Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕೋರ್ಟ್​ನಲ್ಲಿ ನ್ಯಾಯಮೂರ್ತಿ ಜತೆ ಅನುಚಿತ ವರ್ತನೆ, ವಕೀಲನಿಗೆ 6 ತಿಂಗಳ ಜೈಲು ಶಿಕ್ಷೆ

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಅಲಹಾಬಾದ್ ಹೈಕೋರ್ಟ್ ವಕೀಲ ಅಶೋಕ್ ಪಾಂಡೆ ಅವರಿಗೆ ಆರು ತಿಂಗಳ ಜೈಲು(Jail) ಶಿಕ್ಷೆ ವಿಧಿಸಿದೆ. ಅವರು ವಕೀಲರ ಉಡುಪನ್ನು ಧರಿಸದೆ ಮತ್ತು ಶರ್ಟ್ ಗುಂಡಿಗಳನ್ನು ತೆಗೆದು ನ್ಯಾಯಾಲಯಕ್ಕೆ ಬಂದಿದ್ದ. ನ್ಯಾಯಮೂರ್ತಿಗಳಾದ ವಿವೇಕ್ ಚೌಧರಿ ಮತ್ತು ಬಿ.ಆರ್. ಸಿಂಗ್ ಅವರ ವಿಭಾಗೀಯ ಪೀಠವು ಗುರುವಾರ ಪಾಂಡೆ ವರ್ತನೆಗೆ ಕೋಪಗೊಂಡು ಶಿಕ್ಷೆಯನ್ನು ಘೋಷಿಸಿದ್ದಾರೆ. 2,000 ರೂ. ದಂಡವನ್ನೂ ವಿಧಿಸಿದ ನ್ಯಾಯಪೀಠ, ತಪ್ಪಿದಲ್ಲಿ ಒಂದು ತಿಂಗಳು ಹೆಚ್ಚುವರಿಯಾಗಿ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ತಿಳಿಸಿದೆ

ಹೈಕೋರ್ಟ್​ನಲ್ಲಿ ನ್ಯಾಯಮೂರ್ತಿ ಜತೆ ಅನುಚಿತ ವರ್ತನೆ, ವಕೀಲನಿಗೆ 6 ತಿಂಗಳ ಜೈಲು ಶಿಕ್ಷೆ
ಅಲಹಾಬಾದ್ ಹೈಕೋರ್ಟ್​
Follow us
ನಯನಾ ರಾಜೀವ್
|

Updated on: Apr 11, 2025 | 11:31 AM

ಅಲಹಾಬಾದ್, ಏಪ್ರಿಲ್ 11: 2021 ರ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಅಲಹಾಬಾದ್ ಹೈಕೋರ್ಟ್ ವಕೀಲ ಅಶೋಕ್ ಪಾಂಡೆ ಅವರಿಗೆ ಆರು ತಿಂಗಳ ಜೈಲು(Jail) ಶಿಕ್ಷೆ ವಿಧಿಸಿದೆ. ಅವರು ವಕೀಲರ ಉಡುಪನ್ನು ಧರಿಸದೆ ಮತ್ತು ಶರ್ಟ್ ಗುಂಡಿಗಳನ್ನು ತೆಗೆದು ನ್ಯಾಯಾಲಯಕ್ಕೆ ಬಂದಿದ್ದ. ನ್ಯಾಯಮೂರ್ತಿಗಳಾದ ವಿವೇಕ್ ಚೌಧರಿ ಮತ್ತು ಬಿ.ಆರ್. ಸಿಂಗ್ ಅವರ ವಿಭಾಗೀಯ ಪೀಠವು ಗುರುವಾರ ಪಾಂಡೆ ವರ್ತನೆಗೆ ಕೋಪಗೊಂಡು ಶಿಕ್ಷೆಯನ್ನು ಘೋಷಿಸಿದ್ದಾರೆ. 2,000 ರೂ. ದಂಡವನ್ನೂ ವಿಧಿಸಿದ ನ್ಯಾಯಪೀಠ, ತಪ್ಪಿದಲ್ಲಿ ಒಂದು ತಿಂಗಳು ಹೆಚ್ಚುವರಿಯಾಗಿ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ತಿಳಿಸಿದೆ.

ವಕೀಲ ಅಶೋಕ್ ಪಾಂಡೆ ಅವರಿಗೆ ಲಕ್ನೋದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ಶರಣಾಗಲು ನಾಲ್ಕು ವಾರಗಳ ಕಾಲಾವಕಾಶ ನೀಡಲಾಗಿದೆ. ಪಾಂಡೆ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ ಪೀಠ, ಅಲಹಾಬಾದ್ ಹೈಕೋರ್ಟ್ ಮತ್ತು ಅದರ ಲಕ್ನೋ ಪೀಠದಲ್ಲಿ ವಕೀಲಿ ವೃತ್ತಿ ಮಾಡುವುದನ್ನು ಏಕೆ ನಿರ್ಬಂಧಿಸಬಾರದು ಎಂದು ಕೇಳಿದೆ. ಅವರು ಮೇ 1 ರೊಳಗೆ ಪ್ರತಿಕ್ರಿಯಿಸಬೇಕು. ಆಗಸ್ಟ್ 18, 2021 ರಂದು ಪಾಂಡೆ ನ್ಯಾಯಾಲಯಕ್ಕೆ ವಕೀಲರ ಉಡುಪಿನಲ್ಲಿ ಬಾರದೆ, ಗುಂಡಾಗಳ ರೀತಿಯಲ್ಲಿ ಶರ್ಟ್​ನ ಗುಂಡಿಗಳನ್ನು ತೆಗೆದುಕೊಂಡು ಬಂದಿದ್ದರು.

ಪ್ರಕರಣವೊಂದರ ವಿಚಾರಣೆಯ ಸಂದರ್ಭದಲ್ಲಿ ವಕೀಲ ಅಶೋಕ್ ಪಾಂಡೆ ನ್ಯಾಯಮೂರ್ತಿಗಳನ್ನು ‘ಗೂಂಡಾಗಳು’ ಎಂದು ಕರೆದಿದ್ದರು. ನ್ಯಾಯಮೂರ್ತಿ ವಿವೇಕ್ ಚೌಧರಿ ಮತ್ತು ನ್ಯಾಯಮೂರ್ತಿ ಬ್ರಿಜ್ ರಾಜ್ ಸಿಂಗ್ ಅವರ ಪೀಠವು ವಕೀಲ ಪಾಂಡೆ ಅವರನ್ನು ಕ್ರಿಮಿನಲ್ ನ್ಯಾಯಾಂಗ ನಿಂದನೆಗಾಗಿ ತಪ್ಪಿತಸ್ಥರೆಂದು ಘೋಷಿಸಿತು.

ಇದನ್ನೂ ಓದಿ
Image
ದೆಹಲಿಯ ಕೆಂಪು ಕೋಟೆ, ಜಾಮಾ ಮಸೀದಿಗೆ ಹುಸಿ ಬಾಂಬ್ ಬೆದರಿಕೆ
Image
ಜಮೀನು ವಿಚಾರಕ್ಕೆ ಜಗಳ ಕೊಲೆಯಲ್ಲಿ ಅಂತ್ಯ​: 12 ಮಂದಿಗೆ ಜೀವಾವಧಿ ಶಿಕ್ಷೆ
Image
ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕತ್ತು ಸೀಳಿ, ಕಿಟಕಿಯಿಂದ ಕೆಳಗೆಸೆದ ಪಾಪಿ
Image
ಪ್ರೇಮ ವಿವಾಹಕ್ಕೆ ಐವರ ಕೊಲೆ, ಮೂವರಿಗೆ ಗಲ್ಲು, 9 ಮಂದಿಗೆ ಜೀವಾವಧಿ ಶಿಕ್ಷೆ

ಮತ್ತಷ್ಟು ಓದಿ: ಲಂಚಕ್ಕಾಗಿ ಕೈದಿ ಮೇಲೆ ಹಲ್ಲೆ: ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳ ವಿರುದ್ಧ ದೂರು

2003 ರಿಂದ 2017 ರ ನಡುವೆ ಅವರು ಈ ರೀತಿ ನಡೆದುಕೊಂಡಿರುವ ಬಗ್ಗೆ ಹಲವು ವರದಿಗಳಿವೆ. ಇಂತಹ ಪುನರಾವರ್ತಿತ ದುಷ್ಕೃತ್ಯಗಳು ಪಾಂಡೆ ದಾರಿ ತಪ್ಪುತ್ತಿದ್ದಾರೆ ಮಾತ್ರವಲ್ಲದೆ ನ್ಯಾಯಾಲಯದ ಅಧಿಕಾರವನ್ನು ಉದ್ದೇಶಪೂರ್ವಕವಾಗಿ ದುರ್ಬಲಗೊಳಿಸುತ್ತಿದ್ದಾರೆ ಎಂದು ಹೇಳಿದೆ. ನ್ಯಾಯಾಲಯದ ಆದೇಶಗಳನ್ನು ಪಾಲಿಸುತ್ತಿಲ್ಲ, ಯಾವುದೇ ಸುಧಾರಣೆಯಾಗಿಲ್ಲ, ಅವರು ತನ್ನ ತಪ್ಪನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಆಗಸ್ಟ್ 18, 2021 ರಂದು, ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ದಿನೇಶ್ ಕುಮಾರ್ ಸಿಂಗ್ ಅವರ ಪೀಠವು ಪ್ರಕರಣದ ವಿಚಾರಣೆ ನಡೆಸುತ್ತಿತ್ತು. ಪಾಂಡೆ ಅವರು ಇರಬೇಕಾದ ಉಡುಪಿನಲ್ಲಿ ಬೆಂಚ್ ಮುಂದೆ ಇರಲಿಲ್ಲ. ಅವನು ಸಮವಸ್ತ್ರದ ಬದಲು ಸಿವಿಲ್ ಡ್ರೆಸ್‌ನಲ್ಲಿದ್ದರು. ಶರ್ಟ್​ನ ಗುಂಡಿಗಳು ಕೂಡ ತೆಗೆದಿದ್ದರು, ಹೀಗಾಗಿ ಸಮವಸ್ತ್ರದಲ್ಲಿ ಬರುವಂತೆ ಸೂಚಿಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ