ಬೆಂಗಳೂರು: ಕೊರೊನಾ ಮಹಾಮಾರಿಗೆ ವಿಶ್ವ ಮತ್ತಷ್ಟು ಕುಗ್ಗಿ ಹೋಗಿದೆ. ದಿನೇ ದಿನೇ ಸೋಂಕು ಬಲಿಷ್ಠವಾಗುತ್ತಿದೆ. ಇಲ್ಲಿಯ ವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ನೋಡೋದಾದ್ರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 26 ಸಾವಿರದ 815ಕ್ಕೆ ಏರಿಕೆಯಾಗಿದೆ. 26,815 ಸೋಂಕಿತರಲ್ಲಿ 11ಸಾವಿರದ 98ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 26,815 ಜನರ ಪೈಕಿ 416 ಜನ ಮೃತಪಟ್ಟಿದ್ದಾರೆ. ಉಳಿದ 15ಸಾವಿರದ 297 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಒಂದೇ ದಿನವೇ 1,498 ಜನರಿಗೆ ಕೊರೊನಾ ಸೋಂಕು ತಗುಲಿದೆ.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ:
ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 7,19,665
ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 20,160
ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 4,39,948
ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 2,59,557
ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್:
ವಿಶ್ವದಾದ್ಯಂತ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,19,39,497
ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 5,45,586
ವಿಶ್ವದಲ್ಲಿ 24 ಗಂಟೆ ಅವಧಿಯಲ್ಲಿ 5,446 ಜನರ ಸಾವಾಗಿದೆ.
ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 68,41,557
ವಿಶ್ವದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 45,52,354
ವಿಶ್ವದಲ್ಲಿ ಒಟ್ಟು ಕೊರೊನಾ ಸೋಂಕಿತರ ಸ್ಥಿತಿ ಗಂಭೀರ- 58,165
ಹೊಸದಾಗಿ 2 ಲಕ್ಷ 5 ಸಾವಿರದ 466 ಜನರಿಗೆ ಸೋಂಕು ತಗುಲಿದೆ.
Published On - 7:41 am, Wed, 8 July 20