
ನವದೆಹಲಿ, ಡಿಸೆಂಬರ್ 10: ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಇದರ ಮಧ್ಯೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಅವರ ಮುಂಬರುವ ಜರ್ಮನಿ ಪ್ರವಾಸದ ಬಗ್ಗೆ ಬಿಜೆಪಿ ವಾಗ್ದಾಳಿ ನಡೆಸಿದೆ. ರಾಹುಲ್ ಗಾಂಧಿಯನ್ನು “ಪ್ರವಾಸದ ನಾಯಕ” ಎಂದು ಬಿಜೆಪಿ ಲೇವಡಿ ಮಾಡಿದೆ. ಚಳಿಗಾಲದ ಅಧಿವೇಶನ ಮುಗಿಯುವ ಮೊದಲೇ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ವಿದೇಶ ಪ್ರವಾಸಕ್ಕೆ ತೆರಳಲಿದ್ದಾರೆ. ಚಳಿಗಾಲದ ಅಧಿವೇಶನ ಡಿಸೆಂಬರ್ 19ರಂದು ಮುಕ್ತಾಯಗೊಳ್ಳಲಿದೆ.
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಡಿಸೆಂಬರ್ 15ರಿಂದ 20ರವರೆಗೆ ಬರ್ಲಿನ್ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಸಮಯದಲ್ಲಿ ಅವರು ಜರ್ಮನ್ ಸರ್ಕಾರಿ ಅಧಿಕಾರಿಗಳನ್ನು ಭೇಟಿ ಮಾಡಿ ಭಾರತೀಯ ವಲಸೆಗಾರರೊಂದಿಗೆ ಸಂವಾದ ನಡೆಸುವ ನಿರೀಕ್ಷೆಯಿದೆ.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ, ರಾಹುಲ್ ಗಾಂಧಿಯನ್ನು “ಪ್ರವಾಸದ ನಾಯಕ” ಎಂದು ಕರೆದಿದ್ದಾರೆ.
ಇದನ್ನೂ ಓದಿ: ಕರ್ನಾಟಕ ಕಾಂಗ್ರೆಸ್ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಜತೆ ರಾಹುಲ್ ಗಾಂಧಿ ಮಹತ್ವದ ಸಭೆ
“ಬಿಹಾರದ ಚುನಾವಣೆಯ ಸಮಯದಲ್ಲಿ ರಾಹುಲ್ ಗಾಂಧಿ ಎಲ್ಲಿದ್ದರು? ಈಗ ಮತ್ತೊಂದು ಪ್ರವಾಸಕ್ಕೆ ಹೊರಟಿದ್ದಾರೆ. ಸಾಮಾನ್ಯ ಜನರು ಕೆಲಸದ ಅವಧಿಗಳ ನಡುವೆ ರಜೆ ತೆಗೆದುಕೊಳ್ಳುತ್ತಾರೆ. ಆದರೆ ಈ ವ್ಯಕ್ತಿ ಎರಡು ರಜಾ ಅವಧಿಗಳ ನಡುವೆ ಕೆಲಸ ಮಾಡುತ್ತಾರೆ ಅನಿಸುತ್ತದೆ” ಎಂದು ಅವರು ಹೇಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ