ಅರವಿಂದ್ ಕೇಜ್ರಿವಾಲ್​ರನ್ನು ಸಿಎಂ ಹುದ್ದೆಯಿಂದ ವಜಾಗೊಳಿಸುವಂತೆ ಕೋರಿ ಸುಪ್ರೀಂಗೆ ಸಲ್ಲಿಸಲಾಗಿದ್ದ ಅರ್ಜಿ ತಿರಸ್ಕೃತ

ಅರವಿಂದ್​ ಕೇಜ್ರಿವಾಲ್(Arvind Kejriwal)​ರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ತಿರಸ್ಕರಿಸಿದೆ. ದೆಹಲಿ ಮದ್ಯನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್​ರನ್ನು ಬಂಧಿಸಿರುವ ಕಾರಣ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಲು ಅರ್ಹರಲ್ಲ ಅವರನ್ನು ಸಿಎಂ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿತ್ತು.

ಅರವಿಂದ್ ಕೇಜ್ರಿವಾಲ್ Image Credit source: India Today
Follow us
ನಯನಾ ರಾಜೀವ್
|

Updated on:May 13, 2024 | 12:12 PM

ಅರವಿಂದ್​ ಕೇಜ್ರಿವಾಲ್(Arvind Kejriwal)​ರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ತಿರಸ್ಕರಿಸಿದೆ. ದೆಹಲಿ ಮದ್ಯನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್​ರನ್ನು ಬಂಧಿಸಿರುವ ಕಾರಣ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಲು ಅರ್ಹರಲ್ಲ ಅವರನ್ನು ಸಿಎಂ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿತ್ತು.

ಸಿಎಂ ಸ್ಥಾನದಿಂದ ಕೆಳಗಿಳಿಯುವಂತೆ ಕೇಜ್ರಿವಾಲ್ ಅವರನ್ನು ಕೇಳುವ ಯಾವುದೇ ಕಾನೂನು ಹಕ್ಕಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅರ್ಜಿದಾರರಾದ ಎಎಪಿ ಮಾಜಿ ಶಾಸಕ ಸಂದೀಪ್ ಕುಮಾರ್ ಅವರಿಗೆ ಛೀಮಾರಿ ಹಾಕಿದ್ದ ದೆಹಲಿ ಹೈಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿತ್ತು. ಅಲ್ಲದೆ, ನ್ಯಾಯಾಲಯವು ಅರ್ಜಿದಾರರಿಗೆ 50 ಸಾವಿರ ರೂಪಾಯಿ ದಂಡವನ್ನೂ ವಿಧಿಸಿತ್ತು. ನ್ಯಾಯಾಂಗ ವ್ಯವಸ್ಥೆಯನ್ನು ಗೇಲಿ ಮಾಡಬೇಡಿ ಎಂದು ಕಟ್ಟುನಿಟ್ಟಿನ ಧ್ವನಿಯಲ್ಲಿ ನ್ಯಾಯಾಲಯ ಎಚ್ಚರಿಕೆ ನೀಡಿತ್ತು.

ಯಾವುದೇ ಮುಖ್ಯಮಂತ್ರಿಯನ್ನು ಪದಚ್ಯುತಗೊಳಿಸಲು ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ಯಾವುದೇ ಅವಕಾಶವಿದೆಯೇ ಎಂದು ದೆಹಲಿ ಹೈಕೋರ್ಟ್ ಅರ್ಜಿದಾರರನ್ನು ಕೇಳಿತ್ತು. ಅರ್ಜಿ ಸಲ್ಲಿಸುವ ಮೂಲಕ ನ್ಯಾಯಾಲಯದ ಸಮಯವನ್ನು ಹಾಳು ಮಾಡುತ್ತಿದ್ದೀರಿ ಎಂದು ಪೀಠ ಹೇಳಿತ್ತು. ನಾವು ನಿಮಗೆ ಭಾರೀ ದಂಡವನ್ನು ವಿಧಿಸುತ್ತಿದ್ದೇವೆ.

ಮತ್ತಷ್ಟು ಓದಿ: ಉಚಿತ ವಿದ್ಯುತ್, ಆರೋಗ್ಯ, ಶಿಕ್ಷಣ; ಆಮ್ ಆದ್ಮಿ ಪಕ್ಷದ 10 ಗ್ಯಾರಂಟಿಗಳಿವು

ನ್ಯಾಯಾಲಯದ ಒಳಗೆ ರಾಜಕೀಯ ಭಾಷಣ ಮಾಡಬೇಡಿ, ಭಾಷಣ ಮಾಡಲು ಬೀದಿಯ ಯಾವುದೋ ಮೂಲೆಗೆ ಹೋಗಿ ಎಂದು ಖಾರವಾಗಿ ನುಡಿದಿತ್ತು.

ನಿಮ್ಮ ಅರ್ಜಿದಾರರು ರಾಜಕೀಯ ವ್ಯಕ್ತಿಗಳಾಗಿರುತ್ತಾರೆ, ಆದರೆ ನ್ಯಾಯಾಲಯವು ರಾಜಕೀಯ ಮಹತ್ವಾಕಾಂಕ್ಷೆಗಳ ಆಧಾರದ ಮೇಲೆ ಕಾರ್ಯನಿರ್ವಹಿಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:07 pm, Mon, 13 May 24

ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ

ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ

ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ

ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ

ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ

ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್

ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ

‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ

ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್

ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ