AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ ಕೆನಡಾ ಸಾಕ್ಷಿ ನೀಡಲಿ, ಯಾವ ತನಿಖೆಗೂ ನಾವು ನಿರಾಕರಿಸುವುದಿಲ್ಲ: ಎಸ್​. ಜೈಶಂಕರ್

ಭಾರತದ ವಿದೇಶಾಂಗ ಸಚಿವ ಎಸ್​. ಜೈಶಂಕರ್​ ಅವರು ಖಲಿಸ್ತಾನಿ ಪ್ರತ್ಯೇಕತಾವಾದಿಯ ಹತ್ಯೆಗೆ ಸಂಬಂಧಿಸಿದಂತೆ ನಾವು ಯಾವುದೇ ತನಿಖೆಯನ್ನು ನಿರಕಾರಿಸುವುದಿಲ್ಲ. ಆದರೆ ಭಾರತ ಸರ್ಕಾರದ ಏಜೆಂಟ್​​​​ಗಳು ​​​ಹರ್ದೀಪ್ ಸಿಂಗ್ ನಿಜ್ಜರ್​​ನ್ನು ಹತ್ಯೆ ಮಾಡಿದ್ದಾರೆ ಎಂಬುದಕ್ಕೆ ಸಾಕ್ಷಿಯನ್ನು ನೀಡಬೇಕು ಎಂದು ಹೇಳಿದ್ದಾರೆ.

ಭಾರತಕ್ಕೆ ಕೆನಡಾ ಸಾಕ್ಷಿ ನೀಡಲಿ, ಯಾವ ತನಿಖೆಗೂ ನಾವು ನಿರಾಕರಿಸುವುದಿಲ್ಲ: ಎಸ್​. ಜೈಶಂಕರ್
ಸಾಂದರ್ಭಿಕ ಚಿತ್ರ (ಟಿವಿ9 ವೆಬ್​​​​)
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Nov 16, 2023 | 1:07 PM

ಕೆನಡಾ ಮತ್ತು ಭಾರತದ (India-canada) ನಡುವಿನ ಬಿಕ್ಕಟ್ಟು ಸ್ವಲ್ಪ ಮಟ್ಟಿಗೆ ಶಾಂತವಾಗಿದೆ. ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾ ಭಾರತದ ಮೇಲೆ ಆರೋಪವನ್ನು ಮಾಡಿತ್ತು. ಭಾರತ ಸರ್ಕಾರದ ಏಜೆಂಟ್​​​ಗಳು ಹರ್ದೀಪ್ ಸಿಂಗ್ ನಿಜ್ಜರ್​​ನನ್ನು ಹತ್ಯೆ ಮಾಡಿದ್ದಾರೆ. ಈ ಬಗ್ಗೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಭಾರತವೇ ಈ ಕೆಲಸವನ್ನು ಮಾಡಿದ್ದು, ತನಿಖೆ ನಡೆಸಲಾಗುವುದು ಎಂದು ಹೇಳಿದ್ದರು. ಇದಕ್ಕೆ ಭಾರತ ಕೂಡ ನಾವು ಎಲ್ಲದಕ್ಕೂ ಸಿದ್ಧ ಎಂದು ಹೇಳಿತ್ತು. ಇದೀಗ ಭಾರತದ ವಿದೇಶಾಂಗ ಸಚಿವ ಎಸ್​. ಜೈಶಂಕರ್ ( s jaishankar)​ ಅವರು ಖಲಿಸ್ತಾನಿ ಪ್ರತ್ಯೇಕತಾವಾದಿಯ ಹತ್ಯೆಗೆ ಸಂಬಂಧಿಸಿದಂತೆ ನಾವು ಯಾವುದೇ ತನಿಖೆಯನ್ನು ನಿರಕಾರಿಸುವುದಿಲ್ಲ. ಆದರೆ ಭಾರತ ಸರ್ಕಾರದ ಏಜೆಂಟ್​​​​ಗಳು ​​​ಹರ್ದೀಪ್ ಸಿಂಗ್ ನಿಜ್ಜರ್​​ನನ್ನು ಹತ್ಯೆ ಮಾಡಿದ್ದಾರೆ ಎಂಬುದಕ್ಕೆ ಸಾಕ್ಷಿಯನ್ನು ನೀಡಬೇಕು ಎಂದು ಹೇಳಿದ್ದಾರೆ.

ಬ್ರಿಟನ್​​​​ ಪ್ರವಾಸದಲ್ಲಿರುವ ಎಸ್​​ ಜೈಶಂಕರ್​​​ ಅವರು ಬ್ರಿಟನ್​​​ನಲ್ಲಿ ನಡೆದ ಸಂದರ್ಶನದಲ್ಲಿ ಹಿರಿಯ ಪತ್ರಕರ್ತ ಲಿಯೋನೆಲ್ ಬಾರ್ಬರ್ ಅವರೊಂದಿಗೆ ಮಾತನಾಡಿದರು. ಭಾರತದ ಮೇಲೆ ಇಂತಹ ಆರೋಪ ಮಾಡುವ ಮುನ್ನ ಸಾಕ್ಷ್ಯಗಳನ್ನು ನೀಡಿ. ನಾವು ಯಾವುದೇ ತನಿಖೆ ನಿರಾಕರಿಸುವುದಿಲ್ಲ. ಇದುವರೆಗೂ ಕೆನಡಾ ಭಾರತಕ್ಕೆ ಈ ಬಗ್ಗೆ ಯಾವುದೇ ಪುರಾವೆಯನ್ನು ನೀಡಿಲ್ಲ ಎಂದು ಹೇಳಿದರು.

ಖಲಿಸ್ತಾನದ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣ

ಕೆನಡಾದ ಬ್ರಿಟಿಷ್ ಕೊಲಂಬಿಯಾದಲ್ಲಿ ಜೂನ್ 18 ರಂದು ಖಲಿಸ್ತಾನ್ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಮಾಡಲಾಗಿದೆ. ನಂತರ ಈ ಹತ್ಯೆಯನ್ನು ಭಾರತದ ಏಜೆಂಟ್​​​ಗಳು ಮಾಡಿದ್ದಾರೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಸೆಪ್ಟೆಂಬರ್‌ನಲ್ಲಿ ಆರೋಪಿಸಿದರು. ಅಲ್ಲಿಂದ ಭಾರತ ಮತ್ತು ಕೆನಡಾ ಸಂಬಂಧ ಉತ್ತಮವಾಗಿಲ್. ಆದರೆ ಈ ಹಿಂದೆಯೇ ಭಾರತ ಆತನನ್ನು ಭಯೋತ್ಪಾದಕ ಪಟ್ಟಿಗೆ ಸೇರಿಸಿತ್ತು.

ಪ್ರಧಾನಿ ಟ್ರುಡೊ ಅವರ ಆರೋಪಗಳು ಆಧಾರರಹಿತ: ಭಾರತ

ಪ್ರಧಾನಿ ಟ್ರುಡೊ ಅವರ ಆರೋಪಗಳನ್ನು ಭಾರತ ನಿರಾಧಾರ ಎಂದು ತಳ್ಳಿಹಾಕಿದೆ. ಕೆನಡಾದಲ್ಲಿ ಖಲಿಸ್ತಾನ್ ಪರ ಚಳುವಳಿಗಳನ್ನು ಉಲ್ಲೇಖಿಸಿದ ಜೈಶಂಕರ್ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವು ಕೆಲವು ಜವಾಬ್ದಾರಿಗಳೊಂದಿಗೆ ಬರುತ್ತದೆ. ಹಾಗೂ ಆ ಸ್ವಾತಂತ್ರ್ಯಗಳನ್ನು ದುರುಪಯೋಗಪಡಿಸಿಕೊಳ್ಳುವುದು ಮತ್ತು ರಾಜಕೀಯ ಉದ್ದೇಶಗಳಿಗಾಗಿ ಬಳಸಿಕೊಳ್ಳುವುದು ತಪ್ಪು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೆನಡಾದಲ್ಲಿ ಖಲಿಸ್ತಾನಿ ಉಗ್ರ ಹರ್ದೀಪ್​ ಸಿಂಗ್ ನಿಜ್ಜರ್​ನ ಗುಂಡಿಕ್ಕಿ ಹತ್ಯೆ

ಖಲಿಸ್ತಾನ್ ಭಯೋತ್ಪಾದಕರ ವಿರುದ್ಧ ಯಾವುದೇ ಕ್ರಮವಿಲ್ಲ

ಕೆನಡಾದಲ್ಲಿನ ಭಾರತೀಯ ಹೈಕಮಿಷನ್ ಮತ್ತು ಕಾನ್ಸುಲೇಟ್ ಜನರಲ್ ಮೇಲಿನ ಬಾಂಬ್ ದಾಳಿಗಳ ಬಗ್ಗೆ ಮಾತನಾಡಿದ ಜೈಶಂಕರ್​​​ ಕೆನಡಾದ ಅಧಿಕಾರಿಗಳು ಈ ಕೃತ್ಯವನ್ನು ಮಾಡಿದ ಅಪರಾಧಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಗೊಂಡಿಲ್ಲ. ಇದರ ಜತೆಗೆ ಭಾರತೀಯ ರಾಜತಾಂತ್ರಿಕರನ್ನು ಸಾರ್ವಜನಿಕವಾಗಿ ಬೆದರಿಕೆ ಹಾಕಲಾಗಿತ್ತು. ಆದರೆ ಈ ಯಾವುದರ ಬಗ್ಗೆ ಅಲ್ಲಿ ಪ್ರಧಾನಿ ಮಾತನಾಡುತ್ತಿಲ್ಲ ಎಂದು ಹೇಳಿದ್ದಾರೆ. ಭಾರತದ ಮೇಲೆ ಖಲಿಸ್ತಾನ್ ಭಯೋತ್ಪಾದಕರು ನಡೆಸುತ್ತಿರುವ ದಾಳಿ ಬಗ್ಗೆ ಯಾವುದೇ ಮಾತು ಇಲ್ಲ ಎಂದು ಹೇಳೀದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:54 am, Thu, 16 November 23

ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ