ಮದ್ಯ ನೀತಿ ಹಗರಣ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನದ ಅವಧಿ ಜೂನ್ 2 ರವರೆಗೆ ವಿಸ್ತರಣೆ
ಜಾರಿ ನಿರ್ದೇಶನಾಲಯ (ಇ.ಡಿ) ತನಿಖೆ ನಡೆಸುತ್ತಿರುವ ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಜೂನ್ 2ರವರೆಗೆ ವಿಸ್ತರಿಸಿದೆ.
ಜಾರಿ ನಿರ್ದೇಶನಾಲಯ (ಇ.ಡಿ) ತನಿಖೆ ನಡೆಸುತ್ತಿರುವ ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕ ಮನೀಶ್ ಸಿಸೋಡಿಯಾ(Manish Sisodia) ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಜೂನ್ 2ರವರೆಗೆ ವಿಸ್ತರಿಸಿದೆ. ಫೆಬ್ರುವರಿ 26 ರಂದು ಎಎಪಿ ನಾಯಕನನ್ನು ಸಿಬಿಐ ಬಂಧಿಸಿದ ನಂತರ, ಇ.ಡಿ ಕೂಡ ಅದೇ ಪ್ರಕರಣದಲ್ಲಿ ಮಾರ್ಚ್ 9 ರಂದು ಅವರನ್ನು ಬಂಧಿಸಿತು. ಒಂದು ವರ್ಷದ ಅವಧಿಯಲ್ಲಿ 14 ಫೋನ್‌ಗಳನ್ನು ನಾಶಪಡಿಸಲಾಗಿದೆ ಮತ್ತು ಬದಲಾಯಿಸಲಾಗಿದೆ ಮತ್ತು ಸಿಸೋಡಿಯಾ ಮೊದಲಿನಿಂದಲೂ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ತನಿಖಾ ಸಂಸ್ಥೆ ಈ ಹಿಂದೆ ಹೇಳಿಕೊಂಡಿತ್ತು.
ಅಬಕಾರಿ ನೀತಿ ಪ್ರಕರಣ (Excise Policy Case) ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ವಜಾಗೊಳಿಸಿತ್ತು. ದೆಹಲಿ ಮದ್ಯದ ಅಬಕಾರಿ ನೀತಿ 2021-22ಕ್ಕೆ ಇಡಿ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಸಲ್ಲಿಸಿದ ಜಾಮೀನು ಅರ್ಜಿಯನ್ನು ದೆಹಲಿ ರೂಸ್ ಅವೆನ್ಯೂ ಕೋರ್ಟ್ ವಜಾಗೊಳಿಸಿದೆ.
ಮತ್ತಷ್ಟು ಓದಿ: Delhi liquor policy scam: ದೆಹಲಿ ಅಬಕಾರಿ ನೀತಿ ಹಗರಣ: ಮೊದಲ ಬಾರಿ ಸಿಬಿಐ ಆರೋಪಪಟ್ಟಿಯಲ್ಲಿ ಮನೀಶ್ ಸಿಸೋಡಿಯಾ ಹೆಸರು
ಮದ್ಯದ ನೀತಿ ಪ್ರಕರಣವನ್ನು ತಿರುಚಿದ್ದು ಎಂ ಕೇಜ್ರಿವಾಲ್, ಕೇಂದ್ರವು ಎಎಪಿ ರಾಷ್ಟ್ರೀಯ ಪಕ್ಷವಾಗಿರುವುದರಿಂದ ಅದನ್ನು ಗುರಿಯಾಗಿಸುತ್ತಿದೆ ಎಂದಿದ್ದಾರೆ. ನಮ್ಮ ಹಾಗೂ ನಮ್ಮ ಒಳ್ಳೆಯ, ಅಭಿವೃದ್ಧಿ ಕೆಲಸಗಳಿಗೆ ಹಾನಿ ಮಾಡಲು ಇಷ್ಟೆಲ್ಲ ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಸಿಸೋಡಿಯಾ ಆರೋಪವನ್ನು ನಿರಾಕರಿಸಿದ್ದು ತಮ್ಮ ವಿರುದ್ಧ ಕೇಂದ್ರೀಯ ಏಜೆನ್ಸಿ ಬಳಿ ಯಾವುದೇ ಪುರಾವೆಗಳಿಲ್ಲ ಎಂದು ತಮ್ಮ ಜಾಮೀನು ಅರ್ಜಿಯಲ್ಲಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:53 am, Fri, 12 May 23