ದೆಹಲಿಯ ಮದ್ಯ ನೀತಿ ಪ್ರಕರಣದಲ್ಲಿ ವಿಚಾರಣೆಗಾಗಿ ಸಿಬಿಐ ಮುಂದೆ ಹಾಜರಾಗಲು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸಮಯ ಕೋರಿದ್ದಾರೆ. ಫೆಬ್ರವರಿ 27ರ ನಂತರ ಹಾಜರಾಗುವುದಾಗಿ ಕೇಳಿದ್ದಾರೆ, ಇಂದು ಸಿಬಿಐನಿಂದ ವಿಚಾರಣೆಗಾಗಿ ನನಗೆ ನೋಟಿಸ್ ಬಂದಿದೆ, ದೆಹಲಿಯ ಬಜೆಟ್ ಸಿದ್ಧಪಡಿಸುವ ಕಾರಣ ಫೆಬ್ರವರಿ ನಂತರ ಯಾವುದೇ ದಿನ ಸಮಯ ನೀಡುವಂತೆ ಅವರಿಗೆ ಮವಿ ಮಾಡಿದ್ದೇನೆ ಬಜೆಟ್ ತಯಾರಿ ಅಂತಿಮ ಹಂತದಲ್ಲಿದ್ದು, ಫೆಬ್ರವರಿ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಸಿದ ಸುಮಾರು ಮೂರು ತಿಂಗಳ ನಂತರ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಕರೆಯಲಾಗಿದೆ. ಸಿಸೋಡಿಯಾ ಮತ್ತು ಇತರೆ ಶಂಕಿತರ ವಿರುದ್ಧ ತನಿಖೆ ಇನ್ನೂ ನಡೆಯುತ್ತಿರುವುದರಿಂದ ಚಾರ್ಜ್ಶೀಟ್ನಲ್ಲಿ ಆರೋಪಿ ಎಂದು ಹೆಸರಿಸಲಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮತ್ತಷ್ಟು ಓದಿ: Liquor Policy Case: ವಿಚಾರಣೆಗೆ ಹಾಜರಾಗಿ, ಸಿಬಿಐನಿಂದ ಮನೀಶ್ ಸಿಸೋಡಿಯಾಗೆ ನೋಟಿಸ್
ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಆಮ್ ಆದ್ಮಿ ಪಕ್ಷ ನೇತೃತ್ವದ ಸರ್ಕಾರದಲ್ಲಿ ಅಬಕಾರಿ ಇಲಾಖೆಯ ಉಸ್ತುವಾರಿ ಹೊಂದಿದ್ದಾರೆ. ಈ ಹಿಂದೆ ಕಳೆದ ವರ್ಷ ಅಕ್ಟೋಬರ್ 17ರಂದು ಸಿಸೋಡಿಯಾ ಅವರನ್ನು ವಿಚಾರಣೆ ನಡೆಸಲಾಯಿತು.
ಪ್ರಕರಣದಲ್ಲಿ ಅವರ ಮನೆ ಮತ್ತು ಬ್ಯಾಂಕ್ ಲಾಕರ್ಗಳನ್ನು ಶೋಧಿಸಲಾಗಿತ್ತು. ದೆಹಲಿ ಅಬಕಾರಿ ನೀತಿ 2021-22ನ್ನು ರೂಪಿಸುವ ಮತ್ತು ಅನುಷ್ಠಾನಗೊಳಿಸುವ ದೊಡ್ಡ ಪಿತೂರಿ ಮತ್ತು ಪ್ರಕರಣದಲ್ಲಿ ಹಣ ಎಲ್ಲಿಂದ ಬಂತು ಎಂಬುದಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ