Leopard attack: ಜಿಲ್ಲಾ ನ್ಯಾಯಾಲಯದ ಆವರಣಕ್ಕೆ ನುಗ್ಗಿದ ಚಿರತೆ
ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲಾ ನ್ಯಾಯಾಲಯದ ಆವರಣಕ್ಕೆ ಚಿರತೆಯೊಂದು ನುಗ್ಗಿದ ಅಲ್ಲಿದ ಜನರ ಮೇಲೆ ದಾಳಿ ನಡೆಸಿದೆ. ಇದರ ಪರಿಣಾಮ ಹಲವರು ಗಾಯಗೊಂಡಿದ್ದಾರೆ.
ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್ (Ghaziabad) ಜಿಲ್ಲಾ ನ್ಯಾಯಾಲಯದ ಆವರಣಕ್ಕೆ ಚಿರತೆಯೊಂದು ನುಗ್ಗಿದ ಅಲ್ಲಿದ ಜನರ ಮೇಲೆ ದಾಳಿ ನಡೆಸಿದೆ. ಇದರ ಪರಿಣಾಮ ಹಲವರು ಗಾಯಗೊಂಡಿದ್ದಾರೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಚಿರತೆಯನ್ನು ಹಿಡಿಯಲು ಮುಂದಾಗಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
#WATCH | Several people injured as leopard enters Ghaziabad district court premises in Uttar Pradesh pic.twitter.com/ZYD0oPTtOl
— ANI (@ANI) February 8, 2023
ಸಿಜೆಎಂ ನ್ಯಾಯಾಲಯದ ಕಚೇರಿಯ ಹೊರಗೆ ಚಿರತೆ ಚಮ್ಮಾರನ ಮೇಲೆ ದಾಳಿ ನಡೆಸಿ ಗಾಯಗೊಳಿಸಿದೆ ಎಂದು ವರದಿಗಳು ತಿಳಿಸಿವೆ. ಸಂಜೆ 4 ಗಂಟೆ ಸುಮಾರಿಗೆ ಐಎಂಟಿ ಕಡೆಯಿಂದ ಚಿರತೆ ಏಕಾಏಕಿ ಕೋರ್ಟ್‌ಗೆ ನುಗ್ಗಿದೆ. ನಂತರ ಅದು ಮೊದಲ ಮಹಡಿಯಲ್ಲಿರುವ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಬಂದಿದೆ.
Published On - 5:36 pm, Wed, 8 February 23