Liquor Policy Case: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಏ.17 ರವರೆಗೆ ವಿಸ್ತರಣೆ

|

Updated on: Apr 03, 2023 | 5:59 PM

ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಏ.17 ರವರೆಗೆ ವಿಸ್ತರಿಸಿದೆ.

ದೆಹಲಿ: ಮದ್ಯ ನೀತಿ ಪ್ರಕರಣಕ್ಕೆ (Liquor Policy Case) ಸಂಬಂಧಿಸಿದಂತೆ ಸಿಬಿಐ ವಿಚಾರಣೆ ಎದುರಿಸುತ್ತಿರುವ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರ ನ್ಯಾಯಾಂಗ ಬಂಧನವನ್ನು ಏ.17 ರವರೆಗೆ ವಿಸ್ತರಿಸಿದೆ ಎಂದು ರೋಸ್ ಅವೆನ್ಯೂ ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ. ಎಎಪಿ ನಾಯಕನ ನ್ಯಾಯಾಂಗ ಬಂಧನವನ್ನು ವಿಸ್ತರಿಸುವಂತೆ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ತನಿಖೆಯು ಕೊನೆಯ ಹಂತದಲ್ಲಿದೆ ಎಂದು ಹೇಳಿದೆ. ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಸೋಡಿಯಾ ಅವರನ್ನು ಸುಮಾರು ಎಂಟು ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಫೆಬ್ರವರಿ 26 ರಂದು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ಬಂಧಿಸಿತ್ತು. ಇಡಿ ಅವರನ್ನು ಮಾರ್ಚ್ 9 ರಂದು ತಿಹಾರ್ ಜೈಲಿನಲ್ಲಿ ಬಂಧಿಸಿತು, 2021-22ರ ದೆಹಲಿ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಸಿಬಿಐ ಅವರನ್ನು ಬಂಧಿಸಲಾಗಿತ್ತು.

ಮನೀಷ್ ಸಿಸೋಡಿಯಾ ಅವರು ಸಿಬಿಐ ಕೇಳಿದ ಪ್ರಶ್ನೆಗಳಿಂದ ನುಣುಚಿಕೊಳ್ಳಲು ಸರಿಯಾದ ಉತ್ತರಗಳನ್ನು ನೀಡಿದ್ದರಿಂದ ಮತ್ತು ವ್ಯತಿರಿಕ್ತ ಸಾಕ್ಷ್ಯಾಧಾರಗಳಿದ್ದರು ಕೂಡ ತನಿಖೆಗೆ ಸಹಕರಿಸದ ಕಾರಣ ಅವರನ್ನು ಬಂಧಿಸಲಾಗಿದೆ ಎಂದು ಸಿಬಿಐ ಹೇಳಿಕೆಯಲ್ಲಿ ತಿಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ನವೆಂಬರ್ 25 ರಂದು ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದ್ದು, ಉದ್ಯಮಿಗಳಾದ ವಿಜಯ್ ನಾಯರ್, ಅಭಿಷೇಕ್ ಬೋನಪಲ್ಲಿ ಮತ್ತು ಇತರ ಐವರನ್ನು ಆರೋಪಿಗಳೆಂದು ಹೆಸರಿಸಿತ್ತು. ಅಬಕಾರಿ ಇಲಾಖೆಯ ಈ ಪ್ರಕರಣದ ಹೊಣೆ ಹೊತ್ತಿರುವ ಸಿಸೋಡಿಯಾ ಅವರನ್ನು ಆರೋಪಪಟ್ಟಿಯಲ್ಲಿ ಆರೋಪಿ ಎಂದು ಹೆಸರಿಸಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: liquor Policy Case: ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಜಾಗೊಳಿಸಿದ ದೆಹಲಿ ನ್ಯಾಯಾಲಯ

ದೆಹಲಿ ಸರ್ಕಾರದ ಅಬಕಾರಿ ನೀತಿಯು ಮದ್ಯದ ವ್ಯಾಪಾರಿಗಳಿಗೆ ಪರವಾನಗಿ ನೀಡಲು ಅಕ್ರಮವಾಗಿ ಹಣ ಸಂಗ್ರಹಣೆ ಮಾಡಿದ್ದಾರೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ, ಅದಕ್ಕಾಗಿ ಲಂಚ ನೀಡಿದ ಆರೋಪದ ಕೆಲವು ವಿತರಕರನ್ನು ಕೂಡ ಬಂಧಿಸಿದೆ.

Published On - 2:47 pm, Mon, 3 April 23