“ಕೃಷ್ಣ ಜನ್ಮಭೂಮಿ” (Krishna Janmabhoomi) ಅಥವಾ ಭಗವಾನ್ ಕೃಷ್ಣನ ಜನ್ಮಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಹೇಳಲಾದ ಮಥುರಾದಲ್ಲಿರುವ (Mathura) ಮಸೀದಿಯನ್ನು ತೆರವುಗೊಳಿಸಬೇಕೆಂದು ಉತ್ತರ ಪ್ರದೇಶದ (Uttar pradesh) ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದು, ಈ ಮನವಿಯನ್ನು ನ್ಯಾಯಾಲಯ ಸ್ವೀಕರಿಸಿದೆ. ಅಂದರೆ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯಲ್ಲಿದ್ದು, ಇದಕ್ಕೆ ದಿನಾಂಕ ನಿಗದಿ ಆಗಬೇಕಿದೆ. 17ನೇ ಶತಮಾನದ ಶಾಹಿ ಈದ್ಗಾ ಮಸೀದಿಯನ್ನು(Shahi Idgah Masjid) ಕತ್ರಾ ಕೇಶವ್ ದೇವ್ ದೇವಸ್ಥಾನದಿಂದ ತೆರವು ಮಾಡಬೇಕೆಂದು ಒತ್ತಾಯಿಸಿ ಹಿಂದೂ ಸಂಘಟನೆಗಳು ಮಾಡಿದ ಮೊಕದ್ದಮೆಗಳಲ್ಲಿ ಇದೂ ಒಂದಾಗಿದ್ದು, ಮಸೀದಿಯನ್ನು ಕೃಷ್ಣನ ಜನ್ಮಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಹೇಳಲಾಗಿದೆ. ಶಾಹಿ ಈದ್ಗಾ ಮಸೀದಿಯನ್ನು 1669-70ರಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ ಕೃಷ್ಣ ಜನ್ಮಭೂಮಿಯಲ್ಲಿ ನಿರ್ಮಿಸಲಾಗಿದೆ ಎಂದು ಅರ್ಜಿಗಳು ಹೇಳುತ್ತವೆ. ಲಖನೌ ನಿವಾಸಿ ರಂಜನಾ ಅಗ್ನಿಹೋತ್ರಿ ಅವರು ಕತ್ರಾ ಕೇಶವ್ ದೇವ್ ದೇವಸ್ಥಾನದ “ಭಗವಾನ್ ಕೃಷ್ಣನ ಸ್ನೇಹಿತ” ಎಂದು ಮೊಕದ್ದಮೆ ಹೂಡಿದ್ದರು. “ಶ್ರೀಕೃಷ್ಣನ ಆರಾಧಕರಾದ ನಮಗೆ ಅವರ ಆಸ್ತಿಯನ್ನು ಮರುಸ್ಥಾಪಿಸುವಂತೆ ಕೋರಿ ಮೊಕದ್ದಮೆ ಹೂಡುವ ಹಕ್ಕಿದೆ. ಕೃಷ್ಣ ಜನ್ಮಭೂಮಿಯ ಮೇಲೆ ಮಸೀದಿಯನ್ನು ತಪ್ಪಾಗಿ ನಿರ್ಮಿಸಲಾಗಿದೆ. ಆಸ್ತಿ ಹಂಚಿಕೆ ವಿಚಾರದಲ್ಲಿ ಹಲವು ವರ್ಷಗಳ ಹಿಂದೆಯೇ ರಾಜಿ ಮಾಡಿಕೊಳ್ಳಲಾಗಿತ್ತು, ಆದರೆ ಆ ರಾಜಿ ಕಾನೂನುಬಾಹಿರವಾಗಿದೆ ಎಂದು ಅರ್ಜಿದಾರರ ಪರ ವಕೀಲ ಗೋಪಾಲ್ ಖಂಡೇಲ್ವಾಲ್ ಹೇಳಿದ್ದಾರೆ.
ಮಥುರಾದ ಸಿವಿಲ್ ಕೋರ್ಟ್ 1991 ರ ಆರಾಧನಾ ಸ್ಥಳಗಳ ಕಾಯಿದೆಯಡಿಯಲ್ಲಿ ಪ್ರಕರಣವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಈ ಹಿಂದೆ ವಜಾಗೊಳಿಸಿತ್ತು.
1992 ರಲ್ಲಿ ಹಿಂದೂ ಕಾರ್ಯಕರ್ತರು ಧ್ವಂಸಗೊಳಿಸಿದ 16 ನೇ ಶತಮಾನದ ಬಾಬರಿ ಮಸೀದಿಯನ್ನು ಒಳಗೊಂಡಿರುವ ಅಯೋಧ್ಯೆ ದೇವಸ್ಥಾನ-ಮಸೀದಿ ಪ್ರಕರಣವು ಕಾನೂನಿಗೆ ಮಾತ್ರ ಅಪವಾದವಾಗಿದೆ. ಬಾಬರಿ ಮಸೀದಿಯನ್ನು ಪ್ರಾಚೀನ ದೇವಾಲಯದ ಅವಶೇಷಗಳ ಮೇಲೆ ನಿರ್ಮಿಸಲಾಗಿದೆ ವಾದಿಸಲಾಗಿತ್ತು. 2019 ರಲ್ಲಿ ಸುಪ್ರೀಂಕೋರ್ಟ್ ಮಸೀದಿ ಸ್ಥಳವನ್ನು ಹಿಂದೂಗಳಿಗೆ ಭವ್ಯವಾದ ರಾಮಮಂದಿರಕ್ಕಾಗಿ ಹಸ್ತಾಂತರಿಸಿತು ಮತ್ತು ಮಸೀದಿಗಾಗಿ ಪರ್ಯಾಯ ಭೂಮಿ ನೀಡಿ ಆದೇಶ ಹೊರಡಿಸಿತ್ತು.
ಮಥುರಾ ನ್ಯಾಯಾಲಯವು ಕೃಷ್ಣ ಜನ್ಮಭೂಮಿ ಮೊಕದ್ದಮೆಯನ್ನು ಈ ಹಿಂದೆ ವಜಾಗೊಳಿಸಿದ್ದು, ಅದನ್ನು ನೋಂದಾಯಿಸಿದರೆ ಹೆಚ್ಚಿನ ಸಂಖ್ಯೆಯ ಆರಾಧಕರು ವಿವಿಧ ಪ್ರಕರಣಗಳಲ್ಲಿ ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ಹೇಳಿದರು. ಆಗ ಅರ್ಜಿದಾರರು ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದರು.
ಶ್ರೀಕೃಷ್ಣನ ಭಕ್ತರಾದ ತಮಗೆ ನ್ಯಾಯಾಲಯವನ್ನು ಸಂಪರ್ಕಿಸುವ ಹಕ್ಕಿದೆ ಎಂದು ಅರ್ಜಿದಾರರು ತಮ್ಮ ದಾವೆಯಲ್ಲಿ ವಾದಿಸಿದ್ದು ಭಗವಾನ್ ಕೃಷ್ಣನ ನಿಜವಾದ ಜನ್ಮಸ್ಥಳದಲ್ಲಿ ಪೂಜೆ ಮಾಡುವ ಹಕ್ಕಿದೆ ಎಂದು ಅವರು ಹೇಳುತ್ತಾರೆ.
ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ
Published On - 1:58 pm, Thu, 19 May 22