ವಕೀಲರು ಜನರ ಜತೆ ಸಂಪರ್ಕಕ್ಕೆ ಬಂದರಷ್ಟೇ ಜೀವನ ನಡೆಸಬಹುದು; ಸುಪ್ರೀಂಕೋರ್ಟ್

Supreme Court on Corona Vaccine : ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಮತ್ತು ವಿ.ರಾಮಸುಬ್ರಹ್ಮಣಿಯನ್ ಅವರುಗಳ ನ್ಯಾಯಪೀಠ, ದೆಹಲಿ ಹೈಕೋರ್ಟ್ ಈ ಕುರಿತು ಯಾವುದೇ ಆದೇಶ ಜಾರಿಗೊಳಿಸಿಲ್ಲ. ಲಸಿಕೆ ತಯಾರಿಕಾ ಕಂಪನಿಗಳ ಉತ್ಪಾನಾ ಸಾಮರ್ಥ್ಯ ಅರಿಯುವ ದೃಷ್ಟಿಯಿಂದ ದೆಹಲಿ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆಯಷ್ಟೇ ಎಂದು ಸರ್ವೋಚ್ಛ ನ್ಯಾಯಾಲಯ ಹೇಳಿದೆ.

ವಕೀಲರು ಜನರ ಜತೆ ಸಂಪರ್ಕಕ್ಕೆ ಬಂದರಷ್ಟೇ ಜೀವನ ನಡೆಸಬಹುದು; ಸುಪ್ರೀಂಕೋರ್ಟ್
ಸುಪ್ರೀಂ ಕೋರ್ಟ್
Follow us
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Mar 18, 2021 | 9:11 PM

ದೆಹಲಿ: ವಕೀಲರು ಜನಸಾಮಾನ್ಯರ ಜತೆ ಸಂಪರ್ಕಕ್ಕೆ ಬಂದರೆ ಮಾತ್ರ ಜೀವನ ನಡೆಸಬಹುದು. ಕೊರೊನಾ ಭಯದಿಂದ ಅವರು ಜನಸಂಪರ್ಕಕ್ಕೆ ಬರದೇ ಇದ್ದರೆ ಜೀವನ ನಡೆಸಲು ಸಾಧ್ಯವಾಗದು. ಹೀಗಾಗಿ ವಕೀಲರಿಗೆ ಜನಸಂಪರ್ಕಕ್ಕೆ ಬಂದರೂ ತಮಗೆ ಏನೂ ಆಗದು, ಜೀವಕ್ಕೆ ಕುತ್ತು ಬರದು ಎಂಬ ಭರವಸೆ ನೀಡುವ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್ ಅಬಿಪ್ರಾಯಪಟ್ಟಿದೆ. ನ್ಯಾಯಾಲಯದ ಸಿಬ್ಬಂದಿಗಳಿಗೆ ಆದ್ಯತೆಯ ಮೇರೆಗೆ ಕೊರೊನ ಲಸಿಕೆ ನೀಡಬೇಕು ಎಂದು ದೆಹಲಿ ಹೈಕೋರ್ಟ್ ದಾಖಲಿಸಿಕೊಂಡಿದ್ದ ಸ್ವಯಂ ಪ್ರೇರಿತ ದೂರಿನ ವಿರುದ್ಧ ಭಾರತ್ ಬಯೋಟೆಕ್ ಮತ್ತು ಸೆರಂ ಇನ್ಸ್​ಟಿಟ್ಯೂಟ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಮತ್ತು ವಿ.ರಾಮಸುಬ್ರಹ್ಮಣಿಯನ್ ಅವರುಗಳ ನ್ಯಾಯಪೀಠ, ದೆಹಲಿ ಹೈಕೋರ್ಟ್ ಈ ಕುರಿತು ಯಾವುದೇ ಆದೇಶ ಜಾರಿಗೊಳಿಸಿಲ್ಲ. ಲಸಿಕೆ ತಯಾರಿಕಾ ಕಂಪನಿಗಳ ಉತ್ಪಾನಾ ಸಾಮರ್ಥ್ಯ ಅರಿಯುವ ದೃಷ್ಟಿಯಿಂದ ದೆಹಲಿ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆಯಷ್ಟೇ ಎಂದು ಸರ್ವೋಚ್ಛ ನ್ಯಾಯಾಲಯ ಹೇಳಿದೆ.

ನಾವು ಜನಸಾಮಾನ್ಯರ ಸಂಪರ್ಕಕ್ಕೆ ಬರುತ್ತೇವೆ. ಹೀಗಾಗಿ ಕೊರೊನಾ ಲಸಿಕೆ ವಿತರಣೆ ಪ್ರಕ್ರಿಯೆಯಲ್ಲಿ ನಮಗೆ ಆದ್ಯತೆ ನೀಡಬೇಕು ಎಂದು ಕೋರಿ ಅರವಿಂದ್ ಸಿಂಗ್ ಎಂಬುವವರು ಕೋರ್ಟ್​ನ ಮೊರೆ ಹೋಗಿದ್ದರು.

ಈ ಬಗ್ಗೆ ನ್ಯಾಯಾಲಯಕ್ಕೆ ಪ್ರತಿಕ್ರಿಯಿಸಿದ್ದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣೆ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಮನೋಹರ್​ ಅಗ್ನಾನಿ, ನ್ಯಾಯಾಲಯದಲ್ಲಿ ಕಾರ್ಯನಿರ್ವಹಿಸುವವರೆಂಬ ಕಾರಣಕ್ಕೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿಕೊಡಲಾಗುವುದಿಲ್ಲ. ಹಾಗೇನಾದರೂ ಮಾಡಿದಲ್ಲಿ ಅದು ಬೇರೆ ವಲಯದವರನ್ನು ತಾರತಮ್ಯ ಮಾಡಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದರು.

ಈಗಿರುವ ನಿಯಮದ ಪ್ರಕಾರ ಜನಸಾಮಾನ್ಯರಿಗೆ ಅನ್ವಯಿಸುವಂತೆಯೇ 60 ವರ್ಷ ಮೇಲ್ಪಟ್ಟ ವಕೀಲರು, ನ್ಯಾಯಾಧೀಶರು ಅಥವಾ ಯಾವುದೇ ಸಿಬ್ಬಂದಿ ವರ್ಗದವರು ಕೊರೊನಾ ಲಸಿಕೆ ಸ್ವೀಕರಿಸಬಹುದು. ಅಂತೆಯೇ 45 ವರ್ಷ ಮೇಲ್ಪಟ್ಟು ವಿವಿಧ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಸಹ ಲಸಿಕೆಯ ಉಪಯೋಗ ಪಡೆದುಕೊಳ್ಳಬಹುದು. ಹೀಗಾಗಿ ಅವರಿಗಾಗಿ ಪ್ರತ್ಯೇಕ ಅವಕಾಶ ಕಲ್ಪಿಸುವುದು ಸಮಂಜಸವಲ್ಲ ಎಂದು ಮನೋಹರ್​ ಅಗ್ನಾನಿ ತಿಳಿಸಿದ್ದರು.

ದೇಶದಲ್ಲಿ ಬೇರೆ ಬೇರೆ ಉದ್ಯಮಗಳಲ್ಲಿ, ವೃತ್ತಿಗಳಲ್ಲಿ ತೊಡಗಿಕೊಂಡವರೂ ಇರುತ್ತಾರೆ. ಹೀಗಿರುವಾಗ ನ್ಯಾಯಾಧೀಶರಿಗೆ ಅಥವಾ ವಕೀಲರಿಗಾಗಿಯೇ ವಿಶೇಷ ಅವಕಾಶ ಕಲ್ಪಿಸಿಕೊಡಲಾಗುವುದಿಲ್ಲ ಎಂದು ಸರ್ವೋಚ್ಛ ನ್ಯಾಯಾಲಯಕ್ಕೆ ನೀಡಿದ ಉತ್ತರದಲ್ಲಿ ತಿಳಿಸಲಾಗಿತ್ತು.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಫೆಬ್ರವರಿ 4ರಂದು ದೆಹಲಿಯ ಉಚ್ಛ ನ್ಯಾಯಾಲಯ ಅರ್ಜಿಯೊಂದನ್ನು ತಿರಸ್ಕರಿಸಿತ್ತು. ಆದರೆ, ಅದರ ಬೆನ್ನಲ್ಲೇ ದೆಹಲಿಯ ಬಾರ್​ ಕೌನ್ಸಿಲ್​ ಪತ್ರವೊಂದರ ಆಧಾರದ ಮೇಲೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ವ್ಯವಸ್ಥೆಯಲ್ಲಿ ಫ್ರಂಟ್​ಲೈನ್​ ವರ್ಕರ್ಸ್​ ಆಗಿ ದುಡಿದವರ ಬಗ್ಗೆ ಮಾಹಿತಿ ಕೇಳಿತ್ತು. ಇತ್ತ ಬಾಂಬೆ ಉಚ್ಛ ನ್ಯಾಯಾಲಯದಲ್ಲಿಯೂ ಇದೇ ಮಾದರಿಯ ಪ್ರಕರಣವೊಂದು ವಿಚಾರಣೆಗೆ ಬಾಕಿ ಉಳಿದಿತ್ತು. ಅಷ್ಟರಲ್ಲಿ ವಿಷಯ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ ಕಾರಣ ವಿಚಾರಣೆಯನ್ನು ಮುಂದೂಡಲಾಗಿತ್ತು.

ಇದನ್ನೂ ಓದಿ: 

ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಗೆ ರಕ್ಷಾಬಂಧನ ಕಟ್ಟಲು ಆದೇಶ; ಸ್ಟೀರಿಯೊಟೈಪ್ ಬಿಟ್ಟುಬಿಡಿ ಎಂದ ಸುಪ್ರೀಂಕೋರ್ಟ್

ಚುನಾವಣಾ ಆಯುಕ್ತರಾಗಿ ಸರ್ಕಾರಿ ಅಧಿಕಾರಿಗಳ ನೇಮಕ ಸಲ್ಲ; ಸುಪ್ರೀಂ ಕೋರ್ಟ್

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್