AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಂತರ ಜಾಮೀನು ಅವಧಿ ವಿಸ್ತರಿಸುವಂತೆ ಕೋರಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಅರವಿಂದ್ ಕೇಜ್ರಿವಾಲ್

Delhi Liquor Scam: ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿ ಇದೀಗ ಮದ್ಯಂತರ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ಅರವಿಂದ್ ಕೇಜ್ರಿವಾಲ್, ತಮ್ಮ ಮಧ್ಯಂತರ ಜಾಮೀನು ಅವಧಿಯನ್ನು 7 ದಿನಗಳವರೆಗೆ ವಿಸ್ತರಿಸುವಂತೆ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಮಧ್ಯಂತರ ಜಾಮೀನು ಅವಧಿ ವಿಸ್ತರಿಸುವಂತೆ ಕೋರಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
ನಯನಾ ರಾಜೀವ್
|

Updated on:May 27, 2024 | 9:48 AM

Share

ಮಧ್ಯಂತರ ಜಾಮೀನು ಅವಧಿ 7 ದಿನಗಳವರೆಗೆ ವಿಸ್ತರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ಸುಪ್ರೀಂಕೋರ್ಟ್​ಗೆ ಮನವಿ ಮಾಡಿದ್ದಾರೆ. ಅಬಕಾರಿ ನೀತಿ ಹಗರಣದಲ್ಲಿ ಪ್ರಮುಖ ಕಿಂಗ್​ಪಿನ್​ ಎನ್ನುವ ಆರೋಪ ಹೊತ್ತಿರುವ ಅರವಿಂದ್ ಕೇಜ್ರಿವಾಲ್​ಗೆ ಇತ್ತೀಚೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿತ್ತು.

ತಮಗೆ ಗಂಭೀರ ಸ್ವರೂಪದ ಕಾಯಿಲೆ ಇದ್ದು, ಪಿಇಟಿ ಹಾಗೂ ಸಿಟಿ ಸ್ಕ್ಯಾನ್​ ಮಾಡಬೇಕಾಗಿರುವ ಹಿನ್ನೆಲೆಯಲ್ಲಿ 7 ದಿನಗಳ ಕಾಲ ಜಾಮೀನು ವಿಸ್ತರಿಸುವಂತೆ ಕೇಳಿದ್ದಾರೆ. ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದೆ. ಅವರು ಜೂನ್ 2 ರಂದು ಮತ್ತೆ ತಿಹಾರ್ ಜೈಲಿಗೆ ಹೋಗಬೇಕಾಗಿದೆ.

ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯ ಕೊನೆಯ ಹಂತದ ಮತದಾನದ ಒಂದು ದಿನದ ನಂತರ ಜೂನ್ 2 ರಂದು ದೆಹಲಿ ಸಿಎಂ ತಿಹಾರ್ ಜೈಲಿನಲ್ಲಿ ಶರಣಾಗಬೇಕಾಗುತ್ತದೆ.

ಮತ್ತಷ್ಟು ಓದಿ: ನಿಮ್ಮ ದ್ವೇಷ ನನ್ನೊಂದಿಗೆ, ನನ್ನ ಹೆತ್ತವರನ್ನು ಬಿಟ್ಟುಬಿಡಿ; ಪ್ರಧಾನಿ ಮೋದಿಗೆ ಅರವಿಂದ್ ಕೇಜ್ರಿವಾಲ್ ಸಂದೇಶ

ಕೇಜ್ರಿವಾಲ್ ಮಧ್ಯಂತರ ಜಾಮೀನಿನ ಬಗ್ಗೆ ಸುಪ್ರೀಂಕೋರ್ಟ್​ ಹೇಳಿದ್ದೇನು? ಕೇಜ್ರಿವಾಲ್​ಗೆ ಮಧ್ಯಂತರ ಜಾಮೀನು ನೀಡುವ ಸಂದರ್ಭದಲ್ಲಿ ಸುಪ್ರೀಂಕೋರ್ಟ್​, ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಈ ನಿರ್ಧಾರ ಸೂಕ್ತ, ಅವರಿಗೆ ಯಾವುದೇ ಅಪರಾಧ ಇತಿಹಾಸವಿಲ್ಲ. ಅವರು ಸಮಾಜಕ್ಕೆ ಬೆದರಿಕೆಯಲ್ಲ, ಅವರ ವಿರುದ್ಧ ಗಂಭೀರ ಆರೋಪಗಳಿವೆ ಆದರೆ ಅದ್ಯಾವುದರಲ್ಲೂ ಸಾಬೀತಾಗಿ ಶಿಕ್ಷೆಯಾಗಿಲ್ಲ ಎಂದು ಹೇಳಿತ್ತು. ಅಷ್ಟೇ ಅಲ್ಲದೆ ಯಾವುದೇ ಸಾಕ್ಷಿ ಜತೆ ಮಾತನಾಡದಂತೆ ಸೂಚಿಸಿತ್ತು.

ಮೇ 17 ರಂದು, ಜಾರಿ ನಿರ್ದೇಶನಾಲಯವು (ಇಡಿ) ಕೇಜ್ರಿವಾಲ್ ಅವರ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿತ್ತು. ಈ ವೇಳೆ ಸಾಮಾನ್ಯ ಜಾಮೀನಿಗಾಗಿ ಕೆಳ ನ್ಯಾಯಾಲಯವನ್ನು ಸಂಪರ್ಕಿಸಲು ನ್ಯಾಯಾಲಯ ಅವರಿಗೆ ಅನುಮತಿ ನೀಡಿತ್ತು.

ಕೇಜ್ರಿವಾಲ್ ಅಲ್ಲದೆ, ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ತನಿಖಾ ಸಂಸ್ಥೆ ಮನೀಶ್ ಸಿಸೋಡಿಯಾ ಅವರನ್ನು ಕೂಡ ಬಂಧಿಸಿದೆ. ಅವರು ಈಗ ಜೈಲಿನಲ್ಲಿದ್ದಾರೆ. ಈ ಪ್ರಕರಣದಲ್ಲಿ ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರನ್ನೂ ಬಂಧಿಸಲಾಗಿತ್ತು. ಆದರೆ, ಅವರು ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:45 am, Mon, 27 May 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​