ಉತ್ತರ ಪ್ರದೇಶದಲ್ಲಿ ಸಿಡಿಲು ಬಡಿದು ಒಂದೇ ದಿನದಲ್ಲಿ 14 ಜನ ಸಾವು, 16 ಮಂದಿಗೆ ಗಾಯ
ಸಿಎಂ ಯೋಗಿ ಆದಿತ್ಯನಾಥ್ ಸಿಡಿಲು ಬಡಿದು ಸಾವನ್ನಪ್ಪಿದವರ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತರ ಕುಟುಂಬಗಳಿಗೆ ತಲಾ 4 ಲಕ್ಷ ರೂ.ವನ್ನು ತಕ್ಷಣವೇ ನೀಡುವಂತೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಲಕ್ನೋ: ಉತ್ತರ ಪ್ರದೇಶದಲ್ಲಿ (Uttar Pradesh) ಬುಧವಾರ ಸಿಡಿಲು ಬಡಿದು 14 ಮಂದಿ ಸಾವನ್ನಪ್ಪಿದ್ದು, 16 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಆರ್ಥಿಕ ನೆರವು ಘೋಷಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಪರಿಹಾರ ಆಯುಕ್ತರ ಕಚೇರಿ ನೀಡಿದ ವಿವರಗಳ ಪ್ರಕಾರ, ಸಿಡಿಲು ಬಡಿದು 4 ಜನರು ಬಂದಾದಲ್ಲಿ, ಫತೇಪುರ್‌ನಲ್ಲಿ ಇಬ್ಬರು ಮತ್ತು ಬಲರಾಂಪುರ, ಚಂದೌಲಿ, ಬುಲಂದ್‌ಶಹರ್, ರಾಯ್ ಬರೇಲಿ, ಅಮೇಥಿ, ಕೌಶಂಬಿ, ಸುಲ್ತಾನ್‌ಪುರ ಮತ್ತು ಚಿತ್ರಕೂಟ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಇಂದು ಅಯೋಧ್ಯೆಯಲ್ಲಿ ರಾಮಮಂದಿರ ಗರ್ಭಗೃಹ ನಿರ್ಮಾಣಕ್ಕೆ ಸಿಎಂ ಯೋಗಿ ಆದಿತ್ಯನಾಥ್ ಶಂಕುಸ್ಥಾಪನೆ
ಸಿಎಂ ಯೋಗಿ ಆದಿತ್ಯನಾಥ್ ಸಿಡಿಲು ಬಡಿದು ಸಾವನ್ನಪ್ಪಿದವರ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತರ ಕುಟುಂಬಗಳಿಗೆ ತಲಾ 4 ಲಕ್ಷ ರೂ.ವನ್ನು ತಕ್ಷಣವೇ ನೀಡುವಂತೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಸಿಡಿಲು ಬಡಿದು ಗಾಯಗೊಂಡಿರುವವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Published On - 8:37 am, Thu, 21 July 22