ತೆಲಂಗಾಣ ಚುನಾವಣೆಗೆ ಮುನ್ನ ಕೆಸಿಆರ್​​ಗೆ ಹಿನ್ನಡೆ; ಕಾಂಗ್ರೆಸ್ ಸೇರಲಿದ್ದಾರೆ ಬಿಆರ್​​ಎಸ್ ಪಕ್ಷದ 35 ನಾಯಕರು

|

Updated on: Jun 26, 2023 | 8:23 PM

ಬಿಆರ್‌ಎಸ್ ನಾಯಕರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ಅವರನ್ನು ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್ ಮತ್ತು ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ಎ ರೇವಂತ್ ರೆಡ್ಡಿ ಅವರ ಸಮ್ಮುಖದಲ್ಲಿ ಭೇಟಿಯಾದರು.

ತೆಲಂಗಾಣ ಚುನಾವಣೆಗೆ ಮುನ್ನ ಕೆಸಿಆರ್​​ಗೆ ಹಿನ್ನಡೆ; ಕಾಂಗ್ರೆಸ್ ಸೇರಲಿದ್ದಾರೆ ಬಿಆರ್​​ಎಸ್ ಪಕ್ಷದ 35 ನಾಯಕರು
ಕಾಂಗ್ರೆಸ್ ಸೇರಲಿದ್ದಾರೆ ಬಿಆರ್​​ಎಸ್ ನಾಯಕರು
Follow us on

ಮಾಜಿ ಸಂಸದ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಮತ್ತು ತೆಲಂಗಾಣ (Telangana) ಸರ್ಕಾರದ ಮಾಜಿ ಸಚಿವ ಜೂಪಲ್ಲಿ ಕೃಷ್ಣರಾವ್ ಸೇರಿದಂತೆ 35 ಬಿಆರ್‌ಎಸ್ (BRS) ನಾಯಕರು ಕಾಂಗ್ರೆಸ್ (Congress) ಸೇರಲಿದ್ದು ಸೋಮವಾರ ಪಕ್ಷದ ಉನ್ನತ ನಾಯಕರನ್ನು ಭೇಟಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜುಲೈ ಮೊದಲ ವಾರದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಉಪಸ್ಥಿತಿಯೊಂದಿಗೆ ತೆಲಂಗಾಣದ ಖಮ್ಮಮ್‌ನಲ್ಲಿ ನಡೆಯಲಿರುವ ಸಾರ್ವಜನಿಕ ರ್ಯಾಲಿಯಲ್ಲಿ ಭಾರತ್ ರಾಷ್ಟ್ರ ಸಮಿತಿ ನಾಯಕರು ಅಧಿಕೃತವಾಗಿ ಕಾಂಗ್ರೆಸ್‌ಗೆ ಸೇರಲಿದ್ದಾರೆ. ರೆಡ್ಡಿ ಅವರು ಹಿಂದಿನ ಲೋಕಸಭೆ ಚುನಾವಣೆಯಲ್ಲಿ ಖಮ್ಮಂನಿಂದ ಬಿಆರ್‌ಎಸ್ ಸಂಸದರಾಗಿದ್ದರು. ಈ ವರ್ಷಾಂತ್ಯದಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ.

ನಾಯಕರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ಅವರನ್ನು ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್ ಮತ್ತು ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ಎ ರೇವಂತ್ ರೆಡ್ಡಿ ಅವರ ಸಮ್ಮುಖದಲ್ಲಿ ಭೇಟಿಯಾದರು.

ಮೂಲಗಳ ಪ್ರಕಾರ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಮತ್ತು ಜೂಪಲ್ಲಿ ಕೃಷ್ಣರಾವ್ ಇಬ್ಬರೂ ತಮ್ಮ ಬೆಂಬಲಿಗರೊಂದಿಗೆ ಜುಲೈ ಮೊದಲ ವಾರದಲ್ಲಿ ಔಪಚಾರಿಕವಾಗಿ ಕಾಂಗ್ರೆಸ್ ಸೇರಲಿದ್ದಾರೆ. ಖಮ್ಮಂನಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ರಾಷ್ಟ್ರೀಯ ನಾಯಕರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅಲ್ಲೇ ಕಾಂಗ್ರೆಸ್ ಮುಖಂಡ ಭಟ್ಟಿ ವಿಕ್ರಮಾರ್ಕ ತಮ್ಮ ಪಾದಯಾತ್ರೆಯನ್ನು ಮುಕ್ತಾಯಗೊಳಿಸಲಿದ್ದಾರೆ.
ಏಪ್ರಿಲ್‌ನಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಮತ್ತು ಜೂಪಲ್ಲಿ ಕೃಷ್ಣರಾವ್ ಅವರನ್ನು ಬಿಆರ್‌ಎಸ್‌ನಿಂದ ಅಮಾನತುಗೊಳಿಸಲಾಗಿತ್ತು. ಇದಾದ ನಂತರ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಇವರಿಬ್ಬರನ್ನು ಓಲೈಸಲು ಪ್ರಯತ್ನಿಸಿದ್ದವು. ಆದಾಗ್ಯೂ, ಇಬ್ಬರೂ ಕಾಂಗ್ರೆಸ್ ಆಯ್ಕೆ ಮಾಡಿದ್ದಕ್ಕೆ ಅವರದ್ದೇ ಆದ ರಾಜಕೀಯ ಕಾರಣಗಳಿವೆ.

ಜೂಪಲ್ಲಿ ಕೃಷ್ಣರಾವ್ ಕೊಲ್ಲೂರಿನಿಂದ ಐದು ಬಾರಿ ಶಾಸಕರಾಗಿದ್ದು ಮಹೆಬೂಬ್‌ನಗರದಿಂದ ಮಾಜಿ ಸಚಿವರಾಗಿದ್ದಾರೆ, ಅಲ್ಲಿ ಅವರ ದೀರ್ಘಕಾಲದ ರಾಜಕೀಯ ಪ್ರತಿಸ್ಪರ್ಧಿ ಡಿಕೆ ಅರುಣಾ ರಾಜ್ಯ ಬಿಜೆಪಿಯಲ್ಲಿ ಉದಯೋನ್ಮುಖ ತಾರೆಯಾಗಿದ್ದಾರೆ. ಹಾಗಾಗಿ ಬಿಜೆಪಿಗೆ ಹೋಗುವುದು ಸೂಕ್ತವಲ್ಲ.

ಇದನ್ನೂ ಓದಿ: ಬಿಜೆಪಿಯೊಂದಿಗೆ ಕಾಂಗ್ರೆಸ್, ಸಿಪಿಎಂ ಮಾಡಿಕೊಂಡಿರುವ ಅಪವಿತ್ರ ಸಂಬಂಧವನ್ನು ಮುರಿಯುತ್ತೇನೆ: ಮಮತಾ ಬ್ಯಾನರ್ಜಿ

ಬಿಆರ್‌ಎಸ್ ದುರ್ಬಲವಾಗಿರುವ ಖಮ್ಮಂನಲ್ಲಿ  ರೆಡ್ಡಿ ಪ್ರಬಲ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾರೆ. ಅವರು 2014 ರಲ್ಲಿ ವೈಎಸ್‌ಆರ್‌ಸಿಪಿ ಸಂಸದರಾಗಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದು, ಪಕ್ಷಕ್ಕೆ ಮೂರು ಎಂಎಲ್‌ಎ ಸ್ಥಾನಗಳನ್ನು ಗೆಲ್ಲಲು ಸಹಾಯ ಮಾಡಿದರು. ಆದರೆ 2018 ರ ಚುನಾವಣೆಯಲ್ಲಿ ಸಚಿವ ಪುವ್ವಾಡ ಅಜಯ್ ಕುಮಾರ್ ಅವರನ್ನು ಸೋಲಿಸಲು ಅವರು ಕೆಲಸ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಇದಾದ ನಂತರ ಅವರಿಗೆ ಸಂಸದ ಟಿಕೆಟ್ ನಿರಾಕರಿಸಲಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:11 pm, Mon, 26 June 23