AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Leopard Attack: ಹೊಲದಲ್ಲಿ ತರಕಾರಿ ಕೀಳುತ್ತಿದ್ದ 10 ವರ್ಷದ ಬಾಲಕಿಯ ಮೇಲೆ ಚಿರತೆ ದಾಳಿ

ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಕತರ್ನಿಯಾಘಾಟ್ ವನ್ಯಜೀವಿ ವಿಭಾಗದ ವ್ಯಾಪ್ತಿಯ ಹೊಲವೊಂದರಲ್ಲಿ ತರಕಾರಿ ಕೀಳುತ್ತಿದ್ದ 10 ವರ್ಷದ ಬಾಲಕಿಯನ್ನು ಚಿರತೆಯೊಂದು ಕೊಂದಿದೆ ಎಂದು ಅಧಿಕಾರಿಯೊಬ್ಬರು (ಮಂಗಳವಾರ) ತಿಳಿಸಿದ್ದಾರೆ. ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಮೋತಿಪುರ ವ್ಯಾಪ್ತಿಯ ನೌಸರ್ ಗುಮ್ತಿಹಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.

Leopard Attack: ಹೊಲದಲ್ಲಿ ತರಕಾರಿ ಕೀಳುತ್ತಿದ್ದ 10 ವರ್ಷದ ಬಾಲಕಿಯ ಮೇಲೆ ಚಿರತೆ ದಾಳಿ
Leopard Attack
TV9 Web
| Edited By: |

Updated on:Nov 22, 2022 | 2:05 PM

Share

ಬಹ್ರೈಚ್: ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಕತರ್ನಿಯಾಘಾಟ್ ವನ್ಯಜೀವಿ ವಿಭಾಗದ ವ್ಯಾಪ್ತಿಯ ಹೊಲವೊಂದರಲ್ಲಿ ತರಕಾರಿ ಕೀಳುತ್ತಿದ್ದ 10 ವರ್ಷದ ಬಾಲಕಿಯನ್ನು ಚಿರತೆಯೊಂದು ಕೊಂದಿದೆ ಎಂದು ಅಧಿಕಾರಿಯೊಬ್ಬರು (ಮಂಗಳವಾರ) ತಿಳಿಸಿದ್ದಾರೆ. ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಮೋತಿಪುರ ವ್ಯಾಪ್ತಿಯ ನೌಸರ್ ಗುಮ್ತಿಹಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸೀಮಾ ಕುಮಾರಿ ಎಂಬ ಬಾಲಕಿ ತನ್ನ ಜಮೀನಿನಲ್ಲಿ ತರಕಾರಿ ಕೀಳುತ್ತಿದ್ದಾಗ ಚಿರತೆ ದಾಳಿ ಮಾಡಿ ಕಾಡಿಗೆ ಎಳೆದೊಯ್ದಿದೆ ಎಂದು ಗ್ರಾಮಸ್ಥರು ಪಿಟಿಐಗೆ ತಿಳಿಸಿದ್ದಾರೆ.

ಅಕ್ಕಪಕ್ಕದಲ್ಲಿದ್ದ ಸ್ಥಳೀಯರು ಅಲಾರಾಂ ಮಾಡಿ ಚಿರತೆಯನ್ನು ಸುತ್ತುವರಿದಿದ್ದರಿಂದ ಗಾಯಗೊಂಡ ಬಾಲಕಿಯನ್ನು ಗದ್ದೆಯಲ್ಲಿ ಬಿಟ್ಟು ಕಾಡಿಗೆ ಹೋಗಿದೆ. ಚಿರತೆ ದಾಳಿಯ ಪರಿಣಾಮ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಅರಣ್ಯಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನು ಓದಿ: ದಾವಣಗೆರೆಯಲ್ಲಿ ಚಿರತೆ ದಾಳಿಗೆ ಮಹಿಳೆ ಸಾವು

ಚಿರತೆ ಮತ್ತೆ ದಾಳಿ ಮಾಡಲು ಗ್ರಾಮಕ್ಕೆ ಬರಬಹುದೆಂಬ ಆತಂಕದಿಂದ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ನಿಯಮಿತ ಗಸ್ತು ಕಾರ್ಯ ನಡೆಸುತ್ತಿದ್ದಾರೆ ಎಂದು ವಿಭಾಗೀಯ ಅರಣ್ಯಾಧಿಕಾರಿ ಆಕಾಶದೀಪ್ ಬಧವಾನ್ ತಿಳಿಸಿದ್ದಾರೆ. ಗುಂಪು ಗುಂಪಾಗಿ ಹೊರಹೋಗುವಂತೆ ಗ್ರಾಮಸ್ಥರಿಗೆ ಸೂಚಿಸಲಾಗಿದೆ. ಮೃತರ ಕುಟುಂಬಕ್ಕೆ ಆರ್ಥಿಕ ನೆರವು ನೀಡಲಾಗುವುದು ಎಂದು ಬಡವಾನ್ ಪಿಟಿಐಗೆ ಹೇಳಿದರು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:05 pm, Tue, 22 November 22