ಪ್ರತಿಭಟನೆ ವೇಳೆ ಲಾಠಿ ಚಾರ್ಜ್​​: ಪೊಲೀಸರನ್ನೇ ಅಟ್ಟಿಸಿಕೊಂಡು ಹೋದ ರೈತರು

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 29, 2020 | 8:48 PM

ಪಾಟ್ನಾದ ಗಾಂಧಿ ಮೈದಾನದಿಂದ ರಾಜಭವನದವರೆಗೆ ಮೆರವಣಿಗೆ ನಡೆಸಲು ರೈತರು ಸಿದ್ಧತೆ ನಡೆಸಿದ್ದರು. ಈ ವೇಳೆ ಅರ್ಧದಲ್ಲೇ ರೈತರನ್ನು ಪೊಲೀಸರು ತಡೆದು ನಿಲ್ಲಿಸಿದ್ದರು. ರೈತರು ಮುಂದೆ ಹೋಗದಂತೆ ನೋಡಿಕೊಳ್ಳಲು ಬ್ಯಾರಿಕೇಡ್​ಗಳನ್ನು ಕೂಡ ಹಾಕಿದ್ದರು.

ಪ್ರತಿಭಟನೆ ವೇಳೆ ಲಾಠಿ ಚಾರ್ಜ್​​: ಪೊಲೀಸರನ್ನೇ ಅಟ್ಟಿಸಿಕೊಂಡು ಹೋದ ರೈತರು
ಪಾಟ್ನಾದಲ್ಲಿ ನಡೆದ ರೈತರ ಪ್ರತಿಭಟನೆ
Follow us on

ಪಾಟ್ನಾ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಯನ್ನು ಹಿಂಪಡೆಯಲು ಆಗ್ರಹಿಸಿ ಬಿಹಾರದಲ್ಲಿ ರೈತರು ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಈ ವೇಳೆ ಲಾಠಿ ಚಾರ್ಜ್​ ಮಾಡಲು ಮುಂದಾದ ಪೊಲೀಸರನ್ನೇ ರೈತರು ಅಟ್ಟಿಸಿಕೊಂಡು ಹೋಗಿದ್ದಾರೆ.

ಪಾಟ್ನಾದ ಗಾಂಧಿ ಮೈದಾನದಿಂದ ರಾಜಭವನದವರೆಗೆ ಮೆರವಣಿಗೆ ನಡೆಸಲು ರೈತರು ಸಿದ್ಧತೆ ನಡೆಸಿದ್ದರು. ಈ ವೇಳೆ ಅರ್ಧದಲ್ಲೇ ರೈತರನ್ನು ಪೊಲೀಸರು ತಡೆದು ನಿಲ್ಲಿಸಿದ್ದರು. ರೈತರು ಮುಂದೆ ಹೋಗದಂತೆ ನೋಡಿಕೊಳ್ಳಲು ಬ್ಯಾರಿಕೇಡ್​ಗಳನ್ನು ಹಾಕಿದ್ದರು. ಈ ವೇಳೆ ಪೊಲೀಸರು ಹಾಗೂ ರೈತರ ನಡುವೆ ಘರ್ಷಣೆ ಏರ್ಪಟ್ಟು, ಅನೇಕರು ಗಾಯಗೊಂಡಿದ್ದಾರೆ. ಪೊಲೀಸರು ಲಾಠಿ ಚಾರ್ಜ್​ ಮಾಡಲು ಪ್ರಯತ್ನಿಸಿದ್ದಾರೆ. ತದನಂತರ ರೈತರೇ ಪೊಲೀಸರನ್ನು ಅಟ್ಟಿಸಿಕೊಂಡು ಹೋದ ಬಗ್ಗೆ ವರದಿ ಆಗಿದೆ.

ಬಿಹಾರ ಕಿಸಾನ್​ ಸಭಾ ಪ್ರಧಾನ ಕಾರ್ಯದರ್ಶಿ ಅಶೋಕ್​ ಪ್ರಸಾದ್​ ಮಾತನಾಡಿ, ನಮ್ಮ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರನ್ನು ಬೆಂಬಲಿಸುವ ಸಲುವಾಗಿ ನಾವು ಇಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದಿದ್ದಾರೆ.

ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಯುತ್ತಿರುವ ಪ್ರತಿಭಟನೆ ಎರಡನೇ ತಿಂಗಳಿಗೆ ಕಾಲಿಟ್ಟಿದೆ. ದೆಹಲಿ ಚಳಿಯನ್ನು ಲೆಕ್ಕಿಸದೆ, ಸಿಂಘು ಮತ್ತು ಟಿಕ್ರಿ ಗಡಿಪ್ರದೇಶಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಈಗಾಗಲೇ ರೈತ ಮುಖಂಡರು ಹಾಗೂ ಕೇಂದ್ರ ಸಚಿವರ ನಡುವೆ ಹಲವು ಸುತ್ತಿನ ಮಾತುಕತೆಗಳಾಗಿದ್ದು ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಿಲ್ಲ. ಇದೀಗ, ನಾಳೆ (ಡಿ.30)ರಂದು ರೈತ ಮುಖಂಡರು ಕೇಂದ್ರ ಸರ್ಕಾರದೊಡನೆ ಮತ್ತೊಂದು ಸುತ್ತಿನ ಮಾತುಕತೆಗೆ ಸಿದ್ಧರಾಗಿದ್ದಾರೆ.

ರೈತರ ಪ್ರತಿಭಟನೆ, ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಮಧ್ಯೆ ಅಜ್ಜಿ ಊರಿಗೆ ಪ್ರವಾಸ ಹೊರಟ ರಾಹುಲ್ ಗಾಂಧಿ?