US Presidential Poll: ಡೊನಾಲ್ಡ್ ಟ್ರಂಪ್ ಗೆಲುವು, ಐತಿಹಾಸಿಕ ವಿಜಯಕ್ಕಾಗಿ ಸ್ನೇಹಿತನ ಅಭಿನಂದಿಸಿದ ಮೋದಿ

|

Updated on: Nov 06, 2024 | 2:18 PM

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದಿರುವ ಡೊನಾಲ್ಡ್ ಟ್ರಂಪ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಎಕ್ಸ್​ನಲ್ಲಿ ಡೊನಾಲ್ಡ್​ ಟ್ರಂಪ್ ಜತೆಗಿರುವ ಫೋಟೊವನ್ನು ಪೋಸ್ಟ್​ ಮಾಡಿದ್ದು, ಐತಿಹಾಸಿಕ ಚುನಾವಣಾ ವಿಜಯಕ್ಕಾಗಿ ನನ್ನ ಸ್ನೇಹಿತನಿಗೆ ಹೃತ್ಪೂರ್ವಕ ಅಭಿನಂದನೆಗಳು. ನಮ್ಮ ಜನರ ಯೋಗಕ್ಷೇಮಕ್ಕಾಗಿ ಮತ್ತು ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ನಾವು ಒಟ್ಟಾಗಿ ಕೆಲಸ ಮಾಡೋಣ ಎಂದಿದ್ದಾರೆ.

US Presidential Poll: ಡೊನಾಲ್ಡ್ ಟ್ರಂಪ್ ಗೆಲುವು, ಐತಿಹಾಸಿಕ ವಿಜಯಕ್ಕಾಗಿ ಸ್ನೇಹಿತನ ಅಭಿನಂದಿಸಿದ ಮೋದಿ
ಡೊನಾಲ್ಡ್​ ಟ್ರಂಪ್
Follow us on

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಡೊನಾಲ್ಡ್ ಟ್ರಂಪ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಎಕ್ಸ್​ನಲ್ಲಿ ಡೊನಾಲ್ಡ್​ ಟ್ರಂಪ್ ಜತೆಗಿರುವ ಫೋಟೊವನ್ನು ಪೋಸ್ಟ್​ ಮಾಡಿದ್ದು, ಐತಿಹಾಸಿಕ ಚುನಾವಣಾ ವಿಜಯಕ್ಕಾಗಿ ನನ್ನ ಸ್ನೇಹಿತನಿಗೆ ಹೃತ್ಪೂರ್ವಕ ಅಭಿನಂದನೆಗಳು. ನಮ್ಮ ಜನರ ಯೋಗಕ್ಷೇಮಕ್ಕಾಗಿ ಮತ್ತು ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ನಾವು ಒಟ್ಟಾಗಿ ಕೆಲಸ ಮಾಡೋಣ ಎಂದಿದ್ದಾರೆ.

ಹಿಂದಿನಂತೆಯೇ ಭಾರತ-ಯುಎಸ್ ಸಮಗ್ರ ಜಾಗತಿಕ ಮತ್ತು ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸಲು ನಮ್ಮ ಸಹಕಾರವನ್ನು ಎದುರು ನೋಡುತ್ತಿದ್ದೇವೆ ಎಂದಿದ್ದಾರೆ. ಯುಎಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಎಲೆಕ್ಟೋರಲ್ ಕಾಲೇಜ್ ಮತಗಳ ಎಣಿಕೆ ನಡೆಯುತ್ತಿದೆ. ಒಟ್ಟು 538 ಚುನಾವಣಾ ಮತಗಳಿದ್ದು, ಗೆಲುವಿಗೆ 270 ಮತಗಳ ಅಗತ್ಯವಿದೆ.

ಇದುವರೆಗೆ 491 ಚುನಾವಣಾ ಮತಗಳ ಫಲಿತಾಂಶ ಬಂದಿದೆ. ಟ್ರಂಪ್ ಇದೀಗ ಮ್ಯಾಜಿಕ್ ನಂಬರ್ ಸಮೀಪ ತಲುಪಿದ್ದು, ಇದುವರೆಗೆ 267 ಮತಗಳನ್ನು ಪಡೆದುಕೊಂಡಿದ್ದಾರೆ. ಗೆಲ್ಲಲು ಕೇವಲ ಮೂರು ಮತಗಳ ಅಗತ್ಯವಿದೆ. ಅದೇ ಸಮಯದಲ್ಲಿ ಡೆಮಾಕ್ರಟಿಕ್ ಅಭ್ಯರ್ಥಿ ಕಮಲಾ ಹ್ಯಾರಿಸ್ ಕೂಡ ಸ್ಪರ್ಧೆಯಲ್ಲಿ ಉಳಿದಿದ್ದಾರೆ. ಕಮಲಾ ಅವರು ಇಲ್ಲಿಯವರೆಗೆ 224 ಮತಗಳನ್ನು ಪಡೆದಿದ್ದಾರೆ. ಆದರೆ, ಅವರು ಬಹುಮತದಿಂದ ದೂರ ಉಳಿದಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ