ರಾಜಸ್ಥಾನ ಗಡಿಯಲ್ಲಿ ಭಾರತ-ಪಾಕ್ ಸೈನಿಕರ ನಡುವೆ ಗುಂಡಿನ ಚಕಮಕಿ

ರಾಜಸ್ಥಾನದಲ್ಲಿರುವ ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ಸೈನಿಕರ ನಡುವೆ ಗುಂಡಿನ ಚಕಮಕಿ ನಡೆಯುವುದು ಬಹಳ ವಿರಳವಾಗಿದೆ.

ರಾಜಸ್ಥಾನ ಗಡಿಯಲ್ಲಿ ಭಾರತ-ಪಾಕ್ ಸೈನಿಕರ ನಡುವೆ ಗುಂಡಿನ ಚಕಮಕಿ
ರಾಜಸ್ಥಾನ ಗಡಿಯಲ್ಲಿ ಭಾರತ-ಪಾಕ್ ಸೈನಿಕರ ನಡುವೆ ಗುಂಡಿನ ಚಕಾಮಕಿ Image Credit source: ಸಾಂದರ್ಭಿಕ ಚಿತ್ರ
Follow us
TV9 Web
| Updated By: Rakesh Nayak Manchi

Updated on:Dec 10, 2022 | 8:07 AM

ದೆಹಲಿ: ರಾಜಸ್ಥಾನದಲ್ಲಿನ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ (Rajasthan IB)ಯಲ್ಲಿರುವ ಅನುಪ್‌ಗಢ (Anupgarh) ಸೆಕ್ಟರ್‌ನಲ್ಲಿ ಶುಕ್ರವಾರ ತಡರಾತ್ರಿ ಗಡಿ ಭದ್ರತಾ ಪಡೆ (BSF) ಪಡೆಗಳು ಮತ್ತು ಪಾಕ್ ರೇಂಜರ್‌ಗಳ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಂಡಿನ ಕಾಳಗದಲ್ಲಿ ಭಾರತದ ಯೋಧರಿಗೆ ಯಾವುದೇ ಗಾಯಗಳಾಗಲಿಲ್ಲ ಎಂದು ಬಿಎಸ್‌ಎಫ್ ವಕ್ತಾರರು ತಿಳಿಸಿದ್ದಾರೆ. ಗಡಿ ಮುಂದೆ ಕರ್ತವ್ಯದಲ್ಲಿದ್ದ ಬಿಎಸ್‌ಎಫ್ ಪಡೆಗಳ ಮೇಲೆ ಪಾಕ್ ರೇಂಜರ್‌ಗಳು 6-7 ಸುತ್ತು ಗುಂಡು ಹಾರಿಸಿದ್ದಾರೆ. ಪ್ರತಿಕಾರವಾಗಿ ಬಿಎಸ್ಎಫ್ ‘ಕಿಸಾನ್ ಗಾರ್ಡ್’, ಪಾಕ್ ರೇಂಜರ್‌ಗಳ ಮೇಲೆ ಸುಮಾರು 18 ಸುತ್ತು ಗುಂಡು ಹಾರಿಸಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ಮೊದಲು ಪಾಕಿಸ್ತಾನದ ಕಡೆಯಿಂದ ಗುಂಡಿನ ದಾಳಿ ನಡೆಸಲಾಗಿದೆ, ನಂತರ ಬಿಎಸ್ಎಫ್ ಪಡೆಗಳು ಪ್ರತಿದಾಳಿ ನಡೆಸಿವೆ ಎಂದು ಭಾರತದ ಸ್ಥಳೀಯರು ಹೇಳಿದರು. ಸದ್ಯ ಬಿಎಸ್‌ಎಫ್ ತಮ್ಮ ಗಡಿಯಾಚೆಗಿನ ಸಹವರ್ತಿಗಳೊಂದಿಗೆ ಧ್ವಜ ಸಭೆ (Flag meeting )ಗೆ ಕರೆ ನೀಡಿದೆ. ಈ ಸಭೆಯು ಶನಿವಾರದಂದು ರಾಜ್ಯದ ಶ್ರೀಗಂಗಾನಗರ ಜಿಲ್ಲೆಯ ಅನುಪ್‌ಗಢ ವಲಯದಲ್ಲಿ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Belagavi border row: ಕೇಂದ್ರ ಗೃಹಸಚಿವರನ್ನು ಭೇಟಿಯಾಗುವಂತೆ ಕರ್ನಾಟಕದ ಸಂಸದರಿಗೆ ಸಿಎಂ ಬೊಮ್ಮಾಯಿ ಸೂಚನೆ

ಗುಜರಾತ್, ಪಂಜಾಬ್ ಮತ್ತು ಜಮ್ಮುವಿನ ಉದ್ದಕ್ಕೂ ಇರುವ ಅಂತಾರಾಷ್ಟ್ರೀಯ ಗಡಿಯಲ್ಲಿ ಹಾಗೂ ರಾಜಸ್ಥಾನ ಮುಂಭಾಗದಲ್ಲಿನ ಅಂತಾರಾಷ್ಟ್ರೀಯ ಗಡಿಯಲ್ಲಿ ಸೈನಿಕರ ನಡುವೆ ಗುಂಡಿನ ಚಕಾಮಕಿ ನಡೆಯುವುದು ಬಹಳ ಅಪರೂಪವಾಗಿದೆ. ಘಟನೆಯ ಕುರಿತು ಹೆಚ್ಚಿನ ವಿವರಗಳಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಗಡಿ ಪಡೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತಷ್ಟು ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:00 am, Sat, 10 December 22

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ