Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್​ ಸಿಂಗ್​ ಸಂಬಂಧಿ ಹತ್ಯೆ ಯತ್ನ; ಬೈಕ್​ ಮೇಲೆ ಬಂದು ಗುಂಡು ಹಾರಿಸಿದ ದುಷ್ಕರ್ಮಿಗಳು

ಬೈಜನಾಥಪುರ ಚೌಕ್​ ಬಳಿ ಬೈಕ್​​ನಲ್ಲಿ ಬಂದ ದುಷ್ಕರ್ಮಿಗಳು ಸುಶಾಂತ್​ ಸಂಬಂಧಿ ಮೇಲೆ ಗುಂಡು ಹಾರಿಸಿದ್ದಾರೆ. ಇವರ ಪರಿಸ್ಥಿತಿಯೂ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುಶಾಂತ್​ ಸಿಂಗ್​ ಸಂಬಂಧಿ ಹತ್ಯೆ ಯತ್ನ; ಬೈಕ್​ ಮೇಲೆ ಬಂದು ಗುಂಡು ಹಾರಿಸಿದ ದುಷ್ಕರ್ಮಿಗಳು
ಘಟನೆಯ ಬಗ್ಗೆ ಮಾಹಿತಿ ನೀಡಿದ ಸ್ಥಳೀಯ ಪೊಲೀಸ್ ಅಧಿಕಾರಿ
Follow us
Lakshmi Hegde
| Updated By: ರಾಜೇಶ್ ದುಗ್ಗುಮನೆ

Updated on: Jan 30, 2021 | 7:12 PM

ಪಾಟ್ನಾ: ಕಳೆದ ಜೂನ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ ಸಂಬಂಧಿಯೊಬ್ಬನ ಹತ್ಯೆ ಪ್ರಯತ್ನವಾಗಿದೆ. ಶಸ್ತ್ರ ಸಹಿತ ಬಂದ ದುಷ್ಕರ್ಮಿಗಳು ಹಾಡಹಗಲಲ್ಲೇ ಗುಂಡು ಹಾರಿಸಿದ್ದು, ಬಿಹಾರದ ಕಾನೂನು ಸುವ್ಯವಸ್ಥೆಯನ್ನೇ ಪ್ರಶ್ನಿಸುವಂತಿದೆ.

ಇಂದು ಮಧ್ಯಾಹ್ನ ಸಹರ್ಸಾದ, ಬೈಜನಾಥಪುರ ಚೌಕ್​ನಲ್ಲಿ ಘಟನೆ ನಡೆದಿದ್ದು, ಸುಶಾಂತ್ ಸಿಂಗ್​ ಕಸಿನ್ ರಾಜಕುಮಾರ್ ಸಿಂಗ್​ ಹಾಗೂ ಆತನ ಸ್ನೇಹಿತ ಅಲಿ ಹಸನ್​ ಮದೆಪುರಕ್ಕೆ ತೆರಳುತ್ತಿದ್ದರು. ಇವರಿಬ್ಬರೂ ಅಲ್ಲಿ ಶೋ ರೂಂ ನಡೆಸುತ್ತಿದ್ದು ಎಂದಿನಂತೆ ಕೆಲಸಕ್ಕೆ ಹೋಗುತ್ತಿದ್ದರು. ಬೈಜನಾಥಪುರ ಚೌಕ್​ ಬಳಿ ಬೈಕ್​​ನಲ್ಲಿ ಬಂದ ದುಷ್ಕರ್ಮಿಗಳು ಇವರ ಮೇಲೆ ಗುಂಡು ಹಾರಿಸಿದ್ದಾರೆ. ಇಬ್ಬರ ಪರಿಸ್ಥಿತಿಯೂ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತನಿಖೆ ಪ್ರಾರಂಭ ಹೀಗೆ ಹಗಲಲ್ಲೇ ಕೊಲೆ ಯತ್ನವಾದ ಬೆನ್ನಲ್ಲೇ ಪೊಲೀಸರು ಫುಲ್​ ಅಲರ್ಟ್ ಆಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆ ಕಾರ್ಯಾಚರಣೆ ಶುರು ಮಾಡಿದ್ದಾರೆ.

ಬಾಬಾ ಪರಮಾಣು ಸಂಶೋಧನಾ ಕೇಂದ್ರದ ವಿಜ್ಞಾನಿ ಆತ್ಮಹತ್ಯೆ: ಮಡದಿಯೊಂದಿಗೆ ವಾಗ್ವಾದದ ಬಳಿಕ ದುರ್ಘಟನೆ

ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್