AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಪೋಷಕರ ವಿರುದ್ಧ ಮೊದಲ ಬಾರಿಗೆ ಕ್ರಮ, ಸಿಬಿಐ ವಶಕ್ಕೆ ಪಡೆದಿರುವ ಡಾ. ಮನೋಜ್ ಶಿರೂರೆ ಯಾರು?

NEET Paper Leak Case:ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ನೀಟ್ (NEET) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ತನಿಖೆಯನ್ನು ಚುರುಕುಗೊಳಿಸಿರುವ ಸಿಬಿಐ (CBI) ಮಹಾರಾಷ್ಟ್ರದಲ್ಲಿ ಭರ್ಜರಿ ಬೇಟೆಯಾಡಿದೆ. ಲಾತೂರ್, ಪುಣೆ, ನಾಸಿಕ್ ಮತ್ತು ನಾಂದೇಡ್‌ಗಳಲ್ಲಿ ಸರಣಿ ದಾಳಿ ನಡೆಸಿ ಹಲವು ಆರೋಪಿಗಳನ್ನು ಬಂಧಿಸಿ, ಅಕ್ರಮ ತರಬೇತಿ ಕೇಂದ್ರಗಳನ್ನು ಮುಚ್ಚಿಸಿದೆ. ಆದರೆ, ಇವೆಲ್ಲದರ ಮಧ್ಯೆ ಈ ಹಗರಣದಲ್ಲಿ ಇದೇ ಮೊದಲ ಬಾರಿಗೆ ಪೋಷಕರೊಬ್ಬರ ವಿರುದ್ಧ ಸಿಬಿಐ ಅತ್ಯಂತ ಕಠಿಣ ಕ್ರಮ ಕೈಗೊಂಡಿದ್ದು, ಇಡೀ ವೈದ್ಯಕೀಯ ಮತ್ತು ಶಿಕ್ಷಣ ಕ್ಷೇತ್ರ ನಡುಗುವಂತೆ ಮಾಡಿದೆ.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಪೋಷಕರ ವಿರುದ್ಧ ಮೊದಲ ಬಾರಿಗೆ ಕ್ರಮ, ಸಿಬಿಐ ವಶಕ್ಕೆ ಪಡೆದಿರುವ ಡಾ. ಮನೋಜ್ ಶಿರೂರೆ ಯಾರು?
ಬಂಧನImage Credit source: The Criminal Law blog
ನಯನಾ ರಾಜೀವ್
|

Updated on: May 21, 2026 | 2:54 PM

Share

ಪುಣೆ, ಮೇ 21: ಮಕ್ಕಳ ಭವಿಷ್ಯಕ್ಕಾಗಿ ಪೋಷಕರು ಯಾವುದೇ ಹಂತಕ್ಕಾದರೂ ಹೋಗಲು ಸಿದ್ಧರಾಗುತ್ತಾರೆ. ಆದರೆ, ಇಲ್ಲೊಬ್ಬರು ಹೆಸರಾಂತ ವೈದ್ಯರು ತಮ್ಮ ಮಗನಿಗಾಗಿ ನೀಟ್(NEET) ಪರೀಕ್ಷೆಯ ಅಕ್ರಮದ ದಾರಿ ಹಿಡಿದು, ಕೊನೆಗೆ ಕಂಬಿ ಎಣಿಸುವಂತಾಗಿದೆ. ಸಿಬಿಐ ಕೈಗೆ ಸಿಕ್ಕಿಬಿದ್ದಿರುವ ಆ ವೈದ್ಯ ಪೋಷಕನೇ ಡಾ.ಮನೋಜ್ ಶಿರೂರೆ.

ಯಾರಿದು ಡಾ. ಮನೋಜ್ ಶಿರೂರೆ? ಡಾ. ಮನೋಜ್ ಶಿರೂರೆ ಅವರು ಮಹಾರಾಷ್ಟ್ರದ ಲಾತೂರ್ ಮೂಲದ ಪ್ರಖ್ಯಾತ ಮಕ್ಕಳ ತಜ್ಞರು (Pediatrician). ಲಾತೂರಿನ ಓಲ್ಡ್ ಔಸಾ ರಸ್ತೆ ವಿಭಾಗದಲ್ಲಿ ಇವರಿಗೆ ಸೇರಿದ ‘ಸಿದ್ಧಿವಿನಾಯಕ ಮಕ್ಕಳ ಆಸ್ಪತ್ರೆ’ ಇದ್ದು, ಇದು ಅತ್ಯಂತ ಜನಪ್ರಿಯ ಆಸ್ಪತ್ರೆಯಾಗಿದೆ. ಸಮಾಜದಲ್ಲಿ ಉತ್ತಮ ಗೌರವ ಹೊಂದಿದ್ದ ವೈದ್ಯರೇ ಈಗ ಪೇಪರ್ ಲೀಕ್ ಹಗರಣದಲ್ಲಿ ಸಿಕ್ಕಿಬಿದ್ದಿರುವುದು ಇಡೀ ಮಹಾರಾಷ್ಟ್ರವನ್ನು ಬೆಚ್ಚಿಬೀಳಿಸಿದೆ.

ನಾಲ್ಕೂವರೆ ಗಂಟೆಗಳ ತೀವ್ರ ವಿಚಾರಣೆ ಮತ್ತು ಅರೆಸ್ಟ್ ನೀಟ್ ಹಗರಣದ ಬೆನ್ನುಬಿದ್ದಿರುವ ಸಿಬಿಐ ಅಧಿಕಾರಿಗಳು ಕಳೆದ ಎಂಟು ದಿನಗಳಿಂದ ಲಾತೂರ್‌ನಲ್ಲೇ ಬೀಡುಬಿಟ್ಟಿದ್ದಾರೆ. ಈ ಹಗರಣದ ಪ್ರಮುಖ ಆರೋಪಿ ಶಿವರಾಜ್ ಮೋಟೆಗಾಂವ್ಕರ್‌ನನ್ನು ಮೊದಲು ತೀವ್ರ ವಿಚಾರಣೆಗೆ ಒಳಪಡಿಸಿ ಬಂಧಿಸಿದ್ದ ಸಿಬಿಐಗೆ, ಆತನಿಂದ ಮಹತ್ವದ ಸುಳಿವು ಸಿಕ್ಕಿತ್ತು. ಮೋಟೆಗಾಂವ್ಕರ್ ನೀಡಿದ ಸಂಪರ್ಕಗಳ ಆಧಾರದ ಮೇಲೆ ಸಿಬಿಐ ಅಧಿಕಾರಿಗಳು ಬುಧವಾರ ಸಂಜೆ ನೇರವಾಗಿ ಡಾ. ಮನೋಜ್ ಶಿರೂರೆ ಅವರ ಆಸ್ಪತ್ರೆಯ ಮೇಲೆ ದಾಳಿ ಮಾಡಿದರು.

ಆಸ್ಪತ್ರೆಯಲ್ಲೇ ವೈದ್ಯರನ್ನು ಬರೋಬ್ಬರಿ ನಾಲ್ಕೂವರೆ ಗಂಟೆಗಳ ಕಾಲ ತೀವ್ರವಾಗಿ ತನಿಖೆ ನಡೆಸಲಾಯಿತು. ಅಧಿಕಾರಿಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ, ಕೊನೆಗೆ ವೈದ್ಯರು ತಾವು ಮಾಡಿದ ಅಪರಾಧವನ್ನು ಒಪ್ಪಿಕೊಂಡರು. ತಕ್ಷಣವೇ ಸಿಬಿಐ ಅಧಿಕಾರಿಗಳು ಅವರ ಮುಖಕ್ಕೆ ಕಪ್ಪು ಬಟ್ಟೆ ಮುಚ್ಚಿ ಬಂಧಿಸಿ ಕರೆದೊಯ್ದಿದ್ದಾರೆ.

ಮತ್ತಷ್ಟು ಓದಿ: ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಬೆನ್ನಲ್ಲೇ NTAನಲ್ಲಿ ಮಹತ್ವದ ಬದಲಾವಣೆ

ಆರೋಪವೇನು? ಡಾ. ಮನೋಜ್ ಶಿರೂರೆ ಅವರು ತಮ್ಮ ಮಗನಿಗೆ ನೀಟ್ ಪರೀಕ್ಷೆಯಲ್ಲಿ ಅಕ್ರಮವಾಗಿ ಸಹಾಯ ಮಾಡಲು ಪ್ರಮುಖ ಆರೋಪಿ ಶಿವರಾಜ್ ಮೋಟೆಗಾಂವ್ಕರ್‌ನೊಂದಿಗೆ ಕೈಜೋಡಿಸಿದ್ದರು. ಮಗನಿಗಾಗಿ ಪ್ರಶ್ನೆಪತ್ರಿಕೆ ಮತ್ತು ಅಗತ್ಯ ದಾಖಲೆಗಳನ್ನು ಮೋಟೆಗಾಂವ್ಕರ್‌ನಿಂದ ಪಡೆದ ಗಂಭೀರ ಆರೋಪ ಇವರ ಮೇಲಿದೆ.

ಮೊಬೈಲ್ ವಶ, ಬ್ಯಾಂಕ್ ಖಾತೆಗಳ ಮೇಲೆ ಕಣ್ಣು ಬಂಧನದ ವೇಳೆ ಸಿಬಿಐ ಅಧಿಕಾರಿಗಳು ಡಾ. ಶಿರೂರೆ ಅವರ ಮೊಬೈಲ್ ಫೋನ್ ಮತ್ತು ಆಸ್ಪತ್ರೆಯಲ್ಲಿದ್ದ ಕೆಲವು ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಮೊಬೈಲ್ ಮೂಲಕ ಅವರು ಮೋಟೆಗಾಂವ್ಕರ್ ಜೊತೆ ಎಷ್ಟು ದಿನಗಳಿಂದ ಸಂಪರ್ಕದಲ್ಲಿದ್ದರು? ನೀಟ್ ಪೇಪರ್ ಅನ್ನು ತಮ್ಮ ಮಗನಿಗೆ ಮಾತ್ರ ಬಳಸಿದ್ದರೇ ಅಥವಾ ಬೇರೆ ಯಾರಿಗಾದರೂ ಮಾರಾಟ ಮಾಡಿ ವೈರಲ್ ಮಾಡಿದ್ದರೇ? ಎಂಬಿತ್ಯಾದಿ ವಿಷಯಗಳ ಬಗ್ಗೆ ತನಿಖೆ ನಡೆಯುತ್ತಿದೆ.

ಅಲ್ಲದೆ, ಪೇಪರ್ ಪಡೆಯಲು ಇವರಿಬ್ಬರ ಮಧ್ಯೆ ಎಷ್ಟು ಕೋಟಿ ರೂಪಾಯಿಗಳ ಡೀಲ್ ನಡೆದಿತ್ತು ಎಂಬುದನ್ನು ಪತ್ತೆಹಚ್ಚಲು ಸಿಬಿಐ ಅಧಿಕಾರಿಗಳು ವೈದ್ಯರ ಬ್ಯಾಂಕ್ ಖಾತೆಗಳನ್ನು ಜಾಲಾಡುತ್ತಿದ್ದಾರೆ. ಹಗರಣದಲ್ಲಿ ಪೋಷಕರ ವಿರುದ್ಧ ಸಿಬಿಐ ಕೈಗೊಂಡ ಮೊದಲ ಕ್ರಮ ಇದಾಗಿದ್ದು, ಅಡ್ಡದಾರಿ ಹಿಡಿಯುವ ಇತರೆ ಪೋಷಕರಿಗೂ ಇದೊಂದು ಬಲವಾದ ಎಚ್ಚರಿಕೆಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!