AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women’s Reservation Bill: ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದ ಕಾನೂನು ಸಚಿವ ಅರ್ಜುನ್ ರಾಮ್

ಲೋಕಸಭೆಯಲ್ಲಿ ಅಂಗೀಕಾರ ಪಡೆದಿದ್ದ ಮಹಿಳಾ ಮೀಸಲಾತಿ ಮಸೂದೆ(Women's Reservation Bill)ಯನ್ನು ರಾಜ್ಯಸಭೆಯಲ್ಲಿ ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಇಂದು ಮಂಡಿಸಿದರು. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ನೀಡುವ ಮಹಿಳಾ ಮೀಸಲಾತಿ ಮಸೂದೆ 2023 ಅನ್ನು ಲೋಕಸಭೆ ಬುಧವಾರ ಅಂಗೀಕರಿಸಿತ್ತು. ಬಲವಾದ ಬೆಂಬಲವನ್ನು ಕೂಡ ಪಡೆಯಿತು. 60 ಸದಸ್ಯರನ್ನು ಒಳಗೊಂಡ ಎಂಟು ಗಂಟೆಗಳ ಚರ್ಚೆಯ ನಂತರ, ಮಸೂದೆಯನ್ನು ಅಂಗೀಕರಿಸಿತು, 454 ಸದಸ್ಯರು ಪರವಾಗಿ ಮತ ಚಲಾಯಿಸಿದರು, ಕೇವಲ ಇಬ್ಬರು ಅದರ ವಿರುದ್ಧವಾಗಿ ಮತ ಚಲಾಯಿಸಿದರು

Women's Reservation Bill: ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದ ಕಾನೂನು ಸಚಿವ ಅರ್ಜುನ್ ರಾಮ್
ಅರ್ಜುನ್Image Credit source: Hindustan Times
Follow us
ನಯನಾ ರಾಜೀವ್
|

Updated on: Sep 21, 2023 | 11:31 AM

ಲೋಕಸಭೆಯಲ್ಲಿ ಅಂಗೀಕಾರ ಪಡೆದಿದ್ದ ಮಹಿಳಾ ಮೀಸಲಾತಿ ಮಸೂದೆ(Women’s Reservation Bill)ಯನ್ನು ರಾಜ್ಯಸಭೆಯಲ್ಲಿ ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಇಂದು ಮಂಡಿಸಿದರು. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ನೀಡುವ ಮಹಿಳಾ ಮೀಸಲಾತಿ ಮಸೂದೆ 2023 ಅನ್ನು ಲೋಕಸಭೆ ಬುಧವಾರ ಅಂಗೀಕರಿಸಿತ್ತು. ಬಲವಾದ ಬೆಂಬಲವನ್ನು ಕೂಡ ಪಡೆಯಿತು. 60 ಸದಸ್ಯರನ್ನು ಒಳಗೊಂಡ ಎಂಟು ಗಂಟೆಗಳ ಚರ್ಚೆಯ ನಂತರ, ಮಸೂದೆಯನ್ನು ಅಂಗೀಕರಿಸಿತು, 454 ಸದಸ್ಯರು ಪರವಾಗಿ ಮತ ಚಲಾಯಿಸಿದರು, ಕೇವಲ ಇಬ್ಬರು ಅದರ ವಿರುದ್ಧವಾಗಿ ಮತ ಚಲಾಯಿಸಿದರು.

ಅಸಾದುದ್ದೀನ್ ಓವೈಸಿ ಮತ್ತು ಇಮ್ತಿಯಾಜ್ ಜಲೀಲ್ ಅವರು ಮಸೂದೆಯ ವಿರುದ್ಧ ಮತ ಚಲಾಯಿಸಿದ್ದಾರೆ. ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಪಕ್ಷದ ಬೆಂಬಲವನ್ನು ವಿಸ್ತರಿಸುವ ಸಂದರ್ಭದಲ್ಲಿ ಪ್ರಸ್ತಾವಿತ ಕಾನೂನಿನಡಿಯಲ್ಲಿ ಒಬಿಸಿ ಮಹಿಳೆಯರನ್ನು ಸೇರ್ಪಡೆಗೊಳಿಸುವಂತೆ ಪ್ರತಿಪಾದಿಸುವ ಮೂಲಕ ಬುಧವಾರ ಚರ್ಚೆಗೆ ಧ್ವನಿಗೂಡಿಸಿದರು.

ಮೀಸಲಾತಿಯನ್ನು ಜಾರಿಗೊಳಿಸುವಲ್ಲಿ ಯಾವುದೇ ವಿಳಂಬವಾಗಬಾರದು ಎಂದರು. 2023 ರ ಸಂವಿಧಾನ (ನೂರಾ ಇಪ್ಪತ್ತೆಂಟನೇ ತಿದ್ದುಪಡಿ) ಮಸೂದೆಗೆ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ನೀಡಿದ ಉತ್ತರದ ನಂತರ ಅನುಮೋದನೆ ಪಡೆಯಲಾಗಿದೆ.

ಮತ್ತಷ್ಟು ಓದಿ: Women’s Reservation Bill: ಇಂದು ರಾಜ್ಯಸಭೆಯಲ್ಲಿ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆ ಮಂಡನೆ

ನಾರಿ ಶಕ್ತಿ ವಂದನ್ ಅಧಿನಿಯಮ್ ಎಂದು ಕರೆಯಲ್ಪಡುವ ಈ ಮಹತ್ವದ ಶಾಸನವು ಮಂಗಳವಾರ ಹೊಸ ಸಂಸತ್ತಿನ ಕಟ್ಟಡಕ್ಕೆ ಸ್ಥಳಾಂತರಗೊಂಡ ನಂತರ ಲೋಕಸಭೆಯು ಅಂಗೀಕರಿಸಿದ ಮೊದಲ ಮಸೂದೆಯಾಗಿದೆ.

ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ರಾಜ್ಯಸಭೆಯಲ್ಲಿ ಮಸೂದೆಯನ್ನು ಮಂಡಿಸಿದರು. ಲೋಕಸಭೆಯಲ್ಲಿ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ನೀಡುವ ಮಹಿಳಾ ಮೀಸಲಾತಿ ಮಸೂದೆ, 2023 ಅನ್ನು ಅಂಗೀಕರಿಸುವಲ್ಲಿ ಬೆಂಬಲ ನೀಡಿದ ಲೋಕಸಭೆಯಲ್ಲಿನ ಎಲ್ಲಾ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ಅರ್ಪಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?