liquor Policy Case: ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಜಾಗೊಳಿಸಿದ ದೆಹಲಿ ನ್ಯಾಯಾಲಯ
ಮದ್ಯದ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ವಜಾಗೊಳಿಸಿದೆ.
ದೆಹಲಿ: ಮದ್ಯದ ನೀತಿ ಪ್ರಕರಣಕ್ಕೆ (liquor Policy Case) ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಅವರ (Manish Sisodia) ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ವಜಾಗೊಳಿಸಿದೆ. ವಿಚಾರಣೆಗೆ ಸಂಬಂಧಿಸಿದಂತೆ ತನಿಖೆಯ ಕೊನೆಯ ದಿನದಂದು ನ್ಯಾಯಾಲಯದ ನಿರ್ದೇಶನದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರತಿನಿಧಿಸುವ ವಕೀಲರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಕ್ಷಿಪ್ತ ಲಿಖಿತ ಸಲ್ಲಿಕೆಗಳು ಮತ್ತು ವಿಚಾರಣೆ ವರದಿಗಳನ್ನು ಸಲ್ಲಿಸಿದ ನಂತರ ನ್ಯಾಯಲಯದ ವಿಶೇಷ ನ್ಯಾಯಾಧೀಶ ಎಂ.ಕೆ.ನಾಗ್ಪಾಲ್ ಕಳೆದ ವಾರ ಜಾಮೀನಿನ ಮೇಲಿನ ಆದೇಶವನ್ನು ಕಾಯ್ದಿರಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಡೈರಿ ಮತ್ತು ಹಲವಾರು ಸಾಕ್ಷಿಗಳ ಹೇಳಿಕೆಯನ್ನೂ ಸಿಬಿಐ ಕೋರ್ಟ್ಗೆ ಸಲ್ಲಿಸಿದೆ.
Delhi Special Court dismisses bail plea of Delhi’s former Deputy Chief Minister Manish Sisodia, in CBI case pertaining to alleged irregularities in the framing and implementation of the excise policy of GNCTD.
(File photo) pic.twitter.com/tsbxOYDofN
— ANI (@ANI) March 31, 2023
ಸಿಸೋಡಿಯಾ ಅವರು ತಮ್ಮ ಜಾಮೀನು ಅರ್ಜಿಯಲ್ಲಿ, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ತನಿಖೆಗಳನ್ನು ಈಗಾಗಲೇ ಮಾಡಿರುವುದರಿಂದ ಅವರನ್ನು ಕಸ್ಟಡಿಯಲ್ಲಿಡಲು ಯಾವುದೇ ಕಾರಣವಿಲ್ಲ ಹಾಗೂ ಅವರ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಪುರಾವೆ ಪತ್ತೆಯಾಗದ ಕಾರಣ ಅವರನ್ನು ಈ ಪ್ರಕರಣದಿಂದ ಮುಕ್ತಗೊಳಿಸಬೇಕು ಎಂದು ಈ ಹಿಂದೆ ಹೇಳಿದ್ದಾರೆ. ಪ್ರಕರಣದ ಇತರ ಆರೋಪಿಗಳು ಈಗಾಗಲೇ ಜಾಮೀನು ಪಡೆದಿದ್ದಾರೆ ಎಂದು ಸೂಚಿಸಿದ ಅವರು, ಸಿಬಿಐ ಕರೆದ ಎಲ್ಲ ಸಮಯದಲ್ಲೂ ಅವರಿಗೆ ಸಹಕಾರ ನೀಡಿ, ತನಿಖೆಗೆ ಬಂದಿದ್ದೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: Liquor Policy Case: 8 ಗಂಟೆಗಳ ವಿಚಾರಣೆ ಬಳಿಕ ಮನೀಶ್ ಸಿಸೋಡಿಯಾರನ್ನು ಬಂಧಿಸಿದ್ದು ಏಕೆ, ಸಿಬಿಐ ಹೇಳಿದ್ದಿಷ್ಟು
ಈ ಬಗ್ಗೆ ಪ್ರಶ್ನಿಸಿದ ಸಿಬಿಐ ಅವರಿಗೆ ಜಾಮೀನು ನೀಡಿದರೆ ಇದು ನಮ್ಮ ತನಿಖೆಗೆ ತೊಂದರೆಯಾಗುತ್ತದೆ. ಜೊತೆಗೆ ಈ ಪ್ರಕರಣಕ್ಕೆ ಬೇಕಾಗಿರುವ ಇನ್ನಷ್ಟು ಮಾಹಿತಿ ಸಿಗದೇ ಇರಬಹುದು. ಇದರಲ್ಲಿ ಪ್ರಭಾವಿಗಳ ಹಸ್ತಕ್ಷೇಪವು ಆಗಬಹುದು ಎಂದು ಸಿಬಿಐ ಪರ ವಕೀಲ ಡಿಪಿ ಸಿಂಗ್, ಸಿಸೋಡಿಯಾ ಅವರ ಮನವಿಯನ್ನು ವಿರೋಧಿಸಿದರು. ಸಿಸೋಡಿಯಾ ಅವರು ಫೋನ್‌ಗಳನ್ನು ಅಪ್‌ಗ್ರೇಡ್ ಮಾಡಲು ಬಯಸಿದ್ದರಿಂದ, ಈಗಾಗಲೇ ಅವರು ಅದರಲ್ಲಿರುವ ದಾಖಲೆಗಳನ್ನು ಡಿಲಿಟ್ ಮಾಡುವ ಸಾಧ್ಯತೆಗಳು ಇದೆ ಎಂದು ಹೇಳಿದರು. ಆದರೆ ಇಲ್ಲಿಯವರೆಗೆ ಆ ರೀತಿಯ ಏನೂ ಆಗಲಿಲ್ಲ ಎಂದು ತನಿಖಾ ಸಂಸ್ಥೆ ಹೇಳಿಕೊಂಡಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 4:13 pm, Fri, 31 March 23