ಕೇಂದ್ರದ ವಿರುದ್ಧ ರಾಹುಲ್, ಪ್ರಿಯಾಂಕಾ ಪ್ರತಿಭಟನೆ

| Updated By: ಸಾಧು ಶ್ರೀನಾಥ್​

Updated on: Jan 15, 2021 | 2:43 PM

ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸದೇ ಕಾಂಗ್ರೆಸ್ ತನ್ನ ಹೋರಾಟವನ್ನು ಕೈಬಿಡುವುದಿಲ್ಲ ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. ಕೊನೆಯವರೆಗೂ, ಚಳುವಳಿಯ ಕೊನೆಯವರೆಗೂ ರೈತರ ಜತೆ ನಿಲ್ಲುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ‘ಕಿಸಾನ್ ಅಧಿಕಾರ್ ದಿವಸ್’ ಎಂಬ ಶೀರ್ಷಿಕೆಯಿಡಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಇಡೀ ದೇಶವ್ಯಾಪಿ ಕಾರ್ಯಕ್ರಮ ಸಂಯೋಜಿಸಿದೆ.

ಕೇಂದ್ರದ ವಿರುದ್ಧ ರಾಹುಲ್, ಪ್ರಿಯಾಂಕಾ ಪ್ರತಿಭಟನೆ
ಪ್ರತಿಭಟನೆಯಲ್ಲಿ ಭಾಗಿಯಾದ ರಾಹುಲ್ ಗಾಂಧಿ
Follow us on

ದೆಹಲಿ: ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್​ರ ಅಧಿಕೃತ ನಿವಾಸದ ಎದುರು ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಆಯೋಜಿಸಿರುವ ‘ರೈತರ ಅಧಿಕಾರಕ್ಕಾಗಿ ಧ್ವನಿ ಎತ್ತಿ’ ಕಾರ್ಯಕ್ರಮದ ಅಂಗವಾಗಿ ಕಾಂಗ್ರೆಸ್ ಕಾರ್ಯಕರ್ತರ ಜತೆ ಮೆರವಣಿಗೆ ನಡೆಸಿದರು. ಕೃಷಿ ಕಾಯ್ದೆಗಳ ವಿರುದ್ಧ ಇಡೀ ದೇಶವೇ ಸಿಡಿದೆದ್ದಿದೆ. ಜತೆಗೆ, ತೈಲ ಬೆಲೆಯಲ್ಲೂ ಏರಿಕೆಯಾಗಿದೆ. ಹೀಗಾಗಿ ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತುವುದು ಅನಿವಾರ್ಯವಾಗಿದೆ ಎಂದು ರಾಹುಲ್ ಗಾಂಧಿ ರಾಜ್ ನಿವಾಸದ ಎದುರು ನಡೆಸಿದ ಪ್ರತಿಭಟನೆಗೆ ಬೆಂಬಲ ನೀಡುವಂತೆ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸದೇ ಕಾಂಗ್ರೆಸ್ ತನ್ನ ಹೋರಾಟವನ್ನು ಕೈಬಿಡುವುದಿಲ್ಲ ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. ಕೊನೆಯವರೆಗೂ, ಚಳುವಳಿಯ ಕೊನೆಯವರೆಗೂ ರೈತರ ಜತೆ ನಿಲ್ಲುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ‘ಕಿಸಾನ್ ಅಧಿಕಾರ್ ದಿವಸ್’ ಎಂಬ ಶೀರ್ಷಿಕೆಯಿಡಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಇಡೀ ದೇಶವ್ಯಾಪಿ ಕಾರ್ಯಕ್ರಮ ಸಂಯೋಜಿಸಿದೆ.

ಕಲ್ಪನೆಯಲ್ಲಿ ಮಾತ್ರ ಪ್ರಜಾಪ್ರಭುತ್ವ ಜಾರಿಯಲ್ಲಿದೆ: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ