ಕೇರಳ: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಜೈಲಿನಿಂದ ಎಸ್ಕೇಪ್

ಅತ್ಯಾಚಾರ ಹಾಗೂ ಕೊಲೆ(Murder) ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಗೋವಿಂದಚಾಮಿ, ಕೇರಳದ ಕಣ್ಣೂರು ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. 2011ರಲ್ಲಿ ಈತ ಓರ್ವ ಯುವತಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ. ಬೆಳಗಿನ ಜಾವ ಆತನ ಸೆಲ್​ಗೆ ನಿಯಮಿತ ತಪಾಸಣೆಗೆಂದು ಬಂದಾಗ ಆತ ಇಲ್ಲದಿರುವುದು ತಿಳಿಸುಬಂದಿದೆ.ಜೈಲು ಅಧಿಕಾರಿಗಳು ತಕ್ಷಣ ಜೈಲು ಆವರಣದಲ್ಲಿ ಮತ್ತು ಸುತ್ತಮುತ್ತ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

ಕೇರಳ: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಜೈಲಿನಿಂದ ಎಸ್ಕೇಪ್
ಅಪರಾಧಿ
Image Credit source: India Today

Updated on: Jul 25, 2025 | 10:40 AM

ತಿರುವನಂತಪುರಂ, ಜುಲೈ 25: ಅತ್ಯಾಚಾರ ಹಾಗೂ ಕೊಲೆ(Murder) ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿ ಗೋವಿಂದಚಾಮಿ, ಕೇರಳದ ಕಣ್ಣೂರು ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. 2011ರಲ್ಲಿ ಈತ ಓರ್ವ ಯುವತಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ.

ಬೆಳಗಿನ ಜಾವ ಆತನ ಸೆಲ್​ಗೆ ನಿಯಮಿತ ತಪಾಸಣೆಗೆಂದು ಬಂದಾಗ ಆತ ಇಲ್ಲದಿರುವುದು ತಿಳಿಸುಬಂದಿದೆ.ಜೈಲು ಅಧಿಕಾರಿಗಳು ತಕ್ಷಣ ಜೈಲು ಆವರಣದಲ್ಲಿ ಮತ್ತು ಸುತ್ತಮುತ್ತ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಕೈದಿ ಎಲ್ಲಿಯೂ ಪತ್ತೆಯಾಗಲಿಲ್ಲ. ಬೆಳಗ್ಗೆ 7 ಗಂಟೆಗೆ ಪರಾರಿಯಾಗಿರುವ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಕಣ್ಣೂರು ಪಟ್ಟಣ ಪೊಲೀಸರು ತಿಳಿಸಿದ್ದಾರೆ. ಪ್ರಸ್ತುತ ಹುಡುಕಾಟ ನಡೆಯುತ್ತಿದೆ.

ಫೆಬ್ರವರಿ 1, 2011 ರಂದು ಎರ್ನಾಕುಲಂನಿಂದ ಶೋರನೂರಿಗೆ ಹೋಗುವ ಪ್ಯಾಸೆಂಜರ್ ರೈಲಿನಲ್ಲಿ ಒಂಟಿಯಾಗಿ ಪ್ರಯಾಣಿಸುತ್ತಿದ್ದ ಯುವತಿ ಮೇಲೆ ಶೋರ್ನೂರ್ ಬಳಿಯ ಮಂಜಕ್ಕಾಡ್‌ನಲ್ಲಿ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದ. . ಅವನು ಹೇಗೆ ತಪ್ಪಿಸಿಕೊಂಡಿದ್ದಾನೆ ಎಂಬುದನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಮತ್ತಷ್ಟು ಓದಿ: ತಾಯಿಗಾದ ಅವಮಾನಕ್ಕೆ 10 ವರ್ಷಗಳ ಬಳಿಕ ಕೊಲೆ ಮಾಡಿ ಸೇಡು ತೀರಿಸಿಕೊಂಡ ಮಗ

ಸಂತ್ರಸ್ತೆಯ ತಾಯಿ , ಈ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿ, ಜೈಲಿನಲ್ಲಿ ಇಷ್ಟು ದೊಡ್ಡ ಪ್ರಮಾದ ಹೇಗೆ ನಡೆಯುತ್ತೆ ಎಂದು ಪ್ರಶ್ನಿಸಿದ್ದಾರೆ.ಕಣ್ಣೂರು ಜೈಲು ತುಂಬಾ ದೊಡ್ಡದಾಗಿದೆ. ಅಲ್ಲಿಂದ ಆತ ಹೇಗೆ ಹಾರಿ ತಪ್ಪಿಸಿಕೊಳ್ಳಲು ಸಾಧ್ಯ? ಬೆಂಬಲವಿಲ್ಲದೆ ಅವನು ಅದನ್ನು ಮಾಡಲು ಸಾಧ್ಯವಿಲ್ಲ. ಅದು ಅಸಾಧ್ಯ. ಒಳಗೆ ಯಾರೋ ಅವನಿಗೆ ಸಹಾಯ ಮಾಡುತ್ತಿದ್ದಾರೆ. ಆತನನ್ನು ಹುಡುಕಲೇಬೇಕು ಎಂದು ಒತ್ತಾಯಿಸಿದ್ದಾರೆ.

ಬಿಜೆಪಿ ರಾಜ್ಯ ಅಧ್ಯಕ್ಷ ಕೆ. ಸುರೇಂದ್ರನ್ ಅವರು ಜೈಲು ವ್ಯವಸ್ಥೆಯಲ್ಲಿ ಗಂಭೀರ ಲೋಪಗಳಿವೆ ಎಂದು ಆರೋಪಿಸಿದರು. ಅಪರಾಧಿ ಮಧ್ಯರಾತ್ರಿ 1 ಗಂಟೆಗೆ ಪರಾರಿಯಾಗಿದ್ದಾನೆ. ಜೈಲು ಅಧಿಕಾರಿಗಳಿಗೆ ಬೆಳಗ್ಗೆ 5 ಗಂಟೆಗೆ ಈ ವಿಷಯ ತಿಳಿಯಿತು. ಬೆಳಗ್ಗೆ 7 ಗಂಟೆಗೆ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಗೋಡೆಯ ಮೇಲೆ ವಿದ್ಯುತ್ ಬೇಲಿ ಹಾಕಲಾಗಿತ್ತು.

ಅವನು ಜೈಲಿನಿಂದ ಪರಾರಿಯಾಗುವಾಗ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು. ಎಲ್ಲವೂ ನಿಗೂಢ. ಅವನು ತಪ್ಪಿಸಿಕೊಂಡಿದ್ದಾನೋ ಅಥವಾ ತಪ್ಪಿಸಿಕೊಳ್ಳಲು ಸಹಾಯ ಮಾಡಲಾಗಿತ್ತೋ? ಎಂದು ಸುರೇಂದ್ರನ್ ಕೇಳಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us