ICC World Cup 2023: ಐಸಿಸಿ ಮಾಜಿ ಅಧ್ಯಕ್ಷ ಶರದ್ ಪವಾರ್ ಅವರನ್ನೇ ಮರೆಯಿತೇ ಬಿಸಿಸಿಐ

ಐಸಿಸಿ ವಿಶ್ವಕಪ್ 2023(World Cup 2023) ಫೈನಲ್ ಪಂದ್ಯವು ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಿತು. ಈ ಅಂತಿಮ ಪಂದ್ಯಕ್ಕೆ ಐಸಿಸಿ ಮಾಜಿ ಅಧ್ಯಕ್ಷ ಶರದ್ ಪವಾರ್(Sharad Pawar) ​ರನ್ನು ಆಹ್ವಾನಿಸಲು ಬಿಸಿಸಿಐ ಮರೆಯಿತೇ ಎನ್ನುವ ಪ್ರಶ್ನೆಗಳು ಎದ್ದಿವೆ. ICC ವಿಶ್ವಕಪ್ 2023ನಲ್ಲಿ ಹೆಸರು ಮಾಡುವ ಟೀಂ ಇಂಡಿಯಾದ ಆಸೆ ಈ ವರ್ಷವೂ ಈಡೇರಲಿಲ್ಲ. ಟೀಂ ಇಂಡಿಯಾವನ್ನು ಸೋಲಿಸಿದ ಕಾಂಗರೂಗಳು ಆರನೇ ಬಾರಿಗೆ ವಿಶ್ವಕಪ್ ಗೆದ್ದಿದ್ದಾರೆ. ಈ ವರ್ಷ ವಿಶ್ವಕಪ್ ಅನ್ನು ಭಾರತ ಆಯೋಜಿಸಿತ್ತು . 2023 ರ ವಿಶ್ವಕಪ್ ಎಷ್ಟು ರೋಚಕವಾಗಿತ್ತೋ, ಹಾಗೆಯೇ ಕೆಲವು ಕಾರಣಗಳಿಂದ ಇದು ವಿವಾದದಲ್ಲಿ ಮುಳುಗಿದೆ.

ICC World Cup 2023: ಐಸಿಸಿ ಮಾಜಿ ಅಧ್ಯಕ್ಷ ಶರದ್ ಪವಾರ್ ಅವರನ್ನೇ ಮರೆಯಿತೇ ಬಿಸಿಸಿಐ
ಶರದ್ ಪವಾರ್
Follow us
ನಯನಾ ರಾಜೀವ್
|

Updated on:Nov 21, 2023 | 3:15 PM

ಐಸಿಸಿ ವಿಶ್ವಕಪ್ 2023(World Cup 2023) ಫೈನಲ್ ಪಂದ್ಯವು ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ(November 19) ನಡೆಯಿತು. ಈ ಅಂತಿಮ ಪಂದ್ಯಕ್ಕೆ ಐಸಿಸಿ ಮಾಜಿ ಅಧ್ಯಕ್ಷ ಶರದ್ ಪವಾರ್(Sharad Pawar) ​ರನ್ನು ಆಹ್ವಾನಿಸಲು ಬಿಸಿಸಿಐ ಮರೆಯಿತೇ ಎನ್ನುವ ಪ್ರಶ್ನೆಗಳು ಎದ್ದಿವೆ. ICC ವಿಶ್ವಕಪ್ 2023ನಲ್ಲಿ ಹೆಸರು ಮಾಡುವ ಟೀಂ ಇಂಡಿಯಾದ ಆಸೆ ಈ ವರ್ಷವೂ ಈಡೇರಲಿಲ್ಲ. ಟೀಂ ಇಂಡಿಯಾವನ್ನು ಸೋಲಿಸಿದ ಕಾಂಗರೂಗಳು ಆರನೇ ಬಾರಿಗೆ ವಿಶ್ವಕಪ್ ಗೆದ್ದಿದ್ದಾರೆ. ಈ ವರ್ಷ ವಿಶ್ವಕಪ್ ಅನ್ನು ಭಾರತ ಆಯೋಜಿಸಿತ್ತು . 2023 ರ ವಿಶ್ವಕಪ್ ಎಷ್ಟು ರೋಚಕವಾಗಿತ್ತೋ, ಹಾಗೆಯೇ ಕೆಲವು ಕಾರಣಗಳಿಂದ ಇದು ವಿವಾದದಲ್ಲಿ ಮುಳುಗಿದೆ.

ವಿಶ್ವಕಪ್‌ಗೆ ಸಂಬಂಧಿಸಿದಂತೆ ಸದ್ಯದ ವಿವಾದ ಏನೆಂದರೆ ವಿಶ್ವಕಪ್‌ನ ಫೈನಲ್‌ಗೆ ದೇಶ-ವಿದೇಶದ ಹಲವು ಗಣ್ಯರು ಆಗಮಿಸಿದ್ದರು. ಆದರೆ, ದೇಶಕ್ಕೆ ಮೊದಲ ವಿಶ್ವಕಪ್ ಗೆದ್ದುಕೊಟ್ಟ ಭಾರತ ಕ್ರಿಕೆಟ್ ತಂಡದ ನಾಯಕ ಕಪಿಲ್ ದೇವ್ ಅವರನ್ನು ಆಹ್ವಾನಿಸಿರಲಿಲ್ಲ. ಇದರಿಂದಾಗಿ ಬಿಸಿಸಿಐ ಯೋಜನೆ ಬಗ್ಗೆ ಹಲವು ಪ್ರಶ್ನೆಗಳು ಎದ್ದಿವೆ. ಈ ಮೂಲಕ ವಿಶ್ವಕಪ್ ಫೈನಲ್‌ಗೆ ಆಹ್ವಾನಿತರಲ್ಲದವರ ಪಟ್ಟಿಯಲ್ಲಿ ಕಪಿಲ್ ದೇವ್ ಜೊತೆಗೆ ಮತ್ತೋರ್ವ ಹೆಸರು ಸೇರಿದೆ ಎನ್ನಲಾಗುತ್ತಿದೆ.

ಈ ಕುರಿತು ಕಪಿಲ್ ದೇವ್ ಮಾತನಾಡಿ, ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿರಲಿಲ್ಲ. ಅವರು ನನ್ನನ್ನು ಆಹ್ವಾನಿಸಲಿಲ್ಲ, ಹಾಗಾಗಿ ನಾನು ಹೋಗಲಿಲ್ಲ. ನನ್ನೊಂದಿಗೆ 1983 ರ ಸಂಪೂರ್ಣ ತಂಡವನ್ನು ಫೈನಲ್ ವೀಕ್ಷಿಸಲು ನಾನು ಬಯಸುತ್ತೇನೆ ಎಂದು ಹೇಳಿದ್ದರು. ಕಪಿಲ್ ದೇವ್ ಜತೆ ಮತ್ತೊಂದು ಹೆಸರು ಸೇರ್ಪಡೆಯಾಗಿದೆ ಆ ಹೆಸರು ಶರದ್ ಪವಾರ್, ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಮಾಜಿ ಅಧ್ಯಕ್ಷ.

ಮತ್ತಷ್ಟು ಓದಿ: Crime News: ನೀನು ಮಟನ್ ತಿಂದಿದ್ದರಿಂದ ಭಾರತ ಸೋತಿತು ಎಂದ ತಮ್ಮನನ್ನೇ ಕೊಂದ ಅಣ್ಣ

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ವಿಶ್ವಕಪ್ 2023 ಫೈನಲ್‌ಗೆ ಆಹ್ವಾನಿಸಲಾಗಿಲ್ಲ ಎಂದು ವಿಶ್ವಾಸಾರ್ಹ ಮೂಲಗಳು ತಿಳಿಸಿವೆ. ಶರದ್ ಪವಾರ್ ಬಿಸಿಸಿಐ ಮತ್ತು ಐಸಿಸಿ ಅಧ್ಯಕ್ಷ ಹುದ್ದೆಯನ್ನು ಅಲಂಕರಿಸಿದ್ದಾರೆ. ಹಾಗಾಗಿ ಬಿಸಿಸಿಐ ಅವರನ್ನು ಆಹ್ವಾನಿಸುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಬಿಸಿಸಿಐ ಶರದ್ ಪವಾರ್ ಅವರನ್ನು ಫೈನಲ್‌ಗೆ ಆಹ್ವಾನಿಸಿಲ್ಲ ಎಂದು ಮೂಲಗಳು ತಿಳಿಸಿವೆ.

ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಟೀಂ ಇಂಡಿಯಾವನ್ನು ಆಸ್ಟ್ರೇಲಿಯಾ 6 ವಿಕೆಟ್‌ಗಳಿಂದ ಸೋಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 240 ರನ್ ಗಳಿಸಿತ್ತು. ಈ ಗುರಿಯನ್ನು ಆಸ್ಟ್ರೇಲಿಯಾ ಆರಾಮವಾಗಿ ಬೆನ್ನಟ್ಟಿತು. ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ಆರನೇ ಬಾರಿಗೆ ವಿಶ್ವಕಪ್ ಎತ್ತಿ ಹಿಡಿದಿದೆ. ಟೀಂ ಇಂಡಿಯಾ 1983 ಮತ್ತು 2011ರಲ್ಲಿ ಎರಡು ಬಾರಿ ವಿಶ್ವಕಪ್ ಗೆದ್ದಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:13 pm, Tue, 21 November 23

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ