಸರ್ಕಾರ ಈಗಾಗಲೇ ತಿಳಿಸಿದೆ. ಅದರಂತೆಯೇ ಆರೋಗ್ಯ ಕಾರ್ಯಕರ್ತರಿಗೆ ಹೆಸರು ನೋಂದಣಿ ಮಾಡಿಸಿಕೊಳ್ಳಲು ನಾಳೆ (ಜ.12) ಕೊನೆಯ ದಿನವಾಗಿದೆ. ನಂತರದಲ್ಲಿ ಬಂದ ಹೆಸರುಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸರ್ಕಾರ ಸ್ಪಷ್ಟವಾಗಿ ತಿಳಿಸಿದೆ.

ಆರೋಗ್ಯ ಕಾರ್ಯಕರ್ತರ ನಂತರ ಕೊರೊನಾ ಲಸಿಕೆ ಸ್ವೀಕರಿಸಲಿರುವ ಫ್ರಂಟ್​ಲೈನ್​ ವಾರಿಯರ್ಸ್​ಗಳಿಗೆ ಜನವರಿ 25ಕೊನೆಯ ದಿನಾಂಕವಾಗಿದ್ದು, ಅದಕ್ಕೂ ಮುನ್ನ ಹೆಸರು ನೋಂದಾಯಿಸಿಕೊಳ್ಳುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿದೆ. ಯಾವುದೇ ಫಲಾನುಭವಿಗಳು ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ, ಅವಧಿಗೂ ಮುನ್ನವೇ ಹೆಸರು ನೋಂದಾಯಿಸಲು ಅರ್ಹರಿಗೆ ತಿಳಿಸಿ ಎಂದು ರಾಜ್ಯ ಸರ್ಕಾರಗಳಿಗೂ ನಿರ್ದೇಶನ ನೀಡಲಾಗಿದೆ.

ಆರೋಗ್ಯ ಕಾರ್ಯಕರ್ತರು ಮತ್ತು ಫ್ರಂಟ್​ಲೈನ್ ವಾರಿಯರ್ಸ್​ಗಳ ನಂತರ ಬೇರೆ ಬೇರೆ ಕಾಯಿಲೆಗಳಿಂದ ಬಳಲುತ್ತಿರುವ 50 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ವಿತರಣೆ ಮಾಡಲಾಗುವುದು. ಅಂತಹ ವ್ಯಕ್ತಿಗಳನ್ನು ಗುರುತಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಸರ್ಕಾರಕ್ಕೂ ಮುನ್ನವೇ ‘ಕೊವಿನ್​’ ಆ್ಯಪ್​ ಬಿಡುಗಡೆ ಮಾಡಿದ ಕಿಡಿಗೇಡಿಗಳು