AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಕಾಶ್ಮೀರದಲ್ಲಿ 4 ವರ್ಷದ ಬಾಲಕಿಯನ್ನು ಹೊತ್ತೊಯ್ದ ಚಿರತೆ

ಕಾಣೆಯಾದ 4 ವರ್ಷದ ಬಾಲಕಿಯನ್ನು ಹುಡುಕಲು ನಿರಂತರವಾಗಿ ಪ್ರಯತ್ನಗಳು ನಡೆಯುತ್ತಿವೆ. ಉಧಮ್‌ಪುರದಲ್ಲಿ ಇಂತಹ ಘಟನೆ ನಡೆಯುತ್ತಿರುವುದು ಇದೇ ಮೊದಲಲ್ಲ. ಒಂದೆರಡು ವರ್ಷಗಳ ಹಿಂದೆ ಇದೇ ಪ್ರದೇಶದಲ್ಲಿ 4 ವರ್ಷದ ಬಾಲಕಿ ಚಿರತೆಗೆ ಬಲಿಯಾದ ಅಹಿತಕರ ಘಟನೆ ನಡೆದಿತ್ತು.

ಜಮ್ಮು ಕಾಶ್ಮೀರದಲ್ಲಿ 4 ವರ್ಷದ ಬಾಲಕಿಯನ್ನು ಹೊತ್ತೊಯ್ದ ಚಿರತೆ
ಚಿರತೆ-ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Sep 03, 2023 | 12:27 PM

Share

ನವದೆಹಲಿ: 4 ವರ್ಷದ ಬಾಲಕಿಯನ್ನು ಚಿರತೆಯೊಂದು ಎತ್ತಿಕೊಂಡು ಹೋಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರದಲ್ಲಿ ನಡೆದಿದೆ. ಶನಿವಾರ ಸಂಜೆ 7 ಗಂಟೆ ಸುಮಾರಿಗೆ ಚಿರತೆ ಬಾಲಕಿಯನ್ನು ಎಳೆದುಕೊಂಡು ಹೋಗಿದೆ. ಈ ಅವಘಡದ ಬಗ್ಗೆ ಮಾಹಿತಿ ಪಡೆದ ತಕ್ಷಣ ಆ ಪ್ರದೇಶದ ರೇಂಜ್ ಆಫೀಸರ್ ಉಧಮ್‌ಪುರ ಕಂಟ್ರೋಲ್ ರೂಮ್‌ನಿಂದ ಶೋಧ ತಂಡಗಳನ್ನು ಕಳುಹಿಸಿದ್ದಾರೆ. ಆದರೆ ಇನ್ನೂ ಆ ಬಾಲಕಿಯ ಪತ್ತೆಯಾಗಿಲ್ಲ.

ಉಧಮ್‌ಪುರದಲ್ಲಿ ಇಂತಹ ಘಟನೆ ನಡೆಯುತ್ತಿರುವುದು ಇದೇ ಮೊದಲಲ್ಲ. ಒಂದೆರಡು ವರ್ಷಗಳ ಹಿಂದೆ ಇದೇ ಪ್ರದೇಶದಲ್ಲಿ 4 ವರ್ಷದ ಬಾಲಕಿ ಚಿರತೆಗೆ ಬಲಿಯಾದ ಅಹಿತಕರ ಘಟನೆ ನಡೆದಿತ್ತು.

ಜಮ್ಮು ಕಾಶ್ಮೀರದ ಉಧಮ್‌ಪುರದಲ್ಲಿ ಚಿರತೆ ಬಾಯಿಗೆ ಸಿಕ್ಕ ಬಾಲಕಿಯನ್ನು ಇನ್ನೂ ಪತ್ತೆ ಹಚ್ಚಲು ಶೋಧ ತಂಡಗಳಿಗೆ ಸಾಧ್ಯವಾಗಿಲ್ಲ. ಉಧಮ್​ಪುರದ ವನ್ಯಜೀವಿ ಇಲಾಖೆಯ ರೇಂಜ್ ಆಫೀಸರ್ ರಾಕೇಶ್ ಶರ್ಮಾ ಈ ಬಗ್ಗೆ ಮಾಹಿತಿ ನೀಡಿದ್ದು, ನಮಗೆ ಮಾಹಿತಿ ದೊರೆಯುತ್ತಿದ್ದಂತೆ, ನಾವು ಉಧಮ್‌ಪುರ ನಿಯಂತ್ರಣ ಕೊಠಡಿಯಿಂದ ಶೋಧ ತಂಡಗಳನ್ನು ಕಳುಹಿಸಿದ್ದೇವೆ. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳುತ್ತೇವೆ. ಇದೊಂದು ಅತ್ಯಂತ ದುರದೃಷ್ಟಕರ ಘಟನೆಯಾಗಿದ್ದು, ಸಂತ್ರಸ್ತೆಯ ಕುಟುಂಬಕ್ಕೆ ಸಾಧ್ಯವಿರುವ ಎಲ್ಲ ಸಹಾಯವನ್ನು ನಾವು ಮಾಡುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: Hassan News: ಚಿರತೆ ಸೆರೆ ಹಿಡಿದು ಬೈಕ್​ಗೆ ಕಟ್ಟಿಕೊಂಡು ಹೋಗಿ ಅರಣ್ಯ ಇಲಾಖೆಗೆ ಒಪ್ಪಿಸಿದ ಯುವಕ

ಇಂತಹ ಘಟನೆ ನಡೆಯುತ್ತಿರುವುದು ಇದೇ ಮೊದಲಲ್ಲ ಎಂದು ರೇಂಜ್ ಆಫೀಸರ್ ರಾಕೇಶ್ ಶರ್ಮಾ ತಿಳಿಸಿದ್ದು, ಈ ಬಗ್ಗೆ ವಿವಿಧ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗಿದೆ. ನಮ್ಮ ಜಾಗೃತಿ ಅಭಿಯಾನದ ಮೂಲಕ ಮುಂಜಾನೆ ಮತ್ತು ಮುಸ್ಸಂಜೆಯ ಸಮಯದಲ್ಲಿ ಮಕ್ಕಳು, ಮಹಿಳೆಯರು ಮತ್ತು ಹಿರಿಯ ನಾಗರಿಕರನ್ನು ಒಬ್ಬಂಟಿಯಾಗಿ ಹೋಗಲು ಬಿಡಬೇಡಿ ಎಂದು ನಾವು ಜನರಿಗೆ ವಿನಂತಿಸುತ್ತಿದ್ದೇವೆ ಎಂದಿದ್ದಾರೆ.

ಕಾಣೆಯಾದ 4 ವರ್ಷದ ಬಾಲಕಿಯನ್ನು ಹುಡುಕಲು ನಿರಂತರವಾಗಿ ಪ್ರಯತ್ನಗಳು ನಡೆಯುತ್ತಿವೆ. ವನ್ಯಜೀವಿ ಅಧಿಕಾರಿಗಳು ಮತ್ತು ಅರಣ್ಯ ರಕ್ಷಕರು ಒಟ್ಟಾಗಿ ಕಾಣೆಯಾದ ಮಗುವನ್ನು ಹುಡುಕುತ್ತಿದ್ದಾರೆ.

ಇದನ್ನೂ ಓದಿ: Leopard: ಗ್ರಾಮಸ್ಥರು ಮತ್ತು ಅರಣ್ಯಾಧಿಕಾರಿಗಳಿಗೆ ತಲೆ ನೋವಾಗಿದ್ದ ಚಿರತೆ ಕೊನೆಗೂ ಸೆರೆ

2021ರ ಜೂನ್ ತಿಂಗಳಲ್ಲಿ ಜಮ್ಮು ಕಾಶ್ಮೀರದ ಬದ್ಗಾಮ್ ಜಿಲ್ಲೆಯ ಓಂಪೋರಾ ಗ್ರಾಮದ 4 ವರ್ಷದ ಬಾಲಕಿ ಅದಾ ತನ್ನ ಮನೆಯ ಅಂಗಳದಲ್ಲಿ ಏಕಾಂಗಿಯಾಗಿ ಆಟವಾಡುತ್ತಿದ್ದಾಗ ಚಿರತೆ ಎಳೆದೊಯ್ದಿತ್ತು. ಆ ಮಗುವಿನ ಛಿದ್ರಗೊಂಡ ದೇಹ ಮರುದಿನ ಅವಳ ಮನೆಯಿಂದ ಸುಮಾರು 1 ಕಿಲೋಮೀಟರ್ ದೂರದಲ್ಲಿರುವ ಕಾಡಿನಲ್ಲಿ ಸಿಕ್ಕಿತ್ತು.

2021ರ ಅಧಿಕೃತ ದಾಖಲೆಗಳ ಪ್ರಕಾರ, 2011ರಿಂದ ಕ್ರೂರ ಕಾಡು ಪ್ರಾಣಿಗಳ ದಾಳಿಯಲ್ಲಿ ಸುಮಾರು 200 ಜನರು ಸಾವನ್ನಪ್ಪಿದ್ದಾರೆ ಮತ್ತು 2 ಸಾವಿರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕಾಶ್ಮೀರವೊಂದರಲ್ಲೇ 100ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ ಮತ್ತು 1,800ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಜಮ್ಮುವಿನ ಅಂಕಿಅಂಶಗಳ ಪ್ರಕಾರ 100ಕ್ಕೂ ಹೆಚ್ಚು ಸಾವುಗಳು ಮತ್ತು 1800ಕ್ಕೂ ಹೆಚ್ಚು ಜನರು ಕಾಡು ಪ್ರಾಣಿಗಳಿಂದ ಗಾಯಗೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಕೋಲಾರ: ಬೆಳ್ಳಂಬೆಳಗ್ಗೆ ಬಸ್, ಕಾರುಗಳ ನಡುವೆ ಭೀಕರ ಸರಣಿ ಅಪಘಾತ
ಕೋಲಾರ: ಬೆಳ್ಳಂಬೆಳಗ್ಗೆ ಬಸ್, ಕಾರುಗಳ ನಡುವೆ ಭೀಕರ ಸರಣಿ ಅಪಘಾತ
ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?