Arvind Kejriwal: ತಿಹಾರ್ ಜೈಲಿಗೆ ಅರವಿಂದ್ ಕೇಜ್ರಿವಾಲ್

ಆಪಾದಿತ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ರೂಸ್ ಅವೆನ್ಯೂ ಕೋರ್ಟ್ ಇಂದು ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ ನಂತರ ಅವರನ್ನು ತಿಹಾರ್ ಜೈಲಿಗೆ ಕರೆದೊಯ್ಯಲಾಗಿದೆ.ಏತನ್ಮಧ್ಯೆ, ಲೋಕಸಭಾ ಚುನಾವಣೆಯ ಸಮಯದಲ್ಲಿ ಅವರನ್ನು ಜೈಲಿಗೆ ಹಾಕುವುದೇ ಬಿಜೆಪಿಯ ಉದ್ದೇಶ ಎಂದು ಅವರ ಪತ್ನಿ ಸುನೀತಾ ಕೇಜ್ರಿವಾಲ್ ಆರೋಪಿಸಿದ್ದಾರೆ.

Arvind Kejriwal: ತಿಹಾರ್ ಜೈಲಿಗೆ ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Follow us
ರಶ್ಮಿ ಕಲ್ಲಕಟ್ಟ
|

Updated on:Apr 01, 2024 | 5:45 PM

ದೆಹಲಿ ಏಪ್ರಿಲ್ 01: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಇಂದು (ಸೋಮವಾರ) ರೂಸ್ ಅವೆನ್ಯೂ ಕೋರ್ಟ್ ಬಂಧನದ ಅವಧಿ ವಿಸ್ತರಿಸಿದ ನಂತರ, ಅವರನ್ನು ತಿಹಾರ್ ಜೈಲಿಗೆ (Tihar Jail) ಕರೆದೊಯ್ಯಲಾಗಿದೆ. ಆಪಾದಿತ ಮದ್ಯ ನೀತಿ ಹಗರಣಕ್ಕೆ (Liquor policy scam) ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಸೋಮವಾರ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಏತನ್ಮಧ್ಯೆ, ಲೋಕಸಭಾ ಚುನಾವಣೆಯ ಸಮಯದಲ್ಲಿ ಅವರನ್ನು ಜೈಲಿಗೆ ಹಾಕುವುದೇ ಬಿಜೆಪಿಯ ಉದ್ದೇಶ ಎಂದು ಅವರ ಪತ್ನಿ ಸುನೀತಾ ಕೇಜ್ರಿವಾಲ್ ಆರೋಪಿಸಿದ್ದಾರೆ. ಜಾರಿ ನಿರ್ದೇಶನಾಲಯ (ಇಡಿ) ಕೇಜ್ರಿವಾಲ್ ಅವರು ತನಿಖೆಗೆ ಸಹಕರಿಸುತ್ತಿಲ್ಲ ಎಂದು ಹೇಳಿ ಹದಿನೈದು ದಿನಗಳ ನ್ಯಾಯಾಂಗ ಬಂಧನಕ್ಕೆ ಕೇಳಿತ್ತು. ಕೇಜ್ರಿವಾಲ್ ಜೈಲಿನಿಂದ ದೆಹಲಿ ಆಡಳಿತ ನಡೆಸುತ್ತಿದ್ದು, ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರ ಆದೇಶಗಳನ್ನು ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ರವಾನಿಸಿದ್ದಾರೆ.

ಅಬಕಾರಿ ನೀತಿ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿಗೆ ಕರೆತರಲಾಯಿತು. ಅವರನ್ನು ಜೈಲು ಸಂಖ್ಯೆ 2 ರಲ್ಲಿ ಇರಿಸಲಾಗುವುದು. ವೈದ್ಯಕೀಯ ಪರೀಕ್ಷೆಗಾಗಿ ಅವರನ್ನು ಕರೆದೊಯ್ಯಲಾಯಿತು. ಅವರನ್ನು ಪ್ರತ್ಯೇಕ ಸೆಲ್‌ನಲ್ಲಿ ಇರಿಸಲಾಗುವುದು” ಎಂದು ಜೈಲಿನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೇಜ್ರಿವಾಲ್​​ನ್ನು ಜೈಲಿಗೆ ಕರೆತರುತ್ತಿರುವುದು

ಇದೇ ಪ್ರಕರಣದಲ್ಲಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬಂಧಿತರಾಗಿದ್ದ ಎಎಪಿ ನಾಯಕ ಸಂಜಯ್ ಸಿಂಗ್ ಅವರನ್ನು ಈ ಹಿಂದೆ ಜೈಲು ಸಂಖ್ಯೆ 2 ರಲ್ಲಿ ಇರಿಸಲಾಗಿತ್ತು. ಆದರೆ ಇತ್ತೀಚೆಗೆ ಜೈಲು ಸಂಖ್ಯೆ 5 ಕ್ಕೆ ಸ್ಥಳಾಂತರಿಸಲಾಯಿತು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ  ಕೇಜ್ರಿವಾಲ್ ಅವರ ಮಾಜಿ ಡೆಪ್ಯೂಟಿ ಮನೀಶ್ ಸಿಸೋಡಿಯಾ ಅವರನ್ನು ಜೈಲು ಸಂಖ್ಯೆ 1 ರಲ್ಲಿ ಇರಿಸಲಾಗಿದ್ದು, ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರು ಮಹಿಳಾ ಜೈಲಿನ ಜೈಲು ಸಂಖ್ಯೆ 6 ರಲ್ಲಿದ್ದಾರೆ.

ಹಿಂದಿನ ದಿನ, ಕೇಜ್ರಿವಾಲ್ ಅವರ ಜಾರಿ ನಿರ್ದೇಶನಾಲಯದ ಕಸ್ಟಡಿ ಅಂತ್ಯಗೊಂಡ ನಂತರ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರ ಮುಂದೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಇಡಿ ಕೇಜ್ರಿವಾಲ್ ಅವರನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಕೋರಿದ್ದು, ಅವರು “ತನಿಖೆಗೆ ಸಹಕರಿಸುವುದಿಲ್ಲ” ಎಂದು ಹೇಳಿದ ನಂತರ ಬಂಧನ ಅವಧಿ ವಿಸ್ತರಿಸಲಾಗಿತ್ತು.

ತಿಹಾರ್ ಜೈಲಿನಲ್ಲಿ ಹೇಗಿರಲಿದೆ ಕೇಜ್ರಿವಾಲ್ ದಿನಚರಿ?

ತಿಹಾರ್ ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್ ಅವರ ದಿನಚರಿ ಅಂದರೆ  ಇತರ ಕೈದಿಗಳಂತೆ, ಕೇಜ್ರಿವಾಲ್ ಬೆಳಿಗ್ಗೆ 6:30 ರ ಸುಮಾರಿಗೆ  ಏಳುತ್ತಾರೆ. ನಂತರ ಕೈದಿಗಳಿಗೆ ಬೆಳಿಗ್ಗೆ 6:40 ರ ಸುಮಾರಿಗೆ ಉಪಹಾರವಾಗಿ ಚಹಾ ಮತ್ತು ಬ್ರೆಡ್  ನೀಡಲಾಗುತ್ತದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬೆಳಗಿನ ಸ್ನಾನ ನಂತರ ಇಡಿ ಕಸ್ಟಡಿಯಿಂದ ದೆಹಲಿ ಸರ್ಕಾರವನ್ನು ನಡೆಸುತ್ತಿರುವ ಕೇಜ್ರಿವಾಲ್ ಅವರು ವಿಚಾರಣೆಯನ್ನು ಹೊಂದಿದ್ದರೆ ಅಥವಾ ಅವರ ವಕೀಲರನ್ನು ಭೇಟಿ ಮಾಡಲು ನಿರ್ಧರಿಸಿದರೆ ನ್ಯಾಯಾಲಯಕ್ಕೆ ಹೋಗುತ್ತಾರೆ.

ಮಧ್ಯಾಹ್ನ 11 ಗಂಟೆಗೆ ಭೋಜನ  ದಾಲ್(ಸಾರು), ಸಬ್ಜಿ (ಪಲ್ಯ), ರೊಟ್ಟಿ ಮತ್ತು ಅನ್ನವನ್ನು ಒಳಗೊಂಡಿರುತ್ತದೆ ಎಂದು ಎನ್​​ಡಿಟಿವಿ ವರದಿ ಮಾಡಿದೆ. ನಂತರ, ಕೈದಿಗಳು ತಮ್ಮ ಸೆಲ್‌ಗಳಲ್ಲಿ ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಇರಬೇಕಾಗುತ್ತದೆ.

ಇತರ ಕೈದಿಗಳಂತೆಯೇ ಎಎಪಿ ಸಂಚಾಲಕರಿಗೂ ಮಧ್ಯಾಹ್ನ 3:30 ಕ್ಕೆ ಚಹಾ ಮತ್ತು ಬಿಸ್ಕತ್ತುಗಳನ್ನು ನೀಡಲಾಗುತ್ತದೆ. ಸಂಜೆ 4 ಗಂಟೆಗೆ ವಕೀಲರೊಂದಿಗೆ ಸಭೆ ನಡೆಸಬಹುದು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಂತರ ಊಟ ನೀಡಿ 7 ಗಂಟೆಯ ಸುಮಾರಿಗೆ ಕೈದಿಗಳನ್ನು ಅವರ ಸೆಲ್​​ನೊಳಗೆ ಲಾಕ್ ಮಾಡಲಾಗುತ್ತದೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಜೈಲಿನ ಊಟ ತಯಾರಿ ಅಥವಾ ಯಾವುದೇ ಚಟುವಟಿಕೆಗಳನ್ನು ನಿಗದಿಪಡಿಸದಿದ್ದಾಗ ಕೈದಿಗಳು ಬೆಳಿಗ್ಗೆ 5 ರಿಂದ ರಾತ್ರಿ 11 ರವರೆಗೆ ಟಿವಿ ವೀಕ್ಷಿಸಬಹುದು. ಸುದ್ದಿ, ಕ್ರೀಡೆ ಮತ್ತು ಮನರಂಜನೆಯ ಕೆಲವು ಚಾನೆಲ್‌ಗಳು ಮಾತ್ರ ಲಭ್ಯವಿದೆ ಎಂದು ಎನ್​​ಡಿಟಿವಿಹೇಳಿದೆ.

ತುರ್ತು ಸಂದರ್ಭಗಳಲ್ಲಿ ವೈದ್ಯಕೀಯ ಸಿಬ್ಬಂದಿ ದಿನದ 24 ಗಂಟೆ ಲಭ್ಯವಿರುತ್ತಾರೆ. ಮಧುಮೇಹಿಯಾಗಿರುವ ಕೇಜ್ರಿವಾಲ್ ಅವರು ಜೈಲಿನಲ್ಲಿರುವ ಸಮಯದಲ್ಲಿ ನಿಯಮಿತವಾಗಿ ತಪಾಸಣೆಗೆ ಒಳಗಾಗುತ್ತಾರೆ. ಕೇಜ್ರಿವಾಲ್ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರ ವಕೀಲರು ಆಹಾರದ ನಿರ್ಬಂಧಗಳಿಗೆ ಒತ್ತಾಯಿಸಿದ್ದಾರೆ. ದೆಹಲಿ ಸಿಎಂ ವಾರಕ್ಕೆ ಎರಡು ಬಾರಿ ತಮ್ಮ ಕುಟುಂಬವನ್ನು ಭೇಟಿ ಮಾಡಬಹುದು. ಪೂರ್ವ ಅನುಮೋದಿತ ಪಟ್ಟಿಯಲ್ಲಿರುವ ಸದಸ್ಯರನ್ನು ಮಾತ್ರ ಭೇಟಿ ಮಾಡಬಹುದು ಎಂದು ಎನ್‌ಡಿಟಿವಿ ಹೇಳಿದೆ.

ಪತ್ರಕರ್ತೆ ನೀರ್ಜಾ ಚೌಧರಿ ಅವರ ‘ಹೌ ಪ್ರೈಮ್ ಮಿನಿಸ್ಟರ್ಸ್ ಡಿಸೈಡ್’ ಪುಸ್ತಕದ ಜೊತೆಗೆ ಹಿಂದೂ ಪುರಾಣ ಗ್ರಂಥಗಳಾದ ಭಗವದ್ಗೀತೆ ಮತ್ತು ರಾಮಾಯಣಬೇಕು ಎಂದು ಸಿಎಂಗೆ ಕೇಜ್ರಿವಾಲ್ ಪರ ವಕೀಲರು ಸೋಮವಾರ ಅನುಮತಿ ಕೋರಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:21 pm, Mon, 1 April 24

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು