Leopard attack: ಜಿಲ್ಲಾ ನ್ಯಾಯಾಲಯದ ಆವರಣಕ್ಕೆ ನುಗ್ಗಿದ ಚಿರತೆ

ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲಾ ನ್ಯಾಯಾಲಯದ ಆವರಣಕ್ಕೆ ಚಿರತೆಯೊಂದು ನುಗ್ಗಿದ ಅಲ್ಲಿದ ಜನರ ಮೇಲೆ ದಾಳಿ ನಡೆಸಿದೆ. ಇದರ ಪರಿಣಾಮ ಹಲವರು ಗಾಯಗೊಂಡಿದ್ದಾರೆ.

Leopard attack: ಜಿಲ್ಲಾ ನ್ಯಾಯಾಲಯದ ಆವರಣಕ್ಕೆ ನುಗ್ಗಿದ ಚಿರತೆ
ಸಾಂದರ್ಭಿಕ ಚಿತ್ರ

Updated on: Feb 08, 2023 | 5:37 PM

ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್ (Ghaziabad) ಜಿಲ್ಲಾ ನ್ಯಾಯಾಲಯದ ಆವರಣಕ್ಕೆ ಚಿರತೆಯೊಂದು ನುಗ್ಗಿದ ಅಲ್ಲಿದ ಜನರ ಮೇಲೆ ದಾಳಿ ನಡೆಸಿದೆ. ಇದರ ಪರಿಣಾಮ ಹಲವರು ಗಾಯಗೊಂಡಿದ್ದಾರೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಚಿರತೆಯನ್ನು ಹಿಡಿಯಲು ಮುಂದಾಗಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಜೆಎಂ ನ್ಯಾಯಾಲಯದ ಕಚೇರಿಯ ಹೊರಗೆ ಚಿರತೆ ಚಮ್ಮಾರನ ಮೇಲೆ ದಾಳಿ ನಡೆಸಿ ಗಾಯಗೊಳಿಸಿದೆ ಎಂದು ವರದಿಗಳು ತಿಳಿಸಿವೆ. ಸಂಜೆ 4 ಗಂಟೆ ಸುಮಾರಿಗೆ ಐಎಂಟಿ ಕಡೆಯಿಂದ ಚಿರತೆ ಏಕಾಏಕಿ ಕೋರ್ಟ್‌ಗೆ ನುಗ್ಗಿದೆ. ನಂತರ ಅದು ಮೊದಲ ಮಹಡಿಯಲ್ಲಿರುವ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಬಂದಿದೆ.

Published On - 5:36 pm, Wed, 8 February 23

ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Loading...
Unable to load recommendations.
Follow Us