ಬಾಬಾ ಸಿದ್ದಿಕ್ ಹತ್ಯೆ ಆರೋಪಿ ಲಾರೆನ್ಸ್ ಬಿಷ್ಣೋಯ್ ಸೋದರ ಅನ್ಮೋಲ್ ಬಿಷ್ಣೋಯ್ ಅಮೆರಿಕದಲ್ಲಿ ಬಂಧನ

ಬಾಬಾ ಸಿದ್ದಿಕ್ ಹತ್ಯೆ ಪ್ರಕರಣ ಸೇರಿದಂತೆ ಕೆಲವು ಪ್ರಮುಖ ಅಪರಾಧಗಳಲ್ಲಿ ಅನ್ಮೋಲ್ ಬಿಷ್ಣೋಯ್ ಹೆಸರು ಕಾಣಿಸಿಕೊಂಡಿದೆ. ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಬಿಷ್ಣೋಯ್ ಹೆಸರು ಅಕ್ಟೋಬರ್‌ನಲ್ಲಿ ಮುಂಬೈನಲ್ಲಿನ ಅವರ ಮಗನ ಕಚೇರಿಯ ಹೊರಗೆ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರ ಹತ್ಯೆಯ ನಂತರ ಸುದ್ದಿಯಲ್ಲಿದೆ.

ಬಾಬಾ ಸಿದ್ದಿಕ್ ಹತ್ಯೆ ಆರೋಪಿ ಲಾರೆನ್ಸ್ ಬಿಷ್ಣೋಯ್ ಸೋದರ ಅನ್ಮೋಲ್ ಬಿಷ್ಣೋಯ್ ಅಮೆರಿಕದಲ್ಲಿ ಬಂಧನ
ಅನ್ಮೋಲ್ ಬಿಷ್ಣೋಯ್
Follow us
ಸುಷ್ಮಾ ಚಕ್ರೆ
|

Updated on: Nov 18, 2024 | 8:05 PM

ನವದೆಹಲಿ: ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಬಂಧಿಸಲಾಗಿದೆ. ಬಾಬಾ ಸಿದ್ಧಿಕ್ ಹತ್ಯೆ ಪ್ರಕರಣದಲ್ಲಿ ಅನ್ಮೋಲ್ ಬಿಷ್ಣೋಯ್ ಅವರನ್ನು ಕ್ಯಾಲಿಫೋರ್ನಿಯಾದಲ್ಲಿ ಬಂಧಿಸಲಾಯಿತು. ಕಳೆದ ವರ್ಷ ಭಾರತದಿಂದ ಪಲಾಯನ ಮಾಡಿದ ಅನ್ಮೋಲ್‌ನ ಹಸ್ತಾಂತರಕ್ಕೆ ಮುಂಬೈ ಪೊಲೀಸರು ಪ್ರಸ್ತಾವನೆಯನ್ನು ಕಳುಹಿಸಿದ ಕೆಲವೇ ದಿನಗಳಲ್ಲಿ ಅಮೆರಿಕ ತನ್ನ ಪ್ರದೇಶದಲ್ಲಿ ಅನ್ಮೋಲ್​ ಇರುವಿಕೆಯನ್ನು ಖಚಿತಪಡಿಸಿದೆ.

ಪ್ರಸ್ತುತ ಸಬರಮತಿಯ ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್ ತನ್ನ ಗ್ಯಾಂಗ್‌ನ ಆಡಳಿತವನ್ನು ಅನ್ಮೋಲ್‌ಗೆ ಹಸ್ತಾಂತರಿಸಿದ್ದರು. ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಭಾರತವು ಹಸ್ತಾಂತರ ಪ್ರಕ್ರಿಯೆಯನ್ನು ಪ್ರಾರಂಭಿಸಿತು.

ಇದನ್ನೂ ಓದಿ: ಸಲ್ಮಾನ್ ಖಾನ್​ ಕೇಸ್​ನಿಂದ ದೂರವಿರು; ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನಿಂದ ಪಪ್ಪು ಯಾದವ್​ಗೆ ಜೀವ ಬೆದರಿಕೆ

“ಅನ್ಮೋಲ್ ಬಿಷ್ಣೋಯ್ ಕ್ಯಾಲಿಫೋರ್ನಿಯಾ ಪೊಲೀಸರ ಬಂಧನದಲ್ಲಿದ್ದಾರೆ. ಎನ್ಐಎ ಮತ್ತು ಮಹಾರಾಷ್ಟ್ರ ಪೊಲೀಸರು ಸೇರಿದಂತೆ ಭಾರತೀಯ ಏಜೆನ್ಸಿಗಳು ಹಸ್ತಾಂತರದ ಕೆಲಸ ಮಾಡುತ್ತಿವೆ” ಎಂದು ಮೂಲಗಳು ತಿಳಿಸಿವೆ. ಅನ್ಮೋಲ್ ಹಲವಾರು ಹೈ ಪ್ರೊಫೈಲ್ ಪ್ರಕರಣಗಳಲ್ಲಿ ಬೇಕಾಗಿದ್ದಾರೆ. ಇತ್ತೀಚಿನ ಪ್ರಕರಣವೆಂದರೆ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರನ್ನು ಅಕ್ಟೋಬರ್ 12ರಂದು ಮುಂಬೈನಲ್ಲಿರುವ ಅವರ ಮಗ ಜೀಶನ್ ಸಿದ್ದಿಕ್ ಅವರ ಕಚೇರಿಯ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ದರೋಡೆಕೋರ ಸಿದ್ದಿಕ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ.

ಇದನ್ನೂ ಓದಿ: ಲಾರೆನ್ಸ್​ ಬಿಷ್ಣೋಯ್​ ಗ್ಯಾಂಗ್​ನಿಂದ ನಟ ಸಲ್ಮಾನ್​ ಖಾನ್​ಗೆ ಮತ್ತೆ ಕೊಲೆ ಬೆದರಿಕೆ

ಈ ತಿಂಗಳ ಮೊದಲ ವಾರದಲ್ಲಿ ಮುಂಬೈ ಪೊಲೀಸರು ಅನ್ಮೋಲ್ ಹಸ್ತಾಂತರಕ್ಕೆ ಔಪಚಾರಿಕ ಪ್ರಸ್ತಾವನೆಯನ್ನು ಕಳುಹಿಸಿದ್ದರು. ಅನ್ಮೋಲ್ ಬಿಷ್ಣೋಯ್ ತಮ್ಮ ದೇಶದಲ್ಲಿ ಇರುವ ಬಗ್ಗೆ ಅಮೆರಿಕದ ಅಧಿಕಾರಿಗಳು ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ ನಂತರ ಈ ಪ್ರಸ್ತಾಪವನ್ನು ಕಳುಹಿಸಲಾಗಿತ್ತು. ಮುಂಬೈ ಪೊಲೀಸರು ಅನ್ಮೋಲ್ ಬಿಷ್ಣೋಯ್ ಅವರ ಹಸ್ತಾಂತರದ ಪ್ರಸ್ತಾವನೆಯನ್ನು ಗೃಹ ಸಚಿವಾಲಯಕ್ಕೆ ಕಳುಹಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್ ಮನೆಗೆ ಕಾಲಿಡುತ್ತಲೇ ವಿಶೇಷ ಅಧಿಕಾರ ಪಡೆದ ರಜತ್, ಶೋಭಾ ಶೆಟ್ಟಿ
ಬಿಗ್ ಬಾಸ್ ಮನೆಗೆ ಕಾಲಿಡುತ್ತಲೇ ವಿಶೇಷ ಅಧಿಕಾರ ಪಡೆದ ರಜತ್, ಶೋಭಾ ಶೆಟ್ಟಿ
ನನ್ನಂತೆ ಬಸವರಾಜ ಬೊಮ್ಮಾಯಿ ಸಹ ಮಧುಮೇಹದಿಂದ ಬಳಲುತ್ತಿದ್ದಾರೆ: ಸಿದ್ದರಾಮಯ್ಯ
ನನ್ನಂತೆ ಬಸವರಾಜ ಬೊಮ್ಮಾಯಿ ಸಹ ಮಧುಮೇಹದಿಂದ ಬಳಲುತ್ತಿದ್ದಾರೆ: ಸಿದ್ದರಾಮಯ್ಯ
ಉಗ್ರಂ ಮಂಜು-ಮೋಕ್ಷಿತಾ ನಡುವೆ ದುಷ್ಮನಿ; ತೊಡೆ ತಟ್ಟಿದ ತ್ರಿವಿಕ್ರಮ್
ಉಗ್ರಂ ಮಂಜು-ಮೋಕ್ಷಿತಾ ನಡುವೆ ದುಷ್ಮನಿ; ತೊಡೆ ತಟ್ಟಿದ ತ್ರಿವಿಕ್ರಮ್
ಕೋವಿಡ್ ಹಗರಣ: ಕೆಲ ಅಂತೆ-ಕಂತೆಗಳಿಗೆ ತೆರೆ ಎಳೆದ ಡಾ ಸಿಎನ್​ ಮಂಜುನಾಥ್
ಕೋವಿಡ್ ಹಗರಣ: ಕೆಲ ಅಂತೆ-ಕಂತೆಗಳಿಗೆ ತೆರೆ ಎಳೆದ ಡಾ ಸಿಎನ್​ ಮಂಜುನಾಥ್
ನಮ್ಮ ಸರ್ಕಾರದ ವಿರುದ್ಧ ಯಾವುದೇ ಆರೋಪ ಸಾಬೀತಾಗಿಲ್ಲ: ಚಲುವರಾಯಸ್ವಾಮಿ
ನಮ್ಮ ಸರ್ಕಾರದ ವಿರುದ್ಧ ಯಾವುದೇ ಆರೋಪ ಸಾಬೀತಾಗಿಲ್ಲ: ಚಲುವರಾಯಸ್ವಾಮಿ
ಬಾಗಲಕೋಟೆ: ಸ್ನೇಹಿತನ ಮದುವೆಯಲ್ಲಿ ಕುಣಿದು ಕುಪ್ಪಳಿಸಿದ ವಿದೇಶಿಗರು
ಬಾಗಲಕೋಟೆ: ಸ್ನೇಹಿತನ ಮದುವೆಯಲ್ಲಿ ಕುಣಿದು ಕುಪ್ಪಳಿಸಿದ ವಿದೇಶಿಗರು
ಕುಮಾರಸ್ವಾಮಿ ವಿರುದ್ಧ ಸಾವಿರಾರು ಕೋಟಿ ರೂ. ಗಿಫ್ಟ್​ ಆರೋಪ
ಕುಮಾರಸ್ವಾಮಿ ವಿರುದ್ಧ ಸಾವಿರಾರು ಕೋಟಿ ರೂ. ಗಿಫ್ಟ್​ ಆರೋಪ
ಚನ್ನಪಟ್ಟಣ ಜೊತೆ ದೇವೇಗೌಡರ ನಂಟು, ಮತ್ತೊಮ್ಮೆ ಇಸವಿ ತಪ್ಪು ಹೇಳಿದ ನಿಖಿಲ್
ಚನ್ನಪಟ್ಟಣ ಜೊತೆ ದೇವೇಗೌಡರ ನಂಟು, ಮತ್ತೊಮ್ಮೆ ಇಸವಿ ತಪ್ಪು ಹೇಳಿದ ನಿಖಿಲ್
ಪತ್ನಿ ರೇವತಿಯವರ ಇಚ್ಛೆಯ ಮೇರೆಗೆ ಹರದನಹಳ್ಳಿಗೆ ಭೇಟಿ ನೀಡಿದ ನಿಖಿಲ್
ಪತ್ನಿ ರೇವತಿಯವರ ಇಚ್ಛೆಯ ಮೇರೆಗೆ ಹರದನಹಳ್ಳಿಗೆ ಭೇಟಿ ನೀಡಿದ ನಿಖಿಲ್
ಟೀಮ್ ಇಂಡಿಯಾ ಬೌಲಿಂಗ್ ಕೋಚ್ ಜೊತೆ 'ಲೆಜೆಂಡ್' ಸಿರಾಜ್ ಹುಡುಗಾಟ
ಟೀಮ್ ಇಂಡಿಯಾ ಬೌಲಿಂಗ್ ಕೋಚ್ ಜೊತೆ 'ಲೆಜೆಂಡ್' ಸಿರಾಜ್ ಹುಡುಗಾಟ