Liquor scam Case: ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಸಮನ್ಸ್​ ಕುರಿತು ಸಿಬಿಐಗೆ ಪತ್ರ ಬರೆದ ಕವಿತಾ

ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಟಿಆರ್‌ಎಸ್ ಶಾಸಕಿ ಕೆ ಕವಿತಾ ಸೋಮವಾರ ಸಿಬಿಐಗೆ ಪತ್ರ ಬರೆದಿದ್ದು, ಎಫ್‌ಐಆರ್‌ನಲ್ಲಿ ತಮ್ಮ ಹೆಸರು ಇಲ್ಲ ಎಂದು ಹೇಳಿದ್ದಾರೆ. ಡಿಸೆಂಬರ್ 6 ರಂದು ಶಾಸಕಿ ಕೆ ಕವಿತಾ ಲಭ್ಯವಿಲ್ಲ ಎಂದು ತನಿಖಾ ಸಂಸ್ಥೆಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ತಾವು ಲಭ್ಯ ಇರುವ ದಿನಾಂಕವನ್ನು ತಿಳಿಸಿದ್ದಾರೆ.

Liquor scam Case: ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಸಮನ್ಸ್​ ಕುರಿತು ಸಿಬಿಐಗೆ ಪತ್ರ ಬರೆದ ಕವಿತಾ
Liquor scam case Kavita
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Dec 05, 2022 | 10:58 AM

ದೆಹಲಿ: ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಟಿಆರ್‌ಎಸ್ ಶಾಸಕಿ ಕೆ ಕವಿತಾ ಸೋಮವಾರ ಸಿಬಿಐಗೆ ಪತ್ರ ಬರೆದಿದ್ದು, ಎಫ್‌ಐಆರ್‌ನಲ್ಲಿ ತಮ್ಮ ಹೆಸರು ಇಲ್ಲ ಎಂದು ಹೇಳಿದ್ದಾರೆ. ಡಿಸೆಂಬರ್ 6 ರಂದು ಶಾಸಕಿ ಕೆ ಕವಿತಾ ಲಭ್ಯವಿಲ್ಲ ಎಂದು ತನಿಖಾ ಸಂಸ್ಥೆಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ತಾವು ಲಭ್ಯ ಇರುವ ದಿನಾಂಕವನ್ನು ತಿಳಿಸಿದ್ದಾರೆ. ನಾನು ಕಾನೂನು ಪಾಲಿಸುವ ವ್ಯಕ್ತಿ ಮತ್ತು ತನಿಖೆಗೆ ಸಹಕರಿಸುತ್ತೇನೆ. ತನಿಖೆಗೆ ಸಹಕರಿಸಲು ನಾನು ತಿಳಿಸಿದ ದಿನಾಂಕದಂದು ನಿಮ್ಮನ್ನು ಭೇಟಿಯಾಗುತ್ತೇನೆ ಎಂದು ತನಿಖೆ ಸಂಸ್ಥೆಗೆ ತಿಳಿಸಿದ್ದಾರೆ. ಈ ವಿಚಾರಗಳು ಕಾನೂನಿನಡಿಯಲ್ಲಿ ಬರುವಂತಹದ್ದು, ನನ್ನ ಕಾನೂನು ಹಕ್ಕುಗಳಿಗೆ ಯಾವುದೇ ಧಕ್ಕೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಭೆಗೆ ಡಿಸೆಂಬರ್ 11, 12, 14, 15ರ ಪರ್ಯಾಯ ದಿನಾಂಕಗಳನ್ನು ತಿಳಿಸಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಎಂಎಲ್ ಸಿ ಕವಿತಾ ಅವರನ್ನು ಮದ್ಯದ ಪ್ರಕರಣದಲ್ಲಿ ಸಾಕ್ಷಿಯಾಗಿ ಸಿಬಿಐ ಮಂಗಳವಾರ ಸಮನ್ಸ್ ಜಾರಿ ಮಾಡಿದೆ. ಸಮನ್ಸ್ ಸ್ವೀಕರಿಸಿದ ಕೂಡಲೇ ಕವಿತಾ ಸಿಬಿಐಗೆ ಪತ್ರ ಬರೆದು ಪ್ರಕರಣದ ದಾಖಲೆಗಳನ್ನು ಮೊದಲು ನೀಡುವಂತೆ ಕೋರಿದ್ದರು. ನನ್ನನ್ನು ಪರಿಚಯ ಮಾಡಿಕೊಳ್ಳಲು ಮತ್ತು ಸಮಂಜಸವಾದ ಅವಧಿಯೊಳಗೆ ಸೂಕ್ತವಾಗಿ ಉತ್ತರಿಸಲು ಅನುವು ಮಾಡಿಕೊಡಲು ವಿನಂತಿಸಿದ ದಾಖಲೆಗಳನ್ನು ಸಾಧ್ಯವಾದಷ್ಟು ಬೇಗ ಒದಗಿಸಬಹುದು. ದಾಖಲೆಗಳ ಸ್ವೀಕೃತಿಯ ನಂತರ ನನ್ನ ತನಿಖಾ ದಿನಾಂಕವನ್ನು ಹೈದರಾಬಾದ್‌ನಲ್ಲಿ ನಿಗದಿಪಡಿಸಬಹುದು ಎಂದು ಕವಿತಾ ಪತ್ರ ಬರೆದಿದ್ದರು.

ಇದನ್ನು ಓದಿ:ತೆಲಂಗಾಣದಲ್ಲಿ ತಾರಕಕ್ಕೇರಿದ ಬಿಜೆಪಿ- ಟಿಆರ್​ಎಸ್​ ಸಂಘರ್ಷ; ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಬಂಧನ

ಡಿಸೆಂಬರ್ 2 ರಂದು, ಮದ್ಯದ ಹಗರಣ ಪ್ರಕರಣದ ತನಿಖೆಯ ಸಮಯದಲ್ಲಿ ಕವಿತಾ ಅವರಿಗೆ ಸಂಬಂಧಿಸಿದ ದಾಖಲೆಯನ್ನು ನೀಡಿದ್ದಾರೆ. ಆದ್ದರಿಂದ ಅವರ ತನಿಖೆ ಅಗತ್ಯವಿದೆ ಎಂದು ಸಿಬಿಐ ಹೇಳಿದೆ. ನೋಟಿಸ್ ಪ್ರಕಾರ, ಸಿಬಿಐ ಅವರಿಗೆ ತನಿಖಾ ಸ್ಥಳಕ್ಕೆ ಹೈದರಾಬಾದ್ ಅಥವಾ ದೆಹಲಿಗೆ ಎರಡು ಆಯ್ಕೆಗಳನ್ನು ನೀಡಿದೆ.

ಚಾರ್ಜ್‌ಶೀಟ್‌ನಲ್ಲಿ ಎಎಪಿಯ ಸಂವಹನ ಮುಖ್ಯಸ್ಥ ಮತ್ತು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಆಪ್ತ ವಿಜಯ್ ನಾಯರ್ ಮತ್ತು ಹೈದರಾಬಾದ್ ಮೂಲದ ಉದ್ಯಮಿ ಅಭಿಷೇಕ್ ಬೋಯಿನ್‌ಪಲ್ಲಿ ಸೇರಿದಂತೆ ಏಳು ಆರೋಪಿಗಳನ್ನು ಹೆಸರಿಸಲಾಗಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ