ಯೋಗಿ ಆದಿತ್ಯನಾಥ್​ಗೆ ಕೊಲೆ ಬೆದರಿಕೆ ಹಾಕಲು ಯುವಕನೊಬ್ಬ ತನ್ನ ಪ್ರೇಯಸಿ ತಂದೆಯ ಮೊಬೈಲ್ ಕದ್ದಿದ್ದ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​(Yogi Adityanath) ಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಕಾನ್ಪುರದಲ್ಲಿ ಬಂಧಿಸಲಾಗಿದೆ.

ಯೋಗಿ ಆದಿತ್ಯನಾಥ್​ಗೆ ಕೊಲೆ ಬೆದರಿಕೆ ಹಾಕಲು ಯುವಕನೊಬ್ಬ ತನ್ನ ಪ್ರೇಯಸಿ ತಂದೆಯ ಮೊಬೈಲ್ ಕದ್ದಿದ್ದ
ಯೋಗಿ ಆದಿತ್ಯನಾಥ್
Follow us
ನಯನಾ ರಾಜೀವ್
|

Updated on: Apr 26, 2023 | 8:41 AM

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​(Yogi Adityanath) ಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಕಾನ್ಪುರದಲ್ಲಿ ಬಂಧಿಸಲಾಗಿದೆ. ಆರೋಪಿಯು 112ಗೆ ಸಂದೇಶ ಕಳುಹಿಸುವ ಮೂಲಕ ಕೊಲೆ ಬೆದರಿಕೆ ಹಾಕಿದ್ದರು. ಬಳಿಕ ಲಕ್ನೋದಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು, ಬಳಿಕ ಕಾನ್ಪುರದಲ್ಲಿ ವ್ಯಕ್ತಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪೊಲೀಸರು ಆರೋಪಿಯನ್ನು ಬಂಧಿಸಿದಾಗ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಆರೋಪಿ ತನ್ನ ಪ್ರೇಯಸಿಯನ್ನು ಮದುವೆಯಾಗಲು ಬಯಸಿದ್ದ, ಪ್ರೇಯಸಿ ತಂದೆ ಜೈಲಿಗೆ ಹೋದರೆ ತಮ್ಮ ಮದುವೆ ಸುಗಮವಾಗುತ್ತದೆ ಎಂದು ಪ್ರೇಯಸಿಯ ತಂದೆಯ ಫೋನ್ ಕದ್ದು ಅದರಿಂದ ಸಂದೇಶ ಕಳುಹಿಸಿದ್ದ ಎನ್ನುವ ವಿಚಾರ ಬಹಿರಂಗಗೊಂಡಿದೆ.

ಮತ್ತಷ್ಟು ಓದಿ: ಬಿಜೆಪಿ ಕೇಂದ್ರ ನಾಯಕರ ಪ್ರಚಾರದ ಭರಾಟೆ: ಇಂದು ರಾಜ್ಯಕ್ಕೆ ಯೋಗಿ, ರಾಜನಾಥ್​​​ ಸಿಂಗ್​​, ನಿರ್ಮಲಾ ಭೇಟಿ

ಬಾಬುಪುರದ ನಿವಾಸಿ ಅಮೀನ್ ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. 10 ದಿನಗಳ ಹಿಂದೆ ತನ್ನ ಫೋನ್ ಕಳ್ಳತನವಾಗಿದೆ ಎಂದು ಫೋನ್ ಮಾಲೀಕರು ತಿಳಿಸಿದ್ದರು. ಹುಡುಗಿಯ ತಂದೆಗೆ ಇವರಿಬ್ಬರ ಪ್ರೀತಿ ಇಷ್ಟವಿರಲಿಲ್ಲ. ಅದಕ್ಕಾಗಿ ಕೋಪಗೊಂಡ ಯುವಕ ಪ್ರೇಯಸಿ ತಮದೆಯನ್ನು ಜೈಲಿಗಟ್ಟಲು ತಯಾರಿ ನಡೆಸಿದ್ದ.

ಪೊಲೀಸರು ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 506 ಮತ್ತು 507 ಮತ್ತು ಐಟಿ ಕಾಯ್ದೆ 66 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಈ ರೀತಿ ಬೆದರಿಕೆ ಬಂದಿರುವುದು ಇದೇ ಮೊದಲಲ್ಲ, ಯೋಗಿ ಸರ್ಕಾರ ಕೈಗೊಂಡಿರುವ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಹಲವು ಬಾರಿ ಬೆದರಿಕೆ ಎದುರಿಸಿದ್ದಾರೆ. ವಾರದ ಹಿಂದೆಯೂ ಫೇಸ್ ಬುಕ್ ಮೂಲಕ ಕೊಲೆ ಬೆದರಿಕೆ ಹಾಕಲಾಗಿತ್ತು. ಈ ಪೋಸ್ಟ್‌ನಲ್ಲಿ ಸಿಎಂ ಯೋಗಿಗೆ ಗುಂಡು ಹಾರಿಸುವುದಾಗಿ ಬೆದರಿಕೆ ಹಾಕಲಾಗಿತ್ತು, ನಂತರ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಕ್ರಮ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್