West Bengal Election 2021: ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಮತದಾನದಲ್ಲಿಯೇ ಭುಗಿಲೆದ್ದ ಹಿಂಸೆ; ವರದಿಗೆ ತೆರಳಿದ್ದ ಟಿವಿ 9 ಬಾಂಗ್ಲಾ ಸಿಬ್ಬಂದಿ ಮೇಲೆಯೂ ಹಲ್ಲೆ

|

Updated on: Mar 27, 2021 | 11:01 AM

West Bengal Assembly Election: ಪಶ್ಚಿಮ ಬಂಗಾಳದಲ್ಲಿ ಶುಕ್ರವಾರ ಸಂಜೆಯಿಂದಲೇ ಅಲ್ಲಲ್ಲಿ ಹಿಂಸಾಚಾರ ಶುರುವಾಗಿದೆ. ಇಂದು ಬೆಳಗ್ಗೆ ಪುರ್ಬಾ ಮೇದಿನಿಪುರ್ ಜಿಲ್ಲೆಯ ಸತ್ಸತಮಾಲ್​ ವಿಧಾನಸಭಾ ಕ್ಷೇತ್ರದಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಭದ್ರತಾ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಇಬ್ಬರೂ ಗಾಯಗೊಂಡಿದ್ದಾರೆ.

West Bengal Election 2021: ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಮತದಾನದಲ್ಲಿಯೇ ಭುಗಿಲೆದ್ದ ಹಿಂಸೆ; ವರದಿಗೆ ತೆರಳಿದ್ದ ಟಿವಿ 9 ಬಾಂಗ್ಲಾ ಸಿಬ್ಬಂದಿ ಮೇಲೆಯೂ ಹಲ್ಲೆ
ಪಶ್ಚಿಮಬಂಗಾಳದಲ್ಲಿ ಹಿಂಸಾಚಾರ
Follow us on

ಕೋಲ್ಕತ್ತ: ಪಶ್ಚಿಮ ಬಂಗಾಳ (West Bengal) ದಲ್ಲಿ ಯಾವುದೇ ಚುನಾವಣೆ ಬಂದರೂ, ಬಾರದಿದ್ದರೂ ಅಲ್ಲಿ ಗಲಾಟೆ, ಹೊಡೆದಾಟ ಸದಾ ನಡೆಯುತ್ತಿರುತ್ತದೆ. ಮುಖ್ಯವಾಗಿ ಆಡಳಿತ ಪಕ್ಷ ಟಿಎಂಸಿ ಕಾರ್ಯಕರ್ತರ ಗೂಂಡಾಗಿರಿಯ ಬಗ್ಗೆ ಇಡೀ ದೇಶಕ್ಕೇ ಗೊತ್ತಿದೆ. ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಯ ಮೊದಲನೇ ಹಂತದ ಮತದಾನ ನಡೆಯುತ್ತಿದೆ. ಹಾಗೇ ಟಿಎಂಸಿ ಕಾರ್ಯಕರ್ತರ ಗೂಂಡಾಗಿರಿಯೂ ಶುರುವಾಗಿದೆ. ಪೂರ್ವ ಮಿಡ್ನಾಪುರದ ಮತಗಟ್ಟೆ ಸಂಖ್ಯೆ 149ರಲ್ಲಿ ಟಿಎಂಸಿ ಕಾರ್ಯಕರ್ತರು ಮತದಾರರಿಗೆ ಬೆದರಿಕೆ ಹಾಕಿದ್ದಾರೆ. ತೃಣಮೂಲ ಕಾಂಗ್ರೆಸ್​ಗೆ ಮತಹಾಕಲು ಬಲವಂತ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, ಎಡಪಕ್ಷ (CPI(M)ದ ಅಭ್ಯರ್ಥಿ ಸುಶಾಂತ ಘೋಷ್​ ಮೇಲೆ ದಾಳಿ ಮಾಡಿದ್ದಾರೆ. ಇನ್ನು ವರದಿಗಾಗಿ ಸ್ಥಳಕ್ಕೆ ತೆರಳಿದ್ದ ಟಿವಿ 9 ಬಾಂಗ್ಲಾ ವರದಿಗಾರ ಪ್ರದೀಪ್​ ಕಾಂತಿ ಘೋಷ್​ ಮತ್ತು ಕ್ಯಾಮರಾಮೆನ್​ ಮಖನ್​ ಮೇಲೆ ಕೂಡ ಹಲ್ಲೆ ನಡೆಸಿದ್ದಾರೆ. ಟಿಎಂಸಿ ಕಾರ್ಯಕರ್ತರಿಂದ ಹಲ್ಲೆಗೆ ಒಳಗಾದ ಇವರನ್ನೆಲ್ಲ ಪೊಲೀಸ್ ವಾಹನದಲ್ಲಿ ಅಲ್ಲಿಂದ ಕರೆದುಕೊಂಡುಹೋಗಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತವಾಗಿ 5 ಜಿಲ್ಲೆಗಳ, 30 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆಯಿಂದ ಮತದಾನ ಪ್ರಾರಂಭವಾಗಿದೆ. ಜನರು ಮತದಾನದ ಬಗ್ಗೆ ನಿರ್ಲಕ್ಷ್ಯ ವಹಿಸದೆ, ಹೆಚ್ಚಿನ ಸಂಖ್ಯೆಯಲ್ಲಿ ಚುನಾವಣೆಯಲ್ಲಿ ಪಾಲ್ಗೊಳ್ಳಬೇಕು ಎಂದು ಬೆಳಗ್ಗೆಯೇ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್​ ಷಾ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮನವಿ ಮಾಡಿದ್ದಾರೆ.

ಇನ್ನು ಪಶ್ಚಿಮ ಬಂಗಾಳದಲ್ಲಿ ಶುಕ್ರವಾರ ಸಂಜೆಯಿಂದಲೇ ಅಲ್ಲಲ್ಲಿ ಹಿಂಸಾಚಾರ ಶುರುವಾಗಿದೆ. ಇಂದು ಬೆಳಗ್ಗೆ ಪುರ್ಬಾ ಮೇದಿನಿಪುರ್ ಜಿಲ್ಲೆಯ ಸತ್ಸತಮಾಲ್​ ವಿಧಾನಸಭಾ ಕ್ಷೇತ್ರದಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಭದ್ರತಾ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಇಬ್ಬರೂ ಗಾಯಗೊಂಡಿದ್ದಾರೆ. ನಾಲ್ವರು ಬಿಜೆಪಿ ಕಾರ್ಯಕರ್ತರಿಗೂ ಕೂಡ ಸಣ್ಣಪುಟ್ಟ ಗಾಯಗಳಾಗಿವೆ. ಹಲವು ಮತಗಟ್ಟೆಗಳಲ್ಲಿ ಬಿಜೆಪಿ ಜನರಿಗೆ ಮತ ಹಾಕಲು ಬಿಡುತ್ತಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಆರೋಪ ಮಾಡುತ್ತಿದ್ದು, ಅದಕ್ಕೆ ಪ್ರತಿಯಾಗಿ ಬಿಜೆಪಿ, ಎಲ್ಲ ಮತಗಟ್ಟೆಗಳಲ್ಲೂ ಟಿಎಂಸಿ ಗೂಂಡಾಗಳು ಮತದಾರರನ್ನು ಹೆದರಿಸುತ್ತಿದ್ದಾರೆ ಎಂದು ದೂರಿದ್ದಾರೆ. ಪಶ್ಚಿಮ ಬಂಗಾಳದ ಹಲವು ಕಡೆಗಳಲ್ಲಿ ಹಿಂಸೆ ನಡೆಯುತ್ತಿರುವುದಾಗಿ ನಮಗೆ ದೂರು ಬಂದಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಇದನ್ನೂ ಓದಿ: West Bengal Elections 2021: ಮತದಾನ ಆರಂಭದ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ 22 ಕಚ್ಚಾ ಬಾಂಬ್ ಪತ್ತೆ

ಟಿವಿ9 ವಿಶೇಷ: ಪಶ್ಚಿಮ ಬಂಗಾಳ ಅಸೆಂಬ್ಲಿ ಚುನಾವಣೆ 2021 – ಬಂಗಾಳ ಗದ್ದುಗೆ ಯಾರಿಗೆ?