ಬೆಂಗಳೂರು: ಕೊರೊನಾ ಇಡೀ ದೇಶವನ್ನೇ ಹಿಡಿದು ಹಿಪ್ಪೆ ಮಾಡುತ್ತಿದೆ. ಸೋಂಕಿತರ ಹಾಗೂ ಬಲಿಯಾದವರ ಸಂಖ್ಯೆ ದಿನೇ ದಿನೆ ಏರುತ್ತಲೇ ಇದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,395ಕ್ಕೆ ಏರಿಕೆಯಾಗಿದೆ. 1,395ಸೋಂಕಿತರಲ್ಲಿ 543 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1,395ಜನರ ಪೈಕಿ 40ಜನ ಮೃತಪಟ್ಟಿದ್ದಾರೆ. ಉಳಿದ811 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ:
ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,01,139
ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 3,163
ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 39,174
ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 58,802
ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್:
ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 49,82,875
ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 3,24,535
ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 19,56,361
ಅಮೆರಿಕದಲ್ಲಿ ಒಂದೇ ದಿನ ಕೊರೊನಾಗೆ ಬಲಿಯಾದವರ ಸಂಖ್ಯೆ- 1,500
ಕೊರೊನಾಗೆ ಅಮೆರಿಕದಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ- 93,533
ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ -15,70,583
Published On - 6:51 am, Wed, 20 May 20