ಮದ್ಯ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 20ರವರೆಗೆ ವಿಸ್ತರಣೆ

ಹಲಿ ಮದ್ಯ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಂಗ ಬಂಧನದಲ್ಲಿರುವ ಮುಖ್ಯಮಂತ್ರಿ ಅರವಿಂದ್​​ ಕೇಜ್ರಿವಾಲ್​​​ ಬಂಧನವನ್ನು ಮೇ 20ರವರೆಗೆ ವಿಸ್ತರಣೆ ಮಾಡಲಾಗಿದೆ. 

ಮದ್ಯ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 20ರವರೆಗೆ ವಿಸ್ತರಣೆ
ಅರವಿಂದ್ ಕೇಜ್ರಿವಾಲ್
Follow us
ಅಕ್ಷಯ್​ ಪಲ್ಲಮಜಲು​​
|

Updated on:May 07, 2024 | 3:10 PM

ದೆಹಲಿ, ಮೇ.7: ದೆಹಲಿ ಮದ್ಯ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ (Liquor policy scam) ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್​​ ಕೇಜ್ರಿವಾಲ್ (Arvind Kejriwal)​​​ ಅವರು ನ್ಯಾಯಾಂಗ ಬಂಧನದಲ್ಲಿದ್ದು, ಇದೀಗ ಅವರ ನ್ಯಾಯಾಂಗ ಬಂಧನವನ್ನು ಮೇ 20 ರವರೆಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ವಿಸ್ತರಿಸಿದೆ. ಅರವಿಂದ್ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದು, ಇದರ ಮಧ್ಯೆ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್​​ನಲ್ಲಿ ಅರವಿಂದ್​​​​ ಕೇಜ್ರಿವಾಲ್​​​​ ಜಾಮೀನು ಅರ್ಜಿಯ ವಿಚಾರಣೆ ನಡೆಯುತ್ತಿದೆ. ಇಂದು ಅವರಿಗೆ ಮಧ್ಯಂತರ ಜಾಮೀನು ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಒಂದು ವೇಳೆ ಜಾಮೀನು ಸಿಕ್ಕರು ಕೂಡ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುವುದಿಲ್ಲ ಎಂದು ಹೇಳಲಾಗಿದೆ. ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಲು ಕೇಜ್ರಿವಾಲ್​​ ಅವರು ಜಾಮೀನು ಅರ್ಜಿಯನ್ನು ಸಲ್ಲಿಸಿದರು.

ಈಗಾಗಲೇ ಕೋರ್ಟ್​​​ ಅವರಿಗೆ ನೀವು ನಿಮ್ಮ ಹುದ್ದೆಯಲ್ಲಿ (ಮುಖ್ಯಮಂತ್ರಿ) ಮುಂದುವರಿಯುವಂತಿಲ್ಲ ಏಕೆಂದರೆ ರಾಜಕೀಯ ವ್ಯವಸ್ಥೆಗೆ ಇದು ಪರಿಣಾಮವನ್ನು ಉಂಟು ಮಾಡಬಹುದು ಎಂದು ಹೇಳಿದ್ದಾರೆ. ಇದು ಕಾನೂನುಬದ್ಧತೆಯ ಪ್ರಶ್ನೆಯಲ್ಲ, ಆದರೆ ಔಚಿತ್ಯದ ಪ್ರಶ್ನೆಯಾಗಿದೆ. ಚುನಾವಣೆ ಪ್ರಚಾರದ ಕಾರಣಕ್ಕಾಗಿ ಮಧ್ಯಂತರ ಜಾಮೀನು ನೀಡುತ್ತೇವೆ, ಇಲ್ಲದಿದ್ದರೆ ಜಾಮೀನು ನೀಡುತ್ತಿರಲಿಲ್ಲ ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠ ಹೇಳಿದೆ.

ಇದನ್ನೂ ಓದಿ: ಕೇಜ್ರಿವಾಲ್ ಗೋವಾದ 7-ಸ್ಟಾರ್ ಹೋಟೆಲ್‌ನಲ್ಲಿ ಆರೋಪಿಗಳ ಖರ್ಚಿನಲ್ಲಿ ತಂಗಿದ್ದರು ಎಂಬುದಕ್ಕೆ ಸಾಕ್ಷ್ಯವಿದೆ: ಇಡಿ

ಕೇಜ್ರಿವಾಲ್ ಅವರು “ದಿಲ್ಲಿಯ ಹಾಲಿ ಮುಖ್ಯಮಂತ್ರಿ ಮತ್ತು ಲೋಕಸಭೆ ಚುನಾವಣೆಗೆ ಪ್ರಚಾರ ಮಾಡಬೇಕಾಗಿರುವುದರಿಂದ” ಜಾಮೀನು ವಾದಗಳನ್ನು ಆಲಿಸುವುದಾಗಿ ಸುಪ್ರೀಂ ಕೋರ್ಟ್​ ಇಡಿಗೆ ತಿಳಿಸಿದೆ. ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಬಂಧಿಸಲಾಯಿತು ಮತ್ತು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ. ಸುಪ್ರೀಂ ಕೋರ್ಟ್ ಏಪ್ರಿಲ್ 15 ರಂದು ಇಡಿಗೆ ನೋಟಿಸ್ ಜಾರಿ ಮಾಡಿತ್ತು ಮತ್ತು ಕೇಜ್ರಿವಾಲ್ ಅವರ ಬಂಧನದ ವಿರುದ್ಧದ ಮನವಿಗೆ ಪ್ರತಿಕ್ರಿಯೆ ಕೇಳಿತ್ತು. ಏಪ್ರಿಲ್ 9 ರಂದು, ದೆಹಲಿ ಹೈಕೋರ್ಟ್ ಕೇಜ್ರಿವಾಲ್ ಅವರ ಬಂಧನವನ್ನು ಎತ್ತಿಹಿಡಿದಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:37 pm, Tue, 7 May 24

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್