ದೆಹಲಿ ಮದ್ಯ ನೀತಿ ಪ್ರಕರಣ: ಎಎಪಿಯ ಸಂಸದ ಸಂಜಯ್ ಸಿಂಗ್ ಮನೆ ಮೇಲೆ ಇಡಿ ದಾಳಿ

ದೆಹಲಿಯ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ  ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್(Sanjay Singh)ಅವರ ಮನೆ ಮೇಲೆ ಇಡಿ ದಾಳಿ ನಡೆದಿದೆ. ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಈಗಾಗಲೇ ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನೂ ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು. ಮದ್ಯ ನೀತಿ ಪ್ರಕರಣದಲ್ಲಿ ಸಲ್ಲಿಸಲಾದ ಚಾರ್ಜ್ ಶೀಟ್ ನಲ್ಲಿ ಸಂಜಯ್ ಸಿಂಗ್ ಹೆಸರಿತ್ತು.

ದೆಹಲಿ ಮದ್ಯ ನೀತಿ ಪ್ರಕರಣ: ಎಎಪಿಯ ಸಂಸದ ಸಂಜಯ್ ಸಿಂಗ್ ಮನೆ ಮೇಲೆ ಇಡಿ ದಾಳಿ
ಸಂಜಯ್ ಸಿಂಗ್
Image Credit source: India TV

Updated on: Oct 04, 2023 | 8:35 AM

ದೆಹಲಿಯ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ  ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್(Sanjay Singh)ಅವರ ಮನೆ ಮೇಲೆ ಇಡಿ ದಾಳಿ ನಡೆದಿದೆ. ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಈಗಾಗಲೇ ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನೂ ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು. ಮದ್ಯ ನೀತಿ ಪ್ರಕರಣದಲ್ಲಿ ಸಲ್ಲಿಸಲಾದ ಚಾರ್ಜ್ ಶೀಟ್ ನಲ್ಲಿ ಸಂಜಯ್ ಸಿಂಗ್ ಹೆಸರಿತ್ತು.

ಇಡಿ ಚಾರ್ಜ್ ಶೀಟ್ ಪ್ರಕಾರ, ದೆಹಲಿ ಮದ್ಯ ನೀತಿ ಹಗರಣದ ಆರೋಪಿ ಎಂದು ಹೆಸರಿಸಲಾದ ದೆಹಲಿ ಉದ್ಯಮಿ ದಿನೇಶ್ ಅರೋರಾ ಅವರು ಈ ಹಿಂದೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಂಜಯ್ ಸಿಂಗ್ ಅವರ ಸಮ್ಮುಖದಲ್ಲಿ ಅವರ ನಿವಾಸದಲ್ಲಿ ಭೇಟಿ ಮಾಡಿದ್ದರು.

ವರದಿಯ ಪ್ರಕಾರ, ಕಾರ್ಯಕ್ರಮವೊಂದರಲ್ಲಿ ಸಂಜಯ್ ಸಿಂಗ್ ಅವರನ್ನು ಭೇಟಿಯಾಗಿದ್ದಾಗಿ ಅರೋರಾ ಹೇಳಿಕೆಯಲ್ಲಿ ಇಡಿಗೆ ತಿಳಿಸಿದ್ದಾರೆ. ಇದಾದ ನಂತರ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಸಂಪರ್ಕಕ್ಕೂ ಬಂದಿದ್ದರು.

ಮತ್ತಷ್ಟು ಓದಿ: Manish Sisodia: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ, ಇತರ ಆರೋಪಿಗಳ ಆಸ್ತಿ ಜಪ್ತಿ

ಈ ವರ್ಷದ ಮೇ ತಿಂಗಳ ಆರಂಭದಲ್ಲಿ ಸಂಜಯ್ ಸಿಂಗ್ ಅವರ ಮನೆ ಮೇಲೆ ಇಡಿ ದಾಳಿ ನಡೆಸಿತ್ತು. ಆ ವೇಳೆ ಆತನ ಸಹಚರರ ಮನೆ ಹಾಗೂ ಕಚೇರಿಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಕೇಂದ್ರ ತನಿಖಾ ಸಂಸ್ಥೆಗಳ ಮೂಲಕ ಪ್ರತಿಪಕ್ಷ ನಾಯಕರನ್ನು ಹೆದರಿಸಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ ಎಂದು ಅವರು ಹೇಳುತ್ತಿದ್ದಾರೆ.

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಿಚಾರಣೆ ನಡೆಸಲಿರುವ ಸಮಯದಲ್ಲಿ ಎಎಪಿ ಸಂಸದ ಸಂಜಯ್ ಸಿಂಗ್ ಅವರ ಮನೆ ಮೇಲೆ ಇಡಿ ತಂಡ ದಾಳಿ ಮಾಡಿದೆ. ಈ ಸಂಬಂಧ ಸಿಬಿಐ ಮತ್ತು ಇಡಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:34 am, Wed, 4 October 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us