AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಂತಿಯುತ ಪ್ರತಿಭಟನೆಯಲ್ಲಿ ಭಾಗವಹಿಸಲು ವಕೀಲರಿಗೂ ಹಕ್ಕಿದೆ; ಸುಪ್ರೀಂ ಕೋರ್ಟ್ ಸ್ಪಷ್ಟನೆ

ಪ್ರತಿಭಟನೆಗಳ ವೇಳೆ ಪೊಲೀಸರ ವತಿಯಿಂದ ನಡೆದಿದೆ ಎನ್ನಲಾದ ದೌರ್ಜನ್ಯಗಳು ಹಾಗೂ ಕ್ರಮಗಳ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ವೇಳೆ, ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಪ್ರತಿಯೊಬ್ಬ ವಕೀಲರು ಮತ್ತು ಬಾರ್ ಕೌನ್ಸಿಲ್ ಸದಸ್ಯರಿಗೂ ಗುರುತಿಸಲ್ಪಟ್ಟ ಸ್ಥಳಗಳಲ್ಲಿ ಶಾಂತಿಯುತ ಪ್ರತಿಭಟನೆಗಳಲ್ಲಿ ಭಾಗವಹಿಸುವ ಮೂಲಭೂತ ಹಕ್ಕಿದೆ ಎಂದು ಸ್ಪಷ್ಟಪಡಿಸಿದ್ದಾರೆ.   ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ರಾಜಕೀಯ ಹಾಗೂ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆಗಳ ಕಾವು ಜೋರಾಗಿದೆ. ಈ ವೇಳೆ ವಕೀಲರ ಬಂಧನ ಹಾಗೂ ಪೊಲೀಸ್ ದೌರ್ಜನ್ಯದ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ನ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಶಾಂತಿಯುತ ಪ್ರತಿಭಟನೆಯಲ್ಲಿ ಭಾಗವಹಿಸಲು ವಕೀಲರಿಗೂ ಹಕ್ಕಿದೆ; ಸುಪ್ರೀಂ ಕೋರ್ಟ್ ಸ್ಪಷ್ಟನೆ
ಸುಪ್ರೀಂ ಕೋರ್ಟ್Image Credit source: Getty Images
ಸುಷ್ಮಾ ಚಕ್ರೆ
|

Updated on: Oct 12, 2026 | 3:06 PM

Share

ನವದೆಹಲಿ, ಅಕ್ಟೋಬರ್ 12: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹಾಗೂ ಚುನಾವಣಾ ಆಯೋಗದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳ ವೇಳೆ ಪೊಲೀಸರ ದೌರ್ಜನ್ಯ ಮತ್ತು ವಕೀಲರ ಬಂಧನದ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ಪ್ರತಿಯೊಬ್ಬ ವಕೀಲರು ಮತ್ತು ಬಾರ್ ಕೌನ್ಸಿಲ್ ಸದಸ್ಯರಿಗೂ ನಿಗದಿತ ಸ್ಥಳಗಳಲ್ಲಿ ಶಾಂತಿಯುತ ಪ್ರತಿಭಟನೆಗಳಲ್ಲಿ ಭಾಗವಹಿಸುವ ಮೂಲಭೂತ ಹಕ್ಕಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹಾಗೂ ನ್ಯಾಯಮೂರ್ತಿಗಳಾದ ಜಾಯ್‌ಮಲ್ಯ ಬಾಗ್ಚಿ ಮತ್ತು ವಿ. ಮೊಹನಾ ಅವರನ್ನೊಳಗೊಂಡ ಪೀಠದ ಮುಂದೆ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ಅವರು ಈ ವಿಷಯವನ್ನು ಪ್ರಸ್ತಾಪಿಸಿದಾಗ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ಅರ್ಜಿಯ ವಿಚಾರಣೆಯನ್ನು ನಾಳೆಗೆ (ಮಂಗಳವಾರ) ನಿಗದಿಪಡಿಸಿದೆ.

ಪೊಲೀಸ್ ದೌರ್ಜನ್ಯದ ಆರೋಪ:

ಪ್ರತಿಭಟನೆಯ ವೇಳೆ ಹಿರಿಯ ವಕೀಲ ಶಾದನ್ ಫರಾಸತ್ ಅವರನ್ನು ಬೀದಿಗಳಲ್ಲಿ ಎಳೆದಾಡಲಾಗಿದೆ ಎಂದು ವಕೀಲರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಅಲ್ಲದೆ, ಬಿಎನ್‌ಎಸ್‌ಎಸ್ ಸೆಕ್ಷನ್ 163ರ ಆದೇಶವು ಸಾರ್ವಜನಿಕ ಡೊಮೈನ್‌ನಲ್ಲಿ ಲಭ್ಯವಿಲ್ಲದೆ ಪೊಲೀಸರು ನಿರಂಕುಶವಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ಗೆ ನಾಳೆ ವಿಪಕ್ಷಗಳ ಪಾದಯಾತ್ರೆ; ಎಸ್‌ಐಆರ್, ಚುನಾವಣಾ ಆಯುಕ್ತರ ವಿರುದ್ಧ ಸಿಜೆಐ ಮಧ್ಯಸ್ಥಿಕೆಗೆ ಮನವಿ

ಹಿರಿಯ ವಕೀಲರ ಬಂಧನ:

ಪ್ರತಿಭಟನೆಯ ಸಂದರ್ಭದಲ್ಲಿ ಹಿರಿಯ ವಕೀಲರಾದ ದಿನೇಶ್ ದ್ವಿವೇದಿ ಮತ್ತು ಉತ್ತರಾ ಬಾಬ್ಬರ್ ಅವರನ್ನು ಬಸ್‌ಗಳಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ ವಕೀಲರು, ಮಕ್ಕಳ ಮೇಲೂ ಲಾಠಿಚಾರ್ಜ್ ಮಾಡಿರುವ ದೃಶ್ಯಗಳ ವಿಡಿಯೋಗಳನ್ನು ಮಂಗಳವಾರದ ವಿಚಾರಣೆಯ ವೇಳೆ ನ್ಯಾಯಾಲಯಕ್ಕೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ಸ್ಪಷ್ಟನೆ:

ವಕೀಲರ ಮನವಿಯನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿಗಳು, ಪ್ರತಿಯೊಬ್ಬ ವಕೀಲರಿಗೂ ಗುರುತಿಸಲ್ಪಟ್ಟ ಸ್ಥಳಗಳಲ್ಲಿ ಶಾಂತಿಯುತ ಪ್ರತಿಭಟನೆಗಳಲ್ಲಿ ಭಾಗವಹಿಸುವ ಹಕ್ಕಿದೆ ಎಂದು ಪುನರುಚ್ಚರಿಸಿದ್ದು, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಹಾಗೂ ಇತರರು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಮಂಗಳವಾರ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More