ಮೃತ ಪಂಜಾಬಿ ಗಾಯಕ ಸಿಧು ಮೂಸೆವಾಲಾ ತಾಯಿ ಗರ್ಭಿಣಿ ಅಲ್ಲ, ವದಂತಿಯಷ್ಟೇ

|

Updated on: Mar 13, 2024 | 9:59 AM

ಮೃತ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ತಾಯಿ ಗರ್ಭಿಣಿಯಲ್ಲ ಎನ್ನುವ ವಿಚಾರ ಬೆಳಕಿಗೆ ಬಂದಿದೆ. 2022ರಲ್ಲಿ ಸಿಧು ಮೂಸೆವಾಲಾ ಅವರ ಹತ್ಯೆ ನಡೆದಿತ್ತು. ಕೆಲವು ದಿನಗಳ ಹಿಂದಷ್ಟೇ ಸಿಧು ಮೂಸೆವಾಲಾ ತಾಯಿ ಗರ್ಭಿಣಿ, ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು.

ಮೃತ ಪಂಜಾಬಿ ಗಾಯಕ ಸಿಧು ಮೂಸೆವಾಲಾ ತಾಯಿ ಗರ್ಭಿಣಿ ಅಲ್ಲ, ವದಂತಿಯಷ್ಟೇ
ಸಿಧು ಮೂಸೆವಾಲಾ ಕುಟುಂಬ
Follow us on

2022ರಲ್ಲಿ ಹತ್ಯೆಯಾಗಿದ್ದ ಗಾಯಕ ಸಿಧು ಮೂಸೆವಾಲಾ(Sidhu Moosewala) ತಾಯಿ ಗರ್ಭಿಣಿಯಲ್ಲ ಅದೊಂದು ವದಂತಿಯಷ್ಟೇ ಎಂಬುದು ತಿಳಿದುಬಂದಿದೆ. ಈ ಕುರಿತು ಅವರ ತಂದೆಯೇ ಸ್ಪಷ್ಟನೆ ನೀಡಿದ್ದಾರೆ. ಸಿಧು ಮೂಸೆವಾಲಾ ಅವರ ಪೋಷಕರು ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಎಂಬ ಸುದ್ದಿ ಹೊರಬಿದ್ದ ಕೆಲವೇ ದಿನಗಳಲ್ಲಿ, ದಿವಂಗತ ಗಾಯಕನ ತಂದೆ ಇದೀಗ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪೋಸ್ಟ್ ಬರೆದಿದ್ದಾರೆ.

ಸಿಧು ಮೂಸೆವಾಲಾ ಅವರ ತಂದೆ ಬಲ್ಕೌರ್ ಸಿಂಗ್ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ, ನಮ್ಮ ಕುಟುಂಬದ ಬಗ್ಗೆ ಹಲವು ವದಂತಿಗಳನ್ನು ಹರಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇಂಡಿಯನ್ ಎಕ್ಸ್​ಪ್ರೆಸ್​ ವರದಿ ಮಾಡಿದಂತೆ, ದಿವಂಗತ ಪಂಜಾಬಿ ಗಾಯಕ, ಸಿದ್ದು ಮೂಸೆವಾಲಾ ಎಂದು ಜನಪ್ರಿಯವಾಗಿರುವ ಶುಭದೀಪ್ ಸಿಂಗ್ ಸಿಧು ಅವರ ಪೋಷಕರು ಹೊಸ ಸದಸ್ಯರ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಅವರ ಕುಟುಂಬ ನಿರೀಕ್ಷಿಸುತ್ತಿದೆ. ವರದಿಗಳ ಪ್ರಕಾರ, ಅವರ ತಾಯಿಗೆ 58 ವರ್ಷ ಮತ್ತು ಅವರ ತಂದೆಗೆ 60 ವರ್ಷ ಎಂದು ಹೇಳಲಾಗಿತ್ತು.

2022ರಲ್ಲಿ ನಡೆದಿತ್ತು ಸಿಧು ಮೂಸೆವಾಲಾ ಹತ್ಯೆ
2022 ರಲ್ಲಿ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಮಾನ್ಸಾದಿಂದ ಸ್ಪರ್ಧಿಸಿದ್ದ ಸಿಧು ಮೂಸೆವಾಲಾ ಅದೇ ವರ್ಷ ಮೇ 29 ರಂದು ದುರಂತವಾಗಿ ಹತ್ಯೆಯಾಗಿದ್ದರು. ಮೇ 29, 2022 ರಂದು, ಮಾನ್ಸಾ ಜಿಲ್ಲೆಯ ಜವಾಹರ್ಕೆ ಗ್ರಾಮದಲ್ಲಿ ಅವರ ಕಾರಿನಲ್ಲಿ ದುಷ್ಕರ್ಮಿಗಳು ಅವರನ್ನು ಗುಂಡಿಕ್ಕಿ ಕೊಂದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ನೀಡುವ ಮುನ್ನವೇ ಮೃತಪಟ್ಟಿದ್ದರು.

ಮತ್ತಷ್ಟು ಓದಿ: Sidhu Moosewala: 2022ರಲ್ಲಿ ಹತ್ಯೆಯಾಗಿದ್ದ ಗಾಯಕ ಸಿಧು ಮೂಸೆವಾಲಾ ತಾಯಿ ಈಗ ಗರ್ಭಿಣಿ

ಮೂಸೆವಾಲಾ ಹತ್ಯೆಯಾದ ನಂತರ ಆತನ ಪೋಷಕರು ತಮ್ಮ ಮಗನಿಗೆ ನ್ಯಾಯ ಕೊಡಿಸುವಂತೆ ಚಳವಳಿ ನಡೆಸಿದ್ದರು.
ಕೊನೆಯ ಹಾಡಿನ ಮ್ಯೂಸಿಕ್ ವಿಡಿಯೋದಲ್ಲಿ ಜಸ್ಟೀಸ್ ಟು ಸಿಧು ಮೂಸೆವಾಲಾ ಎಂಬ ಸಂದೇಶವಿತ್ತು. ಅವರ ಮರಣದ ಬಳಿಕವೂ ಕೆಲವು ಹಾಡುಗಳನ್ನು ಬಿಡುಗಡೆ ಮಾಡಲಾಗಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ