Liquor Policy Scam: ಮನೀಶ್ ಸಿಸೋಡಿಯಾಗೆ ಜಾಮೀನು ನಿರಾಕರಿಸಿದ ದೆಹಲಿ ಕೋರ್ಟ್​

|

Updated on: May 30, 2023 | 11:21 AM

ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಪ್ರಕರಣದಲ್ಲಿ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ದೆಹಲಿ ಹೈಕೋರ್ಟ್ ಇಂದು ಜಾಮೀನು ನಿರಾಕರಿಸಿದೆ.

Liquor Policy Scam: ಮನೀಶ್ ಸಿಸೋಡಿಯಾಗೆ ಜಾಮೀನು ನಿರಾಕರಿಸಿದ ದೆಹಲಿ ಕೋರ್ಟ್​
ಮನೀಶ್ ಸಿಸೋಡಿಯಾ
Follow us on

ದೆಹಲಿ: ರಾಷ್ಟ್ರ ರಾಜಧಾನಿಯ ಮದ್ಯ ನೀತಿ ಹಗರಣಕ್ಕೆ (Liquor Policy Scam) ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಪ್ರಕರಣದಲ್ಲಿ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರಿಗೆ ದೆಹಲಿ ಹೈಕೋರ್ಟ್ ಇಂದು ಜಾಮೀನು ನಿರಾಕರಿಸಿದೆ. ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರಿದ್ದ ಏಕಸದಸ್ಯ ಪೀಠ ಇಂದು (ಮೇ30) ತೀರ್ಪು ಪ್ರಕಟಿಸಿದೆ. ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯ, ಮನೀಶ್ ಸಿಸೋಡಿಯಾ ವಿರುದ್ಧದ ಆರೋಪಗಳು ಗಂಭೀರವಾಗಿವೆ ಎಂದು ಹೇಳಿದೆ.

ಸಿಬಿಐ ಸಲ್ಲಿಸಿದ ಪೂರಕ ಆರೋಪ ಪಟ್ಟಿಯನ್ನು ಪರಿಗಣಿಸಿದ ದೆಹಲಿಯ ರೂಸ್ ಅವೆನ್ಯೂ ಕೋರ್ಟ್, ಈ ಹಿಂದೆ ಆಮ್ ಆದ್ಮಿ ಪಕ್ಷದ ನಾಯಕನ ನ್ಯಾಯಾಂಗ ಬಂಧನವನ್ನು ಜೂನ್ 1 ರವರೆಗೆ ವಿಸ್ತರಿಸಿದೆ ಮತ್ತು ಅವರಿಗೆ ಕುರ್ಚಿ ಮತ್ತು ಮೇಜು ಒದಗಿಸುವಂತೆ ಅವರ ಮನವಿಯನ್ನು ಪರಿಗಣಿಸುವಂತೆ ಜೈಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಇದನ್ನೂ ಓದಿ: Delhi liquor policy scam: ದೆಹಲಿ ಅಬಕಾರಿ ನೀತಿ ಹಗರಣ: ಮೊದಲ ಬಾರಿ ಸಿಬಿಐ ಆರೋಪಪಟ್ಟಿಯಲ್ಲಿ ಮನೀಶ್ ಸಿಸೋಡಿಯಾ ಹೆಸರು

ಮನೀಶ್ ಸಿಸೋಡಿಯಾ ಅವರು ದೆಹಲಿಯಲ್ಲಿ ಮದ್ಯದ ವ್ಯಾಪಾರದ ಏಕಸ್ವಾಮ್ಯ ಮತ್ತು ಕಾರ್ಟೆಲೈಸೇಶನ್​​​ನ್ನು ಸುಲಭಗೊಳಿಸುವ ರೀತಿಯಲ್ಲಿ ಅಬಕಾರಿ ನೀತಿಯನ್ನು ರೂಪಿಸಿದರು ಮತ್ತು ಜಾರಿಗೆ ತಂದರು ಎಂದು ಆರೋಪಿಸಲಾಗಿದೆ. ಈ ಪ್ರಕರಣದಲ್ಲಿ ಫೆಬ್ರವರಿ 26 ರಂದು ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿತ್ತು.

Published On - 11:20 am, Tue, 30 May 23