ದೆಹಲಿಯ ಸಚಿವ ರಾಜ್‌ಕುಮಾರ್ ಆನಂದ್(Raaj Kumar Anand) ಮನೆ ಮೇಲೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ. ದೆಹಲಿ ಸರ್ಕಾರದ ಹೆಚ್ಚಿನ ಸಚಿವರ ಮೇಲೆ ಇಡಿ ತನ್ನ ಹಿಡಿತವನ್ನು ಬಿಗಿಗೊಳಿಸಿದೆ.ಇಡಿ ತಂಡ ದೆಹಲಿ ಸರ್ಕಾರದ ಸಮಾಜ ಕಲ್ಯಾಣ ಸಚಿವ ರಾಜ್‌ಕುಮಾರ್ ಆನಂದ್ ಅವರ ಮನೆಗೆ ತಲುಪಿದೆ. ಸಿವಿಲ್ ಲೈನ್ಸ್‌ನಲ್ಲಿರುವ ಸಚಿವರ ಅಧಿಕೃತ ನಿವಾಸದಲ್ಲಿ ಇಡಿ ಶೋಧ ಕಾರ್ಯ ನಡೆಯುತ್ತಿದೆ. ಮೂಲಗಳ ಪ್ರಕಾರ, ರಾಜ್‌ಕುಮಾರ್ ಆನಂದ್ ಅವರಿಗೆ ಸೇರಿದ 8 ರಿಂದ 9 ಸ್ಥಳಗಳಲ್ಲಿ ಹುಡುಕಾಟ ನಡೆಯುತ್ತಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸರ್ಕಾರದ ಸಮಾಜ ಕಲ್ಯಾಣ ಸಚಿವ ರಾಜ್‌ಕುಮಾರ್ ಆನಂದ್ ಅವರ ಮನೆ ಮೇಲೆ ದಾಳಿ ನಡೆದಿದೆ. ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ನಾಯಕರು, ಶಾಸಕರು ಮತ್ತು ಸಚಿವರ ಮೇಲೆ ಇಡಿ ನಿರಂತರವಾಗಿ ದಾಳಿ ನಡೆಸುತ್ತಿದೆ. ಮದ್ಯದ ಹಗರಣ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಕರೆಯಲಾಗಿದೆ.
ಮದ್ಯ ನೀತಿ ಹಗರಣದಲ್ಲಿ ಸಿಬಿಐನಿಂದ ಸುಮಾರು ಒಂಬತ್ತು ಗಂಟೆಗಳ ಕಾಲ ವಿಚಾರಣೆಗೆ ಒಳಗಾದ ಆರು ತಿಂಗಳ ನಂತರ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗುರುವಾರ ಜಾರಿ ನಿರ್ದೇಶನಾಲಯದ ಮುಂದೆ ಸಂಬಂಧಿತ ಪ್ರಕರಣದಲ್ಲಿ ಹಾಜರಾಗಲು ನಿರ್ಧರಿಸಿದ್ದಾರೆ.
ಮತ್ತಷ್ಟು ಓದಿ: ಬಂಗಲೆ ನವೀಕರಣದ ವಿವಾದ; ಸುಳ್ಳು ತನಿಖೆ ನಡೆಸಿದ್ದಕ್ಕಾಗಿ ಪ್ರಧಾನಿ ರಾಜೀನಾಮೆ ನೀಡುತ್ತಾರಾ?: ಕೇಜ್ರಿವಾಲ್
ಮುಖ್ಯಮಂತ್ರಿ ಜಾರಿ ನಿರ್ದೇಶನಾಲಯ (ಇಡಿ) ಮುಂದೆ ಹಾಜರಾಗುತ್ತಾರೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಎಎಪಿ) ಮಾಹಿತಿ ನೀಡಿದೆ.
ಈ ಪ್ರಕರಣದಲ್ಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಈ ವರ್ಷದ ಫೆಬ್ರವರಿಯಲ್ಲಿ ಸಿಬಿಐ ಬಂಧಿಸಿತ್ತು. ತಿಹಾರ್ ಜೈಲಿನಲ್ಲಿ ವಿಚಾರಣೆ ನಡೆಸಿದ ನಂತರ ಮಾರ್ಚ್ 9 ರಂದು ಸಿಬಿಐ ಎಫ್‌ಐಆರ್‌ನಿಂದ ಉಂಟಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಸಿಸೋಡಿಯಾ ಅವರನ್ನು ಬಂಧಿಸಿತು.
#WATCH | ED raid underway at the residence of Delhi Minister Raaj Kumar Anand in Civil Lines area. Searches started early morning today. Raids are underway at 9 premises linked to him. Details awaited pic.twitter.com/2Q0ZuFIjGo
— ANI (@ANI) November 2, 2023
ಈ ವರ್ಷದ ಆರಂಭದಲ್ಲಿ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ರಾಜೀನಾಮೆ ನೀಡಿದ ನಂತರ ಕಾರ್ಮಿಕ ಸಚಿವ ರಾಜ್ ಕುಮಾರ್ ಆನಂದ್ ಅವರಿಗೆ ಶಿಕ್ಷಣ ಮತ್ತು ಆರೋಗ್ಯ ಸಚಿವಾಲಯಗಳನ್ನು ಹಂಚಲಾಯಿತು. ನಂತರ ಸೌರಭ್ ಭಾರದ್ವಾಜ್ ಗೆ ಆರೋಗ್ಯ, ಅತಿಶಿಗೆ ಶಿಕ್ಷಣ ಇಲಾಖೆ ನೀಡಲಾಯಿತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ