AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manish Sisodia: ದೆಹಲಿ ಅಬಕಾರಿ ನೀತಿ ಹಗರಣ, ಮನೀಶ್​ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಲಾಗಿದೆ.

Manish Sisodia: ದೆಹಲಿ ಅಬಕಾರಿ ನೀತಿ ಹಗರಣ, ಮನೀಶ್​ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ
ಮನೀಶ್​ ಸಿಸೋಡಿಯಾ
ನಯನಾ ರಾಜೀವ್
|

Updated on:May 21, 2024 | 11:56 AM

Share

ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ(Manish Sisodia) ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಲಾಗಿದೆ.  ಕೊರೊನಾ ಅವಧಿಯಲ್ಲಿ ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರವು ದೆಹಲಿ ಅಬಕಾರಿ ನೀತಿ 2021-22 ಅನ್ನು ಜಾರಿಗೊಳಿಸಿತ್ತು. ಲೆಫ್ಟಿನೆಂಟ್ ಗವರ್ನರ್ ಅವರು ಸಿಬಿಐ ತನಿಖೆಗೆ ಶಿಫಾರಸು ಮಾಡಿದ ನಂತರ ಈ ಮದ್ಯ ನೀತಿಯ ಅನುಷ್ಠಾನದಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಲಾಗಿದೆ.

ಇದರೊಂದಿಗೆ, ದೆಹಲಿ ಅಬಕಾರಿ ನೀತಿ 2021-22 ಪ್ರಶ್ನಾರ್ಹವಾಗಿದೆ. ಆದರೆ, ಅದರ ರಚನೆ ಮತ್ತು ಅನುಷ್ಠಾನದಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಹೊಸ ಮದ್ಯ ನೀತಿಯನ್ನು ನಂತರ ರದ್ದುಗೊಳಿಸಲಾಯಿತು.

ಹೊಸ ಮದ್ಯ ನೀತಿಯಲ್ಲಿ ನಿಯಮಗಳ ಉಲ್ಲಂಘನೆ ಮತ್ತು ಕಾರ್ಯವಿಧಾನದ ಅಕ್ರಮಗಳ ಆರೋಪದ ಮೇಲೆ 15 ಆರೋಪಿಗಳ ವಿರುದ್ಧ ಸಿಬಿಐ ಆಗಸ್ಟ್ 2022 ರಲ್ಲಿ ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿದೆ. ಸಿಬಿಐ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ನಂತರ PMLA ಅಡಿಯಲ್ಲಿ ಮನಿ ಲಾಂಡರಿಂಗ್ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿತು.

ದೆಹಲಿ ಸರ್ಕಾರದ ಹೊಸ ಮದ್ಯ ನೀತಿಯಲ್ಲಿನ ಹಗರಣದ ಬಗ್ಗೆ ಇಡಿ ಮತ್ತು ಸಿಬಿಐ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿವೆ. ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಅಕ್ರಮ ಹಣ ವರ್ಗಾವಣೆಯ ಆರೋಪಗಳನ್ನು ಇಡಿ ತನಿಖೆ ನಡೆಸುತ್ತಿದೆ.

ಮತ್ತಷ್ಟು ಓದಿ: ಎಎಪಿಯೇ ಅರವಿಂದ್ ಕೇಜ್ರಿವಾಲ್ ಮೇಲೆ ದಾಳಿ ಮಾಡಬಹುದು: ಬಿಜೆಪಿ

ದೆಹಲಿ ಮದ್ಯ ನೀತಿ ಅಕ್ರಮಗಳ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಮತ್ತು ಇಡಿ ಎರಡೂ ಸಂಸ್ಥೆಗಳು ಇದುವರೆಗೆ 15 ಕ್ಕೂ ಹೆಚ್ಚು ಜನರನ್ನು ಬಂಧಿಸಿವೆ. ಆರು ಆರೋಪಪಟ್ಟಿಗಳನ್ನು ಸಿದ್ಧಪಡಿಸಿದೆ.

ಬಂಧಿತರಲ್ಲಿ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್, ವಿಜಯ್ ನಾಯರ್, ಕೆ. ಕವಿತಾ, ಮಾಗುಂಟ ಶ್ರೀನಿವಾಸ್ ರೆಡ್ಡಿ, ರಾಘವ್ ಮಂಗುಟ, ಸಮೀರ್ ಮಹೇಂದ್ರು, ಅರುಣ್ ರಾಮಚಂದ್ರನ್, ರಾಜೇಶ್ ಜೋಶಿ, ಗೋರಂಟ್ಲ ಬುಚ್ಚಿಬಾಬು, ಅಮಿತ್ ಅರೋರಾ, ಗೌತಮ್ ಮಲ್ಹೋತ್ರಾ, ಅರುಣ್ ಪಿಳ್ಳೈ, ಬೆನೋಯ್ ಬಾಬು (ಫ್ರೆಂಚ್ ಲಿಕ್ಕರ್ ಕಂಪನಿ ಪೆರ್ನೋಡ್ ರಿಕಾರ್ಡ್‌ನ ಜನರಲ್ ಮ್ಯಾನೇಜರ್), ಪಿ.ಶರತ್ ಚಂದ್ರ ರೆಡ್ಡಿ, ಅರಬಿಂದೋ ಫಾರ್ಮಾ ಕಂಪನಿಯ ನಿರ್ದೇಶಕ   ಅಮನ್‌ದೀಪ್ ಧಾಲ್ ಮತ್ತು ಉದ್ಯಮಿ ಅಭಿಷೇಕ್ ಬೋಯಿನ್‌ಪಲ್ಲಿ. ಸಂಜಯ್ ಸಿಂಗ್ ಈ ಪೈಕಿ ಹಲವು ಆರೋಪಿಗಳು ಜಾಮೀನು ಪಡೆದಿದ್ದರೆ ಕೆಲವರು ಸರ್ಕಾರಿ ಸಾಕ್ಷಿಗಳೂ ಆಗಿದ್ದಾರೆ. ಮೇ 10 ರಂದು ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ಪಡೆದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:49 am, Tue, 21 May 24

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ