Yogi Adityanath: ಯುಪಿ ಸಿಎಂ ಯೋಗಿ ಆದಿತ್ಯನಾಥ್ಗೆ ಜೀವ ಬೆದರಿಕೆ, ಪ್ರಕರಣ ದಾಖಲು
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath)ಗೆ ಜೀವ ಬೆದರಿಕೆ ಬಂದಿದ್ದು, ಪ್ರಕರಣ ದಾಖಲಾಗಿದೆ. ಅಪರಿಚಿತ ವ್ಯಕ್ತಿಯೊಬ್ಬರು 112 ನಂಬರ್‌ಗೆ ಸಂದೇಶ ಕಳುಹಿಸುವ ಮೂಲಕ ಈ ಬೆದರಿಕೆ ಹಾಕಿದ್ದು, ಸಂಚಲನ ಮೂಡಿಸಿದೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath)ಗೆ ಜೀವ ಬೆದರಿಕೆ ಬಂದಿದ್ದು, ಪ್ರಕರಣ ದಾಖಲಾಗಿದೆ. ಅಪರಿಚಿತ ವ್ಯಕ್ತಿಯೊಬ್ಬರು 112 ನಂಬರ್‌ಗೆ ಸಂದೇಶ ಕಳುಹಿಸುವ ಮೂಲಕ ಈ ಬೆದರಿಕೆ ಹಾಕಿದ್ದು, ಸಂಚಲನ ಮೂಡಿಸಿದೆ. ಸಿಎಂ ಯೋಗಿ ಅವರಿಗೆ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಭದ್ರತಾ ಸಂಸ್ಥೆಗಳು ಎಚ್ಚೆತ್ತಿದ್ದು, ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಸಿಎಂ ಯೋಗಿ ಅವರಿಗೆ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 506 ಮತ್ತು 507 ಮತ್ತು ಐಟಿ ಕಾಯ್ದೆ 66 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಈ ರೀತಿ ಬೆದರಿಕೆ ಬಂದಿರುವುದು ಇದೇ ಮೊದಲಲ್ಲ, ಯೋಗಿ ಸರ್ಕಾರ ಕೈಗೊಂಡಿರುವ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಹಲವು ಬಾರಿ ಬೆದರಿಕೆ ಎದುರಿಸಿದ್ದಾರೆ.
ಮತ್ತಷ್ಟು ಓದಿ: ಏಪ್ರಿಲ್ 26ರಂದು ಕರ್ನಾಟಕಕ್ಕೆ ಬುಲ್ಡೋಜರ್ ಖ್ಯಾತಿಯ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಭೇಟಿ
ವಾರದ ಹಿಂದೆಯೂ ಫೇಸ್ ಬುಕ್ ಮೂಲಕ ಕೊಲೆ ಬೆದರಿಕೆ ಹಾಕಲಾಗಿತ್ತು. ಈ ಪೋಸ್ಟ್‌ನಲ್ಲಿ ಸಿಎಂ ಯೋಗಿಗೆ ಗುಂಡು ಹಾರಿಸುವುದಾಗಿ ಬೆದರಿಕೆ ಹಾಕಲಾಗಿತ್ತು, ನಂತರ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಕ್ರಮ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.
ಏಪ್ರಿಲ್ 26 ಮತ್ತು 30 ಮತ್ತು ಮೇ 6 ಮತ್ತು 7 ರಂದು ಸಾರ್ವಜನಿಕ ಸಭೆಗಳಲ್ಲಿ ಯೋಗಿ ಆದಿತ್ಯನಾಥ್ ಭಾಗವಹಿಸಲಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ