ಬೆಂಗಳೂರು: ಕೊರೊನಾ ಹೆಸರನ್ನ ಕೇಳಿದ್ರೆ ಸಾಕು ಮೈ ನಡುಕ ಹುಟ್ಟುತ್ತೆ. ಅಷ್ಟರ ಮಟ್ಟಿಗೆ ಕೊರೊನಾ ತನ್ನ ಅಟ್ಟಹಾಸವನ್ನು ಮೆರೆದಿದೆ. ಸೋಂಕಿತರ ಹಾಗೂ ಬಲಿಯಾದವರ ಸಂಖ್ಯೆ ದಿನೇ ದಿನೆ ಏರುತ್ತಲೇ ಇದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,283 ಕ್ಕೆ ಏರಿಕೆಯಾಗಿದೆ. 2,283 ಸೋಂಕಿತರಲ್ಲಿ 748 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,283 ಜನರ ಪೈಕಿ 44ಜನ ಮೃತಪಟ್ಟಿದ್ದಾರೆ. ಉಳಿದ1,490 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ:
ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,45,380
ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 4,167
ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 60,491
ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 80,722
ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್:
ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 56,78,370
ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 3,51,666
ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 24,26,504
Published On - 6:31 am, Wed, 27 May 20